Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:7 - ಕನ್ನಡ ಸತ್ಯವೇದವು C.L. Bible (BSI)

7 ನೀನು ಒಳಿತನ್ನು ಮಾಡಿದ್ದರೆ ತಲೆ ಎತ್ತುತ್ತಿದ್ದೆ; ಕೆಡುಕನ್ನು ಮಾಡಿದ್ದರಿಂದ ಪಾಪವು ಹೊಸ್ತಿಲಲ್ಲಿ ಹೊಂಚುಹಾಕುತ್ತಿದೆ; ಅದು ನಿನ್ನನ್ನು ಬಯಸುತ್ತಿದೆ. ನೀನು ಅದನ್ನು ಜಯಿಸಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಒಳ್ಳೇ ಕೆಲಸ ಮಾಡಿದರೆ ನಿನ್ನ ತಲೆ ಎತ್ತಲ್ಪಡುವದಲ್ಲವೇ; ಅಲ್ಲದಿದ್ದರೆ ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವದು; ಆದರೂ ನೀನು ಅದನ್ನು ವಶಮಾಡಿಕೊಳ್ಳಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ಒಳ್ಳೆಯ ಕಾರ್ಯಗಳನ್ನು ಮಾಡಿದರೆ ನಾನು ನಿನ್ನನ್ನು ಸ್ವೀಕರಿಸಿಕೊಳ್ಳುವೆನು. ಆದರೆ ನೀನು ಕೆಟ್ಟಕಾರ್ಯಗಳನ್ನು ಮಾಡಿದರೆ, ಆ ಪಾಪವು ನಿನ್ನೊಂದಿಗಿರುತ್ತದೆ. ನಿನ್ನ ಪಾಪವು ನಿನ್ನನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಇಷ್ಟಪಡುತ್ತದೆ. ಆದರೆ ನೀನು ಆ ಪಾಪವನ್ನು ನಿನ್ನ ಹಿಡಿತದಲ್ಲಿಟ್ಟುಕೊಳ್ಳಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀನು ಒಳ್ಳೆಯದನ್ನು ಮಾಡಿದರೆ, ನೀನು ಸ್ವೀಕಾರವಾಗುತ್ತಿದ್ದೆ ಅಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ, ಬಾಗಿಲಲ್ಲಿ ಪಾಪವು ಹೊಂಚಿಕೊಂಡಿರುವುದು ಮತ್ತು ಅದು ನಿನ್ನನ್ನು ನುಂಗಲು ಬಯಸುತ್ತದೆ. ಆದರೂ ನೀನು ಅದರ ಮೇಲೆ ಅಧಿಕಾರ ಮಾಡಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:7
33 ತಿಳಿವುಗಳ ಹೋಲಿಕೆ  

ದುರಿಚ್ಛೆ ಗರ್ಭಧರಿಸಿ ಪಾಪಕ್ಕೆ ಜನ್ಮವೀಯುತ್ತದೆ; ಪಾಪವು ಪೂರ್ತಿಯಾಗಿ ಬೆಳೆದು ಮರಣವನ್ನು ಹಡೆಯುತ್ತದೆ.


ವಿಶ್ವಾಸವಿದ್ದುದರಿಂದಲೇ ಹೇಬೆಲನು ಕಾಯಿನನಿಗಿಂತ ಉತ್ತಮವಾದ ಬಲಿಯನ್ನು ದೇವರಿಗೆ ಸಮರ್ಪಿಸಿದನು. ವಿಶ್ವಾಸದಿಂದಲೇ ತಾನು ಸತ್ಪುರುಷನೆಂದು ಸನ್ಮಾನಿತನಾದನು. ಅವನ ಕಾಣಿಕೆ ತಮಗೆ ಸ್ವೀಕೃತವಾಯಿತೆಂದು ದೇವರೇ ಸಾದರಪಡಿಸಿದರು. ಅವನು ಮೃತನಾಗಿದ್ದರೂ ಅವನ ವಿಶ್ವಾಸದ ಮೂಲಕ ಇಂದಿಗೂ ಮಾತನಾಡುತ್ತಿದ್ದಾನೆ.


ಯಾರ ಕೈಕೆಳಗೆ ಗುಲಾಮರಾಗಿರಲು ನಿಮ್ಮನ್ನೇ ಒಪ್ಪಿಸಿಕೊಳ್ಳುತ್ತೀರೋ ಅವರಿಗೆ ನೀವು ಶರಣಾಗುತ್ತೀರಿ. ನೀವು ಪಾಪಕ್ಕೆ ಗುಲಾಮರಾದರೆ ಮರಣವೇ ನಿಮಗೆ ಗತಿ; ದೇವರಿಗೆ ಶರಣಾದರೆ ಸತ್ಸಂಬಂಧವೇ ಅದರ ಸತ್ಪರಿಣಾಮ.


ನೀವು ಹಾಗೇನಾದರೂ ಮಾಡದೆ ಹೋದರೆ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರಾಗುವಿರಿ. ನಿಮ್ಮನ್ನು ದಂಡಿಸುವ ತನಕ ನಿಮ್ಮ ಪಾಪ ನಿಮ್ಮ ಬೆನ್ನತ್ತಿಬರುವುದೆಂದು ತಿಳಿದಿರಿ.


ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ಅಯ್ಯೋ, ಎಷ್ಟು ಬೇಸರವಾದುದು ಈ ಸೇವೆ’ ಎಂದುಕೊಂಡು ನೀವು ಅದನ್ನು ತಾತ್ಸಾರಮಾಡುತ್ತೀರಿ. “ಕಳವಿನ ಪಶುವನ್ನು, ರೋಗ ಹಿಡಿದ, ಊನವಾದ ಪ್ರಾಣಿಯನ್ನು ಅರ್ಪಿಸುತ್ತೀರಿ. ಇಂಥ ಕಾಣಿಕೆಯನ್ನು ನಿಮ್ಮ ಕೈಗಳಿಂದ ನಾನು ಸ್ವೀಕರಿಸಲೋ?’ ಎಂದು ಕೇಳುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ದುಷ್ಟರು ಅರ್ಪಿಸುವ ಬಲಿಯಜ್ಞ ಅಸಹ್ಯ; ದುರಾಲೋಚನೆಯಿಂದ ಅರ್ಪಿಸುವುದು ಮತ್ತೂ ಅಸಹ್ಯ.


“ನನ್ನ ಬಲಿಪೀಠದ ಮೇಲೆ ಯಾರೂ ಜ್ಯೋತಿಯನ್ನು ವ್ಯರ್ಥವಾಗಿ ಬೆಳಗಿಸದಂತೆ ಮಹಾದೇವಾಲಯದ ಬಾಗಿಲನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು. ನಾನು ನಿಮ್ಮನ್ನು ಮೆಚ್ಚಿಕೊಂಡಿಲ್ಲ. ನಿಮ್ಮ ಕೈಯಿಂದ ಕಾಣಿಕೆಗಳನ್ನು ನಾನು ಸ್ವೀಕರಿಸುವುದಿಲ್ಲ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಕುರುಡಾದ ಪಶುಗಳನ್ನು ಬಲಿಯರ್ಪಿಸುವುದು ತಪ್ಪಲ್ಲವೆ? ಊನವಾದ ರೋಗದ ಪಶುಗಳನ್ನು ಅರ್ಪಿಸುವುದು ದೋಷವಲ್ಲವೇ? ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ಇಂಥದ್ದನ್ನು ನಿಮ್ಮ ರಾಜಪಾಲನಿಗೆ ಕಾಣಿಕೆಯಾಗಿ ಕೊಟ್ಟರೆ ಅವನು ನಿಮ್ಮನ್ನು ಮೆಚ್ಚುವನೋ ಅಥವಾ ನಿಮ್ಮ ಕೋರಿಕೆಯನ್ನು ನೆರವೇರಿಸುವನೋ?’


ದೇವರಿಗೆ ಭಯಪಟ್ಟು ಸತ್ಪುರುಷನಾಗಿ ಬಾಳುವವನು ಯಾವ ಜನಾಂಗದವನೇ ಆಗಿರಲಿ, ಅವನು ಅವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.


ಹೀಗೆ ಕ್ರಿಸ್ತಯೇಸುವಿಗೆ ಸೇವೆಮಾಡುವವನು, ದೇವರಿಂದ ಮೆಚ್ಚುಗೆಯನ್ನು ಮತ್ತು ಮನುಷ್ಯರಿಂದ ಮಾನ್ಯತೆಯನ್ನು ಪಡೆಯುತ್ತಾನೆ.


ಅವರು ಶೆಬದ ಧೂಪವನ್ನಾಗಲಿ, ದೂರದೇಶದ ಒಳ್ಳೆಯ ಸುಗಂಧವನ್ನಾಗಲಿ ತಂದು ನನಗೆ ಅರ್ಪಿಸುವುದರಿಂದ ನನಗೆ ಏನೂ ಪ್ರಯೋಜನವಿಲ್ಲ. ಅವರು ಒಪ್ಪಿಸುವ ದಹನಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಯಜ್ಞಬಲಿಗಳೂ ನನಗೆ ಇಷ್ಟವಿಲ್ಲ.


ದುಷ್ಟನಿಗೆ ಪಕ್ಷಪಾತ ತೋರುವುದು ಸಲ್ಲ; ಸಜ್ಜನನಿಗೆ ನ್ಯಾಯ ತಪ್ಪಿಸುವುದು ಸರಿಯಲ್ಲ.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಈ ವರದಿಂದಲೇ ಯೆಹೂದ್ಯರಲ್ಲದ ಜನರಿಗೆ ನಾನು ಕ್ರಿಸ್ತಯೇಸುವಿನ ದಾಸನಾದೆ. ಯೆಹೂದ್ಯರಲ್ಲದವರು ಪವಿತ್ರಾತ್ಮರ ಮೂಲಕ ಪರಿಶುದ್ಧರಾಗಿ, ದೇವರಿಗೆ ಸಮರ್ಪಕ ಕಾಣಿಕೆಯಾಗುವಂತೆ ದೇವರ ಶುಭಸಂದೇಶವನ್ನು ಸಾರುವುದೇ ನನ್ನ ಪೂಜ್ಯಸೇವೆ, ಅದುವೇ ನನ್ನ ಯಾಜಕಸೇವೆ.


ಆದುದರಿಂದ ನೀವು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸ ಯೋಬನ ಬಳಿಗೆ ಬನ್ನಿರಿ; ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ. ನನ್ನ ದಾಸ ಯೋಬ ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಆಲಿಸಿ ನಿಮ್ಮ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ವಿಧಿಸುವುದಿಲ್ಲ. ನನ್ನ ದಾಸ ಯೋಬನು ನನ್ನ ವಿಷಯದಲ್ಲಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ,” ಎಂದರು.


ಬಳಿಕ ಆ ಮಹಿಳೆಗೆ: “ಹೆಚ್ಚಿಸುವೆನು ಪ್ರಸವಕಾಲದ ನಿನ್ನ ವೇದನೆಯನ್ನು ಹೆರುವೆ ನೀನು ಸಂಕಷ್ಟದಿಂದಲೇ ಮಕ್ಕಳನ್ನು. ಆದರೂ ನಿನಗಿರುವುದು ಗಂಡನ ಬಯಕೆ ಒಳಗಾಗುವೆ ನೀನು ಆತನ ಒಡೆತನಕ್ಕೆ."


ವಿಧವೆಯಾದವಳಿಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ, ಆ ಮಕ್ಕಳು ಮೊತ್ತಮೊದಲು ತಮ್ಮ ಸ್ವಂತ ಕುಟುಂಬಕ್ಕೆ ಸಹಾಯಮಾಡಬೇಕಾದುದು ಅವರ ಧಾರ್ಮಿಕ ಕರ್ತವ್ಯವೆಂಬುದು ಅವರಿಗೆ ತಿಳಿದಿರಲಿ. ಹೀಗೆ ಅವರು ತಮ್ಮ ತಂದೆತಾಯಿಯರಿಗೆ ಪ್ರತ್ಯುಪಕಾರಮಾಡಿದಂತಾಗುತ್ತದೆ. ಅಲ್ಲದೆ, ಇದು ದೇವರ ದೃಷ್ಟಿಯಲ್ಲಿ ಮೆಚ್ಚುಗೆ ಪಡೆದುದು.


ಇವುಗಳಲ್ಲಿ ಅರಸರ ಸೇವಕನಾದ ನಾನು ಅರಸರಿಗೆ ಅರ್ಪಿಸುತ್ತೇನೆ. ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಪ್ರಸನ್ನರಾಗಲಿ!” ಎಂದು ಹೇಳಿದನು.


ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.


ಅದಕ್ಕಾತನು, “ಸರಿ, ಹಾಗೆಯೇ ಆಗಲಿ, ಈ ನಿನ್ನ ಕೋರಿಕೆಯನ್ನೂ ನೆರವೇರಿಸುತ್ತೇನೆ, ನೀನು ಹೇಳಿದ ಆ ಊರನ್ನು ಹಾಳುಮಾಡುವುದಿಲ್ಲ.


ಆ ದಿನಗಳು ನನ್ನ ಜೀವಮಾನದ ಸುಗ್ಗಿಕಾಲವಾಗಿತ್ತು ದೇವರ ಪ್ರೀತಿ ನನ್ನ ಗುಡಾರವನ್ನು ಆವರಿಸಿತ್ತು.


ಇದಲ್ಲದೆ, ಇವನು ಸಿರಿಯಾದವರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವುದಕ್ಕಾಗಿ ಅಹಾಬನ ಮಗ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು.


ಆದ್ದರಿಂದ ದೈಹಿಕ ದುರಿಚ್ಛೆಗಳಿಗೆ ದಾಸರಾಗಿ ನೀವು ನಡೆಯದಂತೆ, ನಿಮ್ಮ ನಶ್ವರ ಶರೀರಗಳ ಮೇಲೆ ಪಾಪವು ತನ್ನ ದಬ್ಬಾಳಿಕೆಯನ್ನು ಇನ್ನೆಂದಿಗೂ ನಡೆಸದಿರಲಿ.


ನಿನ್ನ ಕೈಯಿಂದ ದೂರವಿರಲಿ ಅಕ್ರಮ ನಿನ್ನ ಗುಡಾರದಲಿ ನೆಲಸದಿರಲಿ ಅನ್ಯಾಯ.


ಆಗ ಮಾತ್ರ ನೀನು ತಲೆಯೆತ್ತಬಲ್ಲೆ ಗೌರವದಿಂದ ಸ್ಥಿರಚಿತ್ತನಾಗಿರಬಲ್ಲೆ ನಿರ್ಭಯದಿಂದ.


ನೀನು ಉತ್ತರ ದಿಕ್ಕಿಗೆ ಹೋಗಿ ಆ ಇಸ್ರಯೇಲಿಗೆ ಈ ಸಂದೇಶವನ್ನು ಸಾರು - ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ; ಭ್ರಷ್ಟಳಾದ ಇಸ್ರಯೇಲೇ, ಹಿಂದಿರುಗು; ನಾನು ಅಷ್ಟು ಕೋಪಮುಖದಿಂದ ನಿನ್ನನ್ನು ನೋಡುವುದಿಲ್ಲ. ನಾನು ಕರುಣಾಮೂರ್ತಿ, ನಿತ್ಯಕೋಪಿಯಲ್ಲ.


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು