Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:8 - ಕನ್ನಡ ಸತ್ಯವೇದವು C.L. Bible (BSI)

8 ಬಳಿಕ ಕಾಯಿನನು ತಮ್ಮ ಹೇಬೆಲನಿಗೆ, “ಹೊಲಕ್ಕೆ ಹೋಗೋಣ ಬಾ”, ಎಂದು ಕರೆದನು. ಅವರಿಬ್ಬರೂ ಅಲ್ಲಿಗೆ ಬಂದಾಗ ಕಾಯಿನನು ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನ ಸಂಗಡ ಮಾತನಾಡಿದನು. ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ - ಅಡವಿಗೆ ಹೋಗೋಣ ಬಾ ಎಂದನು. ಅಡವಿಗೆ ಬಂದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು. ಅಂತೆಯೇ ಕಾಯಿನನು ಮತ್ತು ಹೇಬೆಲನು ಹೊಲಕ್ಕೆ ಹೋದರು. ಅಲ್ಲಿ ಕಾಯಿನನು ತನ್ನ ತಮ್ಮನ ಮೇಲೆರಗಿ ಅವನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅನಂತರ ಕಾಯಿನನು, “ಅಡವಿಗೆ ಹೋಗೋಣ ಬಾ,” ಎಂದು ತನ್ನ ತಮ್ಮನಿಗೆ ಹೇಳಿದನು. ಅವರು ಅಲ್ಲಿ ಬಂದಾಗ ಕಾಯಿನನು ತನ್ನ ತಮ್ಮ ಹೇಬೆಲನ ಮೇಲೆ ದಾಳಿಮಾಡಿ, ಅವನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:8
23 ತಿಳಿವುಗಳ ಹೋಲಿಕೆ  

ಇವರ ದುರ್ಗತಿ ಭಯಂಕರವಾದುದು! ಇವರು ಕಾಯಿನನ ಮಾರ್ಗವನ್ನು ಹಿಡಿದಿದ್ದಾರೆ; ಲಾಭಕೋರರಾಗಿ ಬಿಳಾಮನ ಭ್ರಾಂತಿಯಲ್ಲಿ ಬೀಳಹೋಗುತ್ತಾರೆ; ಕೋರಹನಂತೆ ದಂಗೆ ಎದ್ದು ವಿನಾಶವಾಗುತ್ತಿದ್ದಾರೆ.


ಹೀಗೆ, ಪುನೀತ ಹೇಬೆಲನ ರಕ್ತ ಮೊದಲ್ಗೊಂಡು ಬಲಿಪೀಠಕ್ಕೂ ಗರ್ಭಗುಡಿಗೂ ನಡುವೆ ನೀವು ಕೊಲೆಮಾಡಿದ ಬರಕೀಯನ ಮಗ ಜಕರೀಯನ ರಕ್ತದವರೆಗೆ ಪೃಥ್ವಿಯಲ್ಲಿ ಸುರಿಸಲಾದ ಎಲ್ಲಾ ಸತ್ಪುರುಷರ ರಕ್ತದ ಹೊಣೆ ನಿಮ್ಮದೇ.


ಮಗನು ತಂದೆಯನ್ನು ತುಚ್ಛೀಕರಿಸುವನು; ಮಗಳು ತಾಯಿಗೆ ಎದುರಾಗಿರುವಳು; ಸೊಸೆ ಅತ್ತೆಯೊಂದಿಗೆ ಜಗಳವಾಡುವಳು. ಹೀಗೆ ಮನುಷ್ಯನಿಗೆ ತನ್ನ ಮನೆಯವರೇ ವೈರಿಗಳಾಗುವರು.


ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿವಸ ಇವರು ಇಬ್ಬರೂ ಹೊಲದಲ್ಲಿ ಜಗಳವಾಡಿದರು. ಅಲ್ಲಿ ಬಿಡಿಸುವವರಾರೂ ಇರಲಿಲ್ಲ. ಆದುದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು.


ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾಯಿತು. ಅವರಲ್ಲಿ ಸನ್ಬಲ್ಲಟ್ ಮತ್ತು ಗೆಷನರು ನನಗೆ, “ಓನೋ ಕಣಿವೆಯ ಹಕ್ಕೆಫಿರೀಮಿನಲ್ಲಿ ಒಬ್ಬರನೊಬ್ಬರು ಎದುರುಗೊಳ್ಳೋಣ ಬಾ,” ಎಂದು ಹೇಳಿ ಕಳುಹಿಸಿದರು. ಅವರು ನನಗೆ ಕೇಡು ಬಗೆಯುವವರು ಎಂದು ತಿಳಿಯಿತು.


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತಸಂಭಾಷಣೆಗಾಗಿಯೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ, ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದುಕೊಂದನು.


ಹೊಸ ಒಡಂಬಡಿಕೆಯ ಮಧ್ಯಸ್ಥರಾದ ಯೇಸುಸ್ವಾಮಿಯ ಬಳಿಗೆ, ಹೇಬೆಲನ ರಕ್ತಕ್ಕಿಂತಲೂ ಅಮೋಘವಾಗಿ ಮೊರೆಯಿಡುವ ಪ್ರೋಕ್ಷಣಾರಕ್ತದ ಬಳಿಗೆ ನೀವು ಬಂದಿದ್ದೀರಿ.


ಅವನ ಬಾಯಿ ಬೆಣ್ಣೆಗಿಂತ ನಯ, ಆದರೆ ಹೃದಯ ಕಲಹಭರಿತ I ನುಡಿ ಎಣ್ಣೆಗಿಂತ ನುಣುಪು, ಆದರೆ ಬಿಚ್ಚುಗತ್ತಿಗಿಂತ ಹರಿತ II


ಅವನ ಕೀಳು ಬಾಯಿಯ ತುಂಬ ಕೇಡು ಕಪಟ I ಸನ್ಮತಿ ಸತ್ಕಾರ್ಯಗಳನ್ನು ಬಿಟ್ಟೇಬಿಟ್ಟ II


ಆಗ ಮಾತ್ರ ನೀನು ತಲೆಯೆತ್ತಬಲ್ಲೆ ಗೌರವದಿಂದ ಸ್ಥಿರಚಿತ್ತನಾಗಿರಬಲ್ಲೆ ನಿರ್ಭಯದಿಂದ.


ಯೇಸು, “ಯೂದಾ, ಮುದ್ದಿಟ್ಟು ನರಪುತ್ರನನ್ನು ತೋರಿಸಿಕೊಡುವೆಯಾ?” ಎಂದರು.


ದೇವಾ, ದುಷ್ಟರನು ಸಂಹರಿಸಿಬಿಟ್ಟರೆ ಎಷ್ಟೋ ಉಚಿತ I ಕೊಲೆಪಾತಕರು ನನ್ನಿಂದ ತೊಲಗಿಹೋದರೆ ಎಷ್ಟೋ ಹಿತ II


ವಿಶ್ವಾಸವಿದ್ದುದರಿಂದಲೇ ಹೇಬೆಲನು ಕಾಯಿನನಿಗಿಂತ ಉತ್ತಮವಾದ ಬಲಿಯನ್ನು ದೇವರಿಗೆ ಸಮರ್ಪಿಸಿದನು. ವಿಶ್ವಾಸದಿಂದಲೇ ತಾನು ಸತ್ಪುರುಷನೆಂದು ಸನ್ಮಾನಿತನಾದನು. ಅವನ ಕಾಣಿಕೆ ತಮಗೆ ಸ್ವೀಕೃತವಾಯಿತೆಂದು ದೇವರೇ ಸಾದರಪಡಿಸಿದರು. ಅವನು ಮೃತನಾಗಿದ್ದರೂ ಅವನ ವಿಶ್ವಾಸದ ಮೂಲಕ ಇಂದಿಗೂ ಮಾತನಾಡುತ್ತಿದ್ದಾನೆ.


ಆದಾಮ್ ಮತ್ತು ಅವನ ಹೆಂಡತಿಗೆ ಮತ್ತೊಂದು ಗಂಡುಮಗು ಆಯಿತು. ಅಕೆ, “ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತಾನವನ್ನು ಅನುಗ್ರಹಿಸಿದ್ದಾರೆ,” ಎಂದುಕೊಂಡು ಅವನಿಗೆ “ಸೇತ್" ಎಂದು ನಾಮಕರಣ ಮಾಡಿದಳು.


ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ನೂಕುವುದರಿಂದಾಗಲಿ, ಸಮಯ ನೋಡಿ ಅವನ ಮೇಲೆ ಏನನ್ನಾದರೂ ಎಸೆಯುವುದರಿಂದಾಗಲಿ,


ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು, ತನ್ನ ಆಳ್ವಿಕೆಯನ್ನು ಸ್ಥಿರಗೊಳಿಸಿಕೊಂಡ ಮೇಲೆ, ತನ್ನ ಎಲ್ಲ ಸಹೋದರರನ್ನೂ ಕೆಲವು ಮಂದಿ ಇಸ್ರಯೇಲ್ ಪ್ರಮುಖರನ್ನೂ ಕತ್ತಿಯಿಂದ ಸಂಹರಿಸಿದನು.


ಸುಳ್ಳುಸಾಕ್ಷಿ, ನರಹತ್ಯೆ, ಕಳ್ಳತನ, ವ್ಯಭಿಚಾರ ಇವೆಲ್ಲ ತುಂಬಿಕೊಂಡಿವೆ; ದೊಂಬಿದಾಂಧಲೆಗಳು ನಡೆಯುತ್ತಿವೆ, ನಾಡೆಲ್ಲ ರಕ್ತಮಯವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು