Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:1 - ಕನ್ನಡ ಸತ್ಯವೇದವು C.L. Bible (BSI)

1 ಈ ಘಟನೆಗಳಾದ ಬಳಿಕ ಈಜಿಪ್ಟಿನ ಅರಸನಾದ ಫರೋಹನ ಮುಖ್ಯಪಾನದಾಯಕ ಮತ್ತು ಮುಖ್ಯ ಅಡಿಗೆಭಟ್ಟ ಯಾವುದೋ ವಿಷಯದಲ್ಲಿ ತಮ್ಮ ದಣಿಗೆ ದ್ರೋಹಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಈ ಸಂಗತಿಗಳಾದ ಮೇಲೆ ಐಗುಪ್ತ ದೇಶದ ಅರಸನಾದ ಫರೋಹನಿಗೆ ಪಾನಗಳನ್ನು ಕೊಡುವವನೂ, ಆಹಾರಗಳನ್ನು ಮಾಡಿ ಕೊಡುವವನೂ ತಮ್ಮ ಅರಸನಿಗೆ ವಿರೋಧವಾಗಿ ಅಪರಾಧ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಈ ಸಂಗತಿಗಳಾದ ಮೇಲೆ ಐಗುಪ್ತ ದೇಶದ ಅರಸನಾದ ಫರೋಹನಿಗೆ ಪಾನಕ ಕೊಡುವವನೂ ಭಕ್ಷ್ಯಗಳನ್ನು ಮಾಡಿಕೊಡುವವನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತರುವಾಯ ಫರೋಹನ ಇಬ್ಬರು ಸೇವಕರು ಫರೋಹನಿಗೆ ಯಾವುದೋ ತಪ್ಪುಮಾಡಿದರು. ಈ ಇಬ್ಬರು ಸೇವಕರುಗಳಲ್ಲಿ ಒಬ್ಬನು ಭಕ್ಷ್ಯಗಾರ ಮತ್ತೊಬ್ಬನು ಪಾನದಾಯಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕೆಲವು ಸಮಯದ ನಂತರ ಈಜಿಪ್ಟಿನ ಅರಸನ ಪಾನದಾಯಕನೂ, ರೊಟ್ಟಿಗಾರನೂ ತಮ್ಮ ಅರಸನಿಗೆ ಎದುರಾಗಿ ಅಪರಾಧ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:1
10 ತಿಳಿವುಗಳ ಹೋಲಿಕೆ  

ಇನ್ನು ಮೂರು ದಿನಗಳೊಳಗೆ ನೀನು ತಲೆಯೆತ್ತುವಂತೆ ಫರೋಹನು ಮಾಡುವನು; ನಿನ್ನನ್ನು ಮರಳಿ ನೌಕರಿಗೆ ಸೇರಿಸಿಕೊಳ್ಳುವನು; ನೀನು ಮುಂದಿನಂತೆಯೇ ಫರೋಹನಿಗೆ ಪಾನಸೇವಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುವೆ.


ಆ ರಾತ್ರಿ ಅರಸನಿಗೆ ನಿದ್ದೆಯೇ ಬರಲಿಲ್ಲ. ಆದ್ದರಿಂದ, ಸ್ಮರಿಸತಕ್ಕ ಪೂರ್ವ ಘಟನೆಗಳನ್ನು ಬರೆದಿಟ್ಟಿದ್ದ ಗ್ರಂಥವನ್ನು ತರಿಸಿ, ಅದನ್ನು ಪಾರಾಯಣ ಮಾಡಿಸುತ್ತಿದ್ದಾಗ,


ಸ್ವಾಮೀ, ಕೃಪೆಮಾಡಿ; ನಿಮ್ಮ ದಾಸನಾದ ನನ್ನ ಪ್ರಾರ್ಥನೆಗೂ ನಿಮ್ಮ ನಾಮಸ್ಮರಣೆಯಲ್ಲಿ ಆನಂದಿಸುವ ನಿಮ್ಮ ಭಕ್ತರ ಪ್ರಾರ್ಥನೆಗೂ ಕಿವಿಗೊಡಿ. ನಿಮ್ಮ ದಾಸನಾದ ನಾನು ಈ ದಿನ ಈ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಿ,” ಎಂದು ಬೇಡಿಕೊಂಡೆನು.


ಫರೋಹನು ಆ ಇಬ್ಬರು ನೌಕರರ ಮೇಲೆ, ಅಂದರೆ ಪಾನಸೇವಕರಲ್ಲಿ ಮುಖ್ಯಸ್ಥನ ಮೇಲೆಯೂ ಅಡಿಗೆಭಟ್ಟರ ಮುಖ್ಯಸ್ಥನ ಮೇಲೆಯೂ ಕೋಪಗೊಂಡು,


ಕೆಲವು ಕಾಲವದ ಮೇಲೆ, ಆ ಇಬ್ಬರು ನೌಕರರಿಗೂ ಅಂದರೆ, ಈಜಿಪ್ಟಿನ ಅರಸ ಸೆರೆಗೆ ಹಾಕಿಸಿದ್ದ ಪಾನಸೇವಕನಿಗೂ ಅಡಿಗೆಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರ ಕನಸುಗಳಿಗೆ ಬೇರೆಬೇರೆ ಅರ್ಥವಿತ್ತು.


ಫರೋಹನ ಪಾನಪಾತ್ರೆ ನನ್ನ ಕೈಯಲ್ಲಿತ್ತು. ನಾನು ಆ ಗೊಂಚಲುಗಳನ್ನು ಕೊಯ್ದು ಪಾತ್ರೆಯಲ್ಲಿ ಹಿಂಡಿ ಆ ಪಾತ್ರೆಯನ್ನು ಫರೋಹನ ಕೈಗೆ ಒಪ್ಪಿಸಿದೆ,” ಎಂದು ಹೇಳಿದ.


ಜೋಸೆಫನು ಹೇಳಿದ ಅರ್ಥ ಶುಭಕರ ಆದುದೆಂದು ತಿಳಿದ ಆ ಮುಖ್ಯ ಅಡಿಗೆಭಟ್ಟ ಅವನಿಗೆ, “ನಾನು ಕಂಡ ಕನಸನ್ನು ಹೇಳುತ್ತೇನೆ, ಕೇಳು: ಸೊಗಸಾದ ರೊಟ್ಟಿ ಪದಾರ್ಥಗಳು ತುಂಬಿದ್ದ ಮೂರು ಪುಟ್ಟಿಗಳು ನನ್ನ ತಲೆಯ ಮೇಲೆ ಇದ್ದವು.


ಆಗ ಪಾನಸೇವಕರಲ್ಲಿ ಮುಖ್ಯಸ್ಥನು ಫರೋಹನಿಗೆ, “ಒಡೆಯಾ, ಈ ದಿನತಾನೆ ನನ್ನ ನೆನಪಿಗೆ ಬರುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು