Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:21 - ಕನ್ನಡ ಸತ್ಯವೇದವು C.L. Bible (BSI)

21 ಪಾನಸೇವಕರ ಮುಖ್ಯಸ್ಥನನ್ನು ಪುನಃ ಅವನ ನೌಕರಿಗೆ ಏರಿಸಿದ; ಅವನು ಪಾನಪಾತ್ರೆಯನ್ನು ಫರೋಹನ ಕೈಗೆ ಒಪ್ಪಿಸುವಂಥವನಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪಾನದಾಯಕರ ಮುಖ್ಯಸ್ಥನನ್ನು ಪುನಃ ಅವನ ಉದ್ಯೋಗಕ್ಕೆ ನೇಮಿಸಿದನು. ಅವನು ಪಾನ ಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಪಾನದಾಯಕರ ಮುಖ್ಯಸ್ಥನನ್ನು ತಿರಿಗಿ ಅವನ ಉದ್ಯೋಗಕ್ಕೆ ನೇವಿುಸಿದನು; ಅವನು ಪಾನಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಫರೋಹನು ಪಾನದಾಯಕನನ್ನು ಮತ್ತೆ ಅದೇ ಕೆಲಸಕ್ಕೆ ನೇಮಿಸಿದನು; ಅವನು ಪಾನಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಮುಖ್ಯ ಪಾನದಾಯಕನನ್ನು ತಿರುಗಿ ಉದ್ಯೋಗದಲ್ಲಿ ಇರಿಸಿದ್ದರಿಂದ, ಮತ್ತೆ ಅವನು ಫರೋಹನ ಕೈಗೆ ಪಾನಪಾತ್ರೆಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:21
6 ತಿಳಿವುಗಳ ಹೋಲಿಕೆ  

ಇನ್ನು ಮೂರು ದಿನಗಳೊಳಗೆ ನೀನು ತಲೆಯೆತ್ತುವಂತೆ ಫರೋಹನು ಮಾಡುವನು; ನಿನ್ನನ್ನು ಮರಳಿ ನೌಕರಿಗೆ ಸೇರಿಸಿಕೊಳ್ಳುವನು; ನೀನು ಮುಂದಿನಂತೆಯೇ ಫರೋಹನಿಗೆ ಪಾನಸೇವಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುವೆ.


ನಾನು ರಾಜನ ಪಾನಸೇವಕನಾಗಿದ್ದೆ. ಅರ್ತಷಸ್ತರಾಜನ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ, ರಾಜನು ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ, ದ್ರಾಕ್ಷಾರಸವನ್ನು ತಂದುಕೊಟ್ಟೆ. ನಾನು ಅವನ ಸನ್ನಿಧಿಯಲ್ಲಿ ಹಿಂದೆ ಎಂದೂ ಖಿನ್ನನಾಗಿರಲಿಲ್ಲ.


ಫರೋಹನು ಆ ಇಬ್ಬರು ನೌಕರರ ಮೇಲೆ, ಅಂದರೆ ಪಾನಸೇವಕರಲ್ಲಿ ಮುಖ್ಯಸ್ಥನ ಮೇಲೆಯೂ ಅಡಿಗೆಭಟ್ಟರ ಮುಖ್ಯಸ್ಥನ ಮೇಲೆಯೂ ಕೋಪಗೊಂಡು,


ಅದು ಮಾತ್ರವಲ್ಲ, ಅವನು ಹೇಳಿದ ಪ್ರಕಾರವೇ ಆಯಿತು. ನನಗೆ ನೌಕರಿ ಮತ್ತೆ ದೊರಕಿತು. ಆ ಮುಖ್ಯ ಅಡಿಗೆಭಟ್ಟನನ್ನೋ ನೇಣುಹಾಕಲಾಯಿತು,’ ಎಂದು ಸನ್ನಿಧಿಯಲ್ಲಿ ಅರಿಕೆಮಾಡಿದ.


ಸ್ವಾಮೀ, ಕೃಪೆಮಾಡಿ; ನಿಮ್ಮ ದಾಸನಾದ ನನ್ನ ಪ್ರಾರ್ಥನೆಗೂ ನಿಮ್ಮ ನಾಮಸ್ಮರಣೆಯಲ್ಲಿ ಆನಂದಿಸುವ ನಿಮ್ಮ ಭಕ್ತರ ಪ್ರಾರ್ಥನೆಗೂ ಕಿವಿಗೊಡಿ. ನಿಮ್ಮ ದಾಸನಾದ ನಾನು ಈ ದಿನ ಈ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಿ,” ಎಂದು ಬೇಡಿಕೊಂಡೆನು.


ಕ್ರಮೇಣ ಕೈಗೂಡಿತು ಜೋಸೆಫನು ನುಡಿದದ್ದು I ಪ್ರಭುವಿನ ವಾಣಿ ಕಂಡುಬಂದಿತು ಸತ್ಯವೆಂದು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು