ಆದಿಕಾಂಡ 40:22 - ಕನ್ನಡ ಸತ್ಯವೇದವು C.L. Bible (BSI)22 ಆದರೆ ಮುಖ್ಯ ಅಡಿಗೆಭಟ್ಟನನ್ನು ನೇಣು ಹಾಕಿಸಿದ. ಹೀಗೆ ಜೋಸೆಫನು ಹೇಳಿದ ಅರ್ಥ ಕಾರ್ಯಗತವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದರೆ ಮುಖ್ಯ ಅಡಿಗೆಭಟ್ಟನನ್ನು ಫರೋಹನು ಗಲ್ಲಿಗೆ ಹಾಕಿಸಿದನು. ಹೀಗೆ ಯೋಸೇಫನು ಹೇಳಿದಂತೆಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದರೆ ಮುಖ್ಯ ಭಕ್ಷ್ಯಕಾರನನ್ನು ಫರೋಹನು ಗಲ್ಲಿಗೆ ಹಾಕಿಸಿದನು. ಹೀಗೆ ಯೋಸೇಫನು ಹೇಳಿದ್ದಂತೆಯೇ ಆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದರೆ ಫರೋಹನು ಭಕ್ಷ್ಯಗಾರನನ್ನು ಕೊಲ್ಲಿಸಿದನು. ಯೋಸೇಫನು ಹೇಳಿದಂತೆಯೇ ಪ್ರತಿಯೊಂದು ನಡೆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ಮುಖ್ಯ ರೊಟ್ಟಿಗಾರನನ್ನು ಗಲ್ಲಿಗೇರಿಸಿದನು. ಹೀಗೆ ಯೋಸೇಫನು ಹೇಳಿದ ಹೇಳಿದಂತೆಯೇ ಆಯಿತು. ಅಧ್ಯಾಯವನ್ನು ನೋಡಿ |
ಹೌದು, ‘ಬೇಲ್ತೆಶಚ್ಚರ’ನೆಂಬ ಹೆಸರನ್ನು ರಾಜನಿಂದ ಹೊಂದಿದ ಆ ದಾನಿಯೇಲನು ಪರಮ ಬುದ್ಧಿವಂತ, ಜ್ಞಾನಿ, ವಿವೇಕಿ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನ, ಒಗಟು ಬಿಡಿಸುವ ಚಮತ್ಕಾರ, ಗುಂಜುಗಂಟು ಬಿಚ್ಚುವ ಚಾತುರ್ಯ ಅವನಲ್ಲಿ ತೋರಿಬಂದವು. ಆದ್ದರಿಂದಲೇ ಅವನನ್ನು ಅಧ್ಯಕ್ಷನನ್ನಾಗಿ ನೇಮಿಸಲಾಯಿತು. ದಾನಿಯೇಲನನ್ನು ಈಗಲೇ ಕರೆಯಿಸಿರಿ. ಆತ ಬರಹದ ಅರ್ಥವನ್ನು ವಿವರಿಸುವನು,” ಎಂದಳು.