Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:4 - ಕನ್ನಡ ಸತ್ಯವೇದವು C.L. Bible (BSI)

4 ದಳಪತಿ ಜೋಸೆಫನನ್ನು ಅವರ ಉಪಚಾರಕ್ಕೆ ನೇಮಿಸಿದ್ದನು. ಜೋಸೆಫನು ಅವರಿಗೆ ಸೇವೆಮಾಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸೆರೆಮನೆಯ ಅಧಿಪತಿಯು ಯೋಸೇಫನನ್ನು ಅವರ ಉಪಚಾರಕ್ಕೆ ನೇಮಿಸಿದ್ದರಿಂದ ಯೋಸೇಫನು ಅವರಿಗೆ ಸೇವೆ ಮಾಡುವವನಾದನು. ಹೀಗೆ ಅವರು ಕೆಲವು ಕಾಲ ಸೆರೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅದು ಯೋಸೇಫನು ಬಿದ್ದಿದ್ದ ಸೆರೆಮನೆಯೇ. ದಳವಾಯಿಯು ಯೋಸೇಫನನ್ನು ಅವರ ಉಪಚಾರಕ್ಕೆ ನೇವಿುಸಿದ್ದರಿಂದ ಯೋಸೇಫನು ಅವರಿಗೆ ಸೇವೆ ಮಾಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸೆರೆಮನೆಯ ಮುಖ್ಯಾಧಿಕಾರಿಯು ಈ ಇಬ್ಬರು ಕೈದಿಗಳನ್ನು ಯೋಸೇಫನ ವಶಕ್ಕೆ ಒಪ್ಪಿಸಿದನು. ಸ್ವಲ್ಪಕಾಲದವರೆಗೆ ಆ ಇಬ್ಬರು ಸೆರೆಮನೆಯೊಳಗೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮೈಗಾವಲಿನ ದಳಪತಿಯು ಅವರನ್ನೂ ನೋಡಿಕೊಳ್ಳುವದಕ್ಕೆ ಯೋಸೇಫನನ್ನು ನೇಮಿಸಿದ್ದರಿಂದ, ಅವನು ಅವರನ್ನು ನೋಡಿಕೊಳ್ಳುತ್ತಿದ್ದನು. ಅವರು ಕೆಲವು ಕಾಲ ಸೆರೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:4
7 ತಿಳಿವುಗಳ ಹೋಲಿಕೆ  

ಪ್ರಭುವಿಗೆ ಬಿಡು ಜೀವನಯಾತ್ರಾ ಚಿಂತೆಯನು I ಭರವಸೆಯಿಂದಿರು, ಆತನದನು ಸಾಗಿಸುವನು II


ಅತ್ತ ಜೋಸೆಫನನ್ನು ತೆಗೆದುಕೊಂಡುಹೋದ ಇಷ್ಮಾಯೇಲ್ಯರು ಈಜಿಪ್ಟ್ ದೇಶವನ್ನು ಸೇರಿದಾಗ ಅವನನ್ನು ಈಜಿಪ್ಟಿನ ಪೋಟೀಫರ್ ಎಂಬವನಿಗೆ ಮಾರಿಬಿಟ್ಟರು. ಪೋಟೀಫರನು ಫರೋಹನ ಆಸ್ಥಾನದ ಒಬ್ಬ ಉದ್ಯೋಗಿ ಮತ್ತು ಅಂಗರಕ್ಷಕರ ದಳಪತಿ.


ಮಿದ್ಯಾನ್ಯರು ಜೋಸೆಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಫರೋಹನ ಆಸ್ಥಾನದಲ್ಲಿದ್ದ ಪೋಟೀಫರನಿಗೆ ಮಾರಿದರು; ಇವನು, ದೊಡ್ಡ ಉದ್ಯೋಗಸ್ಥನೂ ಮೈಗಾವಲಿನವರ ದಳಪತಿಯೂ ಆಗಿದ್ದನು.


ಅವರನ್ನು ಅಂಗರಕ್ಷಕರ ದಳಪತಿಯ ವಠಾರದಲ್ಲಿದ್ದ ಸೆರೆಯಲ್ಲಿ ಹಾಕಿಸಿದ್ದನು.


ಕೆಲವು ಕಾಲವದ ಮೇಲೆ, ಆ ಇಬ್ಬರು ನೌಕರರಿಗೂ ಅಂದರೆ, ಈಜಿಪ್ಟಿನ ಅರಸ ಸೆರೆಗೆ ಹಾಕಿಸಿದ್ದ ಪಾನಸೇವಕನಿಗೂ ಅಡಿಗೆಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರ ಕನಸುಗಳಿಗೆ ಬೇರೆಬೇರೆ ಅರ್ಥವಿತ್ತು.


ಅವರೆಲ್ಲರನ್ನು ಮೂರು ದಿನಗಳವರೆಗೆ ಕಾವಲಲ್ಲಿ ಇರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು