Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:8 - ಕನ್ನಡ ಸತ್ಯವೇದವು C.L. Bible (BSI)

8 ಅವರು, “ನಮಗೆ ಸ್ವಪ್ನಬಿತ್ತು; ಅದರ ಅರ್ಥ ಹೇಳುವವರು ಯಾರೂ ಇಲ್ಲ,” ಎಂದರು. ಜೋಸೆಫನು ಅವರಿಗೆ, “ಸ್ವಪ್ನಗಳ ಅರ್ಥ ದೇವರಿಂದ ದೊರಕಬಹುದಲ್ಲವೆ? ದಯವಿಟ್ಟು ನಿಮ್ಮ ಸ್ವಪ್ನಗಳನ್ನು ನನಗೆ ತಿಳಿಸಿ,” ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ಅವನಿಗೆ - ನಮಗೆ ಸ್ವಪ್ನಬಿತ್ತು; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ ಎಂದು ಹೇಳಲು ಯೋಸೇಫನು ಅವರಿಗೆ - ಸ್ವಪ್ನಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ; ದಯಮಾಡಿ ನಿಮ್ಮ ಸ್ವಪ್ನವನ್ನು ನನಗೆ ತಿಳಿಸಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲಿ ವಿವರಿಸುವವರಾಗಲಿ ಯಾರೂ ಇಲ್ಲ” ಎಂದು ಹೇಳಿದರು. ಯೋಸೇಫನು ಅವರಿಗೆ, “ದೇವರೊಬ್ಬನು ಮಾತ್ರ ಕನಸುಗಳನ್ನು ಅರ್ಥಮಾಡಿಕೊಳ್ಳಬಲ್ಲನು ಮತ್ತು ಕನಸುಗಳ ಅರ್ಥವನ್ನು ಹೇಳಬಲ್ಲನು. ಆದ್ದರಿಂದ ದಯಮಾಡಿ ನಿಮ್ಮ ಕನಸುಗಳನ್ನು ನನಗೆ ತಿಳಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಯೋಸೇಫನಿಗೆ, “ನಾವು ಕನಸನ್ನು ಕಂಡಿದ್ದೇವೆ, ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ,” ಎಂದರು. ಯೋಸೇಫನು ಅವರಿಗೆ, “ಅರ್ಥ ಹೇಳುವುದು ದೇವರದಲ್ಲವೋ? ಎಂದು ಹೇಳಿ, ಅವುಗಳನ್ನು ನನಗೆ ಹೇಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:8
17 ತಿಳಿವುಗಳ ಹೋಲಿಕೆ  

ದಾನಿಯೇಲನ ವಿವರಕ್ಕೆ ಉತ್ತರವಾಗಿ, “ನೀನು ಈ ಗುಟ್ಟನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವರು, ರಾಜಾಧಿರಾಜರು, ಗುಟ್ಟನ್ನು ಬಟ್ಟಬಯಲಾಗಿಸುವವರು! ಇದು ಸತ್ಯ,” ಎಂದು ಹೇಳಿದನು.


ಆದರೆ ರಹಸ್ಯಗಳನ್ನು ವ್ಯಕ್ತಪಡಿಸಬಲ್ಲವರು ಒಬ್ಬರಿದ್ದಾರೆ. ಅವರೇ ಪರಲೋಕದಲ್ಲಿರುವ ದೇವರು. ಬರಲಿರುವ ಕಾಲದಲ್ಲಿ ನಡೆಯತಕ್ಕದ್ದನ್ನು ರಾಜ ನೆಬೂಕದ್ನೆಚ್ಚರರಾದ ನಿಮಗೆ ಅವರೇ ತಿಳಿಯಪಡಿಸಿದ್ದಾರೆ. ನೀವು ಕಂಡ ಕನಸು, ಹಾಸಿಗೆಯ ಮೇಲೆ ಮಲಗಿದ್ದಾಗ ನಿಮ್ಮ ಮನಸ್ಸಿಗೆ ತೋಚಿದ ಸ್ವಪ್ನಗಳು ಹೀಗಿವೆ:


ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.


ನನ್ನ ದೇವರ ಹೆಸರು ಸೇರಿರುವ ‘ಬೇಲ್ತೆಶಚ್ಚರ’ ಎಂಬ ಅಡ್ಡಹೆಸರನ್ನು ಹೊಂದಿದ ದಾನಿಯೇಲನು ಕೊನೆಗೆ ನನ್ನ ಬಳಿಗೆ ಬಂದ. ಪರಿಶುದ್ಧ ದೇವರ ಆತ್ಮ ಅವನಲ್ಲಿತ್ತು. ಅವನಿಗೆ ನನ್ನ ಕನಸನ್ನು ಹೀಗೆ ತಿಳಿಸಿದೆ.


ರಾಜರು ಕೇಳುತ್ತಿರುವ ಸಂಗತಿ ಅತಿಕಷ್ಟವಾದುದು. ನರಮಾನವರ ನಡುವೆ ವಾಸಮಾಡದ ದೇವರುಗಳೇ ಹೊರತು ಇನ್ನಾರೂ ರಾಜರ ಸಮ್ಮುಖದಲ್ಲಿ ಇದನ್ನು ತಿಳಿಸಲಾರರು,” ಎಂದು ಉತ್ತರಕೊಟ್ಟರು.


‘ಲೊಚಗುಟ್ಟುವ, ಪಿಟಿಪಿಟಿಗುಟ್ಟುವ, ಕಣಿಹೇಳುವವರ ಮತ್ತು ಪ್ರೇತವಿಚಾರಕರ ಸಲಹೆ ಕೇಳಿ’ ಎಂದು ಜನರು ನಿಮಗೆ ಹೇಳಿಯಾರು. ಆಗ, ‘ದೇವರನ್ನೇ ಏಕೆ ವಿಚಾರಿಸಬಾರದು? ಜೀವಿತರಿಗಾಗಿ ಸತ್ತವರನ್ನು ವಿಚಾರಿಸುವುದು ಸರಿಯಲ್ಲ’ ಎಂದು ಅಂಥವರಿಗೆ ನೀವು ಹೇಳಬೇಕು.


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


ಆಗ ಆ ಮುಖ್ಯ ಪಾನಸೇವಕ ಜೋಸೆಫನಿಗೆ, “ನನ್ನ ಕನಸಿನಲ್ಲಿ ಒಂದು ದ್ರಾಕ್ಷಾಲತೆ ನನ್ನೆದುರಿಗೆ ಇರುವುದನ್ನು ಕಂಡೆ.


ಆದರೆ ಸಹಸ್ರ ದೂತರಲ್ಲೊಬ್ಬ ಮಧ್ಯಸ್ಥನಾಗಿ ಅವನ ಪಕ್ಕದಲ್ಲಿ ನಿಂತು ಅವನ ಕರ್ತವ್ಯವೇನೆಂದು ತಿಳಿಸಿ,


ರಾಜನು ಅವರಿಗೆ, “ನಾನು ಒಂದು ಕನಸು ಕಂಡೆ. ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಗೊಂಡಿದೆ,” ಎಂದನು.


ಅದಕ್ಕೆ ದಾನಿಯೇಲನು ಸನ್ನಿಧಿಯಲ್ಲಿ, “ರಾಜರು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ತಿಳಿಸಲಾರರು.


ನೀನು ಗೂಡಾರ್ಥಗಳನ್ನು ವಿವರಿಸಬಲ್ಲವನೂ ಗುಂಜುಗಂಟುಗಳನ್ನು ಬಿಚ್ಚಬಲ್ಲವನೂ ಎಂಬ ಸಮಾಚಾರ ನನಗೆ ಮುಟ್ಟಿದೆ. ಈ ಬರಹವನ್ನು ಓದಿ, ಇದರ ಅಭಿಪ್ರಾಯವನ್ನು ನನಗೆ ತಿಳಿಸಿದೆಯಾದರೆ ನಿನಗೆ ಕೆನ್ನೀಲಿ ರಾಜವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.


ಜೋಸೆಫನು ಫರೋಹನಿಗೆ, “ತಾವು ಕಂಡ ಎರಡು ಕನಸುಗಳ ವಿಷಯ ಒಂದೇ. ದೇವರು ಮಾಡಬೇಕೆಂದಿರುವುದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು