Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:12 - ಕನ್ನಡ ಸತ್ಯವೇದವು C.L. Bible (BSI)

12 ಹಿಬ್ರಿಯನಾದ ಒಬ್ಬ ಯುವಕ ನಮ್ಮ ಸಂಗಡ ಅಲ್ಲಿದ್ದ. ಅವನು ದಳಪತಿಯವರ ಸೇವಕ. ನಾವು ನಮ್ಮ ಕನಸನ್ನು ಅವನಿಗೆ ತಿಳಿಸಿದೆವು. ಅವನು ಆ ಕನಸುಗಳಿಗೆ ಸರಿಯಾದ ಅರ್ಥವನ್ನು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅಲ್ಲಿ ನಮ್ಮ ಸಂಗಡ ಇಬ್ರಿಯನಾದ ಒಬ್ಬ ಪ್ರಾಯಸ್ಥನಿದ್ದನು. ಅವನು ಮೈಗಾವಲಿನವರ ಅಧಿಪತಿಯ ಸೇವಕನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ಅವುಗಳ ಅರ್ಥವನ್ನು ನಮಗೆ ತಿಳಿಸಿದನು. ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅಲ್ಲಿ ನಮ್ಮ ಸಂಗಡ ಇಬ್ರಿಯನಾದ ಒಬ್ಬ ಪ್ರಾಯಸ್ಥನಿದ್ದನು; ಅವನು ದಳವಾಯಿಯ ದಾಸನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ಅವುಗಳ ಅರ್ಥವನ್ನು ನಮಗೆ ಹೇಳಿದನು; ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಮ್ಮ ಜೊತೆಯಲ್ಲಿ ಒಬ್ಬ ಇಬ್ರಿಯ ಯುವಕನಿದ್ದನು. ಅವನು ಕಾವಲುಗಾರರ ಅಧಿಕಾರಿಯ ಸೇವಕನಾಗಿದ್ದನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದೆವು. ಅವನು ನಮಗೆ ಅವುಗಳನ್ನು ವಿವರಿಸಿ ನಮ್ಮ ಕನಸಿನ ಅರ್ಥವನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮೈಗಾವಲಿನ ದಳಪತಿಗೆ ಸೇವಕನಾಗಿದ್ದ ಹಿಬ್ರಿಯ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ, ಅವನು ನಮ್ಮ ನಮ್ಮ ಕನಸಿನ ಅರ್ಥವನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:12
5 ತಿಳಿವುಗಳ ಹೋಲಿಕೆ  

ಮಿದ್ಯಾನ್ಯರು ಜೋಸೆಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಫರೋಹನ ಆಸ್ಥಾನದಲ್ಲಿದ್ದ ಪೋಟೀಫರನಿಗೆ ಮಾರಿದರು; ಇವನು, ದೊಡ್ಡ ಉದ್ಯೋಗಸ್ಥನೂ ಮೈಗಾವಲಿನವರ ದಳಪತಿಯೂ ಆಗಿದ್ದನು.


ಅವನನ್ನು ಬಂಧಿಸಿದ. ರಾಜಖೈದಿಗಳನ್ನು ಕಟ್ಟಿಹಾಕಿಸುತ್ತಿದ್ದ ಸೆರೆಮನೆಯಲ್ಲಿ ಅವನನ್ನು ಹಾಕಿಸಿದ. ಜೋಸೆಫನು ಸೆರೆಯಲ್ಲಿ ಇರಬೇಕಾಯಿತು.


ಅತ್ತ ಜೋಸೆಫನನ್ನು ತೆಗೆದುಕೊಂಡುಹೋದ ಇಷ್ಮಾಯೇಲ್ಯರು ಈಜಿಪ್ಟ್ ದೇಶವನ್ನು ಸೇರಿದಾಗ ಅವನನ್ನು ಈಜಿಪ್ಟಿನ ಪೋಟೀಫರ್ ಎಂಬವನಿಗೆ ಮಾರಿಬಿಟ್ಟರು. ಪೋಟೀಫರನು ಫರೋಹನ ಆಸ್ಥಾನದ ಒಬ್ಬ ಉದ್ಯೋಗಿ ಮತ್ತು ಅಂಗರಕ್ಷಕರ ದಳಪತಿ.


ಹೀಗಿರಲು ದೇವರು ಆ ನಾಲ್ಕುಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲೂ ವಿದ್ಯೆಗಳಲ್ಲೂ ಜ್ಞಾನ ವಿವೇಕಗಳನ್ನು ದಯಪಾಲಿಸಿದರು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಅರ್ಥೈಸುವುದರಲ್ಲಿ ಪ್ರವೀಣನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು