Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:21 - ಕನ್ನಡ ಸತ್ಯವೇದವು C.L. Bible (BSI)

21 ತಿಂದರೂ ತಿಂದಂತೆಯೇ ತೋರಲಿಲ್ಲ. ಮೊದಲಿದ್ದಂತೆಯೇ ಬಡಕಲಾಗಿದ್ದವು. ಅಷ್ಟರ ಒಳಗೆ ನನಗೆ ಎಚ್ಚರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇವು ಅವುಗಳನ್ನು ತಿಂದ ಮೇಲೂ ಅವು ತಿಂದ ಹಾಗೆ ತೋರಿಬರಲಿಲ್ಲ. ಅವು ಮೊದಲಿದ್ದಂತೆ ಬಡವಾಗಿಯೇ ಇದ್ದವು. ಆಗ ನನಗೆ ಎಚ್ಚರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ತಿಂದಾಗ್ಯೂ ತಿಂದವೆಂಬದು ತೋರಲಿಲ್ಲ; ಅವು ಮೊದಲಿದ್ದಂತೆ ಬಡವಾಗಿಯೇ ಇದ್ದವು. ಅಲ್ಲಿಗೆ ಎಚ್ಚರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವು ಏಳು ಹಸುಗಳನ್ನು ತಿಂದ ಮೇಲೆಯೂ ತಿಂದಂತೆ ಕಾಣುತ್ತಿರಲಿಲ್ಲ; ಅವು ಮೊದಲಿನಂತೆಯೇ ಬಡಕಲಾಗಿದ್ದವು ಮತ್ತು ಕುರೂಪವಾಗಿದ್ದವು. ಆಗ ನನಗೆ ಎಚ್ಚರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇವು ಅವುಗಳನ್ನು ತಿಂದ ಮೇಲೂ ಅವು ತಿಂದ ಹಾಗೆ ತೋರಲಿಲ್ಲ. ಅವು ಮೊದಲಿನಂತೆ ಬಡಕಲಾಗಿಯೇ ಇದ್ದವು. ತರುವಾಯ ನಾನು ಎಚ್ಚೆತ್ತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:21
7 ತಿಳಿವುಗಳ ಹೋಲಿಕೆ  

ತಿನ್ನಿಸುತ್ತಾ, “ನರಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ,” ಎಂದರು. ನಾನು ಅದನ್ನು ತಿಂದುಬಿಟ್ಟೆ; ಅದು ನನ್ನ ಬಾಯಿಗೆ ಜೇನಿನಂತೆ ಸಿಹಿಯಾಗಿತ್ತು.


ಅತ್ತ ಕಿತ್ತುತಿಂದರೂ ಅವರಿಗೆ ತೃಪ್ತಿಯಿಲ್ಲ. ಇತ್ತ ಕುಡಿದು ಕಬಳಿಸಿದರೂ ಅವರ ಹಸಿವು ನೀಗುವುದಿಲ್ಲ. ಒಬ್ಬೊಬ್ಬನೂ ತನ್ನ ಕಂದನನ್ನೇ ಕೊಂದು ತಿನ್ನುತ್ತಾನೆ.


ಮಾನನಷ್ಟವಿರದು ಕಷ್ಟಕಾಲದಲಿ I ಕುಂದುಕೊರತೆಯಿರದು ಬರಗಾಲದಲಿ II


ಅವುಗಳ ಹಿಂದೆಯೇ ಒಣಕಲಾದ ಏಳು ಬಡ ಹಸುಗಳು ನದಿಯೊಳಗಿಂದ ಬಂದು ಮೊದಲು ಕಾಣಿಸಿದ ಹಸುಗಳ ಹತ್ತಿರ ನದಿಯ ತೀರದಲ್ಲೇ ನಿಂತವು.


ಅದಲ್ಲದೆ, ಸಣಕಲಾಗಿದ್ದ ಆ ಬಡಹಸುಗಳು ಮೊದಲೇ ಕಾಣಿಸಿದ ಆ ಏಳು ಕೊಬ್ಬಿನ ಹಸುಗಳನ್ನು ತಿಂದುಬಿಟ್ಟವು.


ನನಗೆ ಬಿದ್ದ ಇನ್ನೊಂದು ಕನಸಿನೊಳಗೆ ಕಾಳುತುಂಬಿದ್ದ ಏಳು ಬಲಿತ ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿಬಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು