Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:24 - ಕನ್ನಡ ಸತ್ಯವೇದವು C.L. Bible (BSI)

24 ಬತ್ತಿಹೋಗಿದ್ದ ತೆನೆಗಳು ಕಾಳು ತುಂಬಿದ್ದ ಆ ಏಳು ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆ; ಅವುಗಳ ಅರ್ಥವನ್ನು ವಿವರಿಸಿ ಹೇಳಲು ಅವರಲ್ಲಿ ಯಾರಿಂದಲೂ ಆಗಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಬತ್ತಿ ಹೋಗಿದ್ದ ತೆನೆಗಳು ಆ ಏಳು ಒಳ್ಳೆ ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆನು. ಆದರೆ ಅವುಗಳ ಅರ್ಥವನ್ನು ವಿವರಿಸಿ ಹೇಳುವುದಕ್ಕೆ ಯಾರಿಂದಲೂ ಆಗಲಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಬತ್ತಿಹೋಗಿದ್ದ ತೆನೆಗಳು ಆ ಏಳು ಒಳ್ಳೇ ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆನು. ಆದರೆ ಅವುಗಳ ಅರ್ಥವನ್ನು ಬಿಚ್ಚಿಹೇಳುವದಕ್ಕೆ ಅವರಲ್ಲಿ ಯಾರಿಂದಲೂ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಬತ್ತಿಹೋಗಿದ್ದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ತಿಂದುಬಿಟ್ಟವು. “ನಾನು ಈ ಕನಸುಗಳನ್ನು ಮಂತ್ರಗಾರರಿಗೂ ವಿದ್ವಾಂಸರಿಗೂ ತಿಳಿಸಿದೆನು. ಆದರೆ ಅವರಲ್ಲಿ ಯಾರೂ ನನಗೆ ಈ ಕನಸುಗಳ ಅರ್ಥವನ್ನು ವಿವರಿಸಲಾಗಲಿಲ್ಲ. ಅವುಗಳ ಅರ್ಥವೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆ ಒಣಗಿದ್ದ ಏಳು ತೆನೆಗಳು, ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಸಿದಾಗ, ಅದರ ಅರ್ಥವನ್ನು ನನಗೆ ಯಾರೂ ಹೇಳಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:24
5 ತಿಳಿವುಗಳ ಹೋಲಿಕೆ  

ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರೆಲ್ಲರು ನನ್ನ ಸಮ್ಮುಖಕ್ಕೆ ಬಂದರು. ನಾನು ಕನಸನ್ನು ತಿಳಿಸಿದೆ. ಆದರೆ ಅದರ ಅರ್ಥವನ್ನು ಅವರಿಂದ ತಿಳಿಸಲಾಗಲಿಲ್ಲ.


ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡು ಇತ್ತು. ಈಜಿಪ್ಟ್ ದೇಶದ ಎಲ್ಲ ಜೋಯಿಸರನ್ನೂ ವಿದ್ವಾಂಸರನ್ನೂ ಬರಮಾಡಿದ. ಅವರಿಗೆ ತನ್ನ ಕನಸನ್ನು ವಿವರಿಸಿದ. ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಯಾರೂ ಸಿಕ್ಕಲಿಲ್ಲ.


ಆಗ ಆ ಮಾಟಗಾರರು, “ಇದು ದೇವರ ಕೆಲಸವೇ ಸರಿ,” ಎಂದು ಫರೋಹನಿಗೆ ತಿಳಿಸಿದರು. ಆದರೂ ಫರೋಹನ ಹೃದಯ ಕಲ್ಲಾಗಿತ್ತು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.


ಅವುಗಳ ಹಿಂದೆಯೆ, ಮೂಡಣ ಗಾಳಿಯಿಂದ ಒಣಗಿ, ಬತ್ತಿ, ಕೆಟ್ಟುಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.


‘ಲೊಚಗುಟ್ಟುವ, ಪಿಟಿಪಿಟಿಗುಟ್ಟುವ, ಕಣಿಹೇಳುವವರ ಮತ್ತು ಪ್ರೇತವಿಚಾರಕರ ಸಲಹೆ ಕೇಳಿ’ ಎಂದು ಜನರು ನಿಮಗೆ ಹೇಳಿಯಾರು. ಆಗ, ‘ದೇವರನ್ನೇ ಏಕೆ ವಿಚಾರಿಸಬಾರದು? ಜೀವಿತರಿಗಾಗಿ ಸತ್ತವರನ್ನು ವಿಚಾರಿಸುವುದು ಸರಿಯಲ್ಲ’ ಎಂದು ಅಂಥವರಿಗೆ ನೀವು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು