Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:25 - ಕನ್ನಡ ಸತ್ಯವೇದವು C.L. Bible (BSI)

25 ಜೋಸೆಫನು ಫರೋಹನಿಗೆ, “ತಾವು ಕಂಡ ಎರಡು ಕನಸುಗಳ ವಿಷಯ ಒಂದೇ. ದೇವರು ಮಾಡಬೇಕೆಂದಿರುವುದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೋಸೇಫನು ಫರೋಹನಿಗೆ, “ತಾವು ಕಂಡ ಎರಡು ಕನಸುಗಳು ಒಂದೇಯಾಗಿದೆ. ದೇವರು ತಾನು ಮಾಡಬೇಕೆಂದಿರುವುದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯೋಸೇಫನು ಫರೋಹನಿಗೆ - ತಾವು ಕಂಡ ಎರಡು ಕನಸುಗಳೂ ಒಂದೇ ವಿಷಯವಾದವುಗಳು. ದೇವರು ತಾನು ಮಾಡಬೇಕೆಂದಿರುವದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಗ ಯೋಸೇಫನು ಫರೋಹನಿಗೆ, “ಆ ಎರಡು ಕನಸುಗಳ ಅರ್ಥವು ಒಂದೇ. ಮುಂದೆ ನಡೆಯಲಿರುವುದನ್ನು ದೇವರು ತಮಗೆ ತಿಳಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಯೋಸೇಫನು ಫರೋಹನಿಗೆ, “ಫರೋಹನ ಎರಡು ಕನಸುಗಳ ವಿಷಯ ಒಂದೇ, ದೇವರು ಮಾಡಲಿರುವುದನ್ನು ಫರೋಹನಿಗೆ ತಿಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:25
18 ತಿಳಿವುಗಳ ಹೋಲಿಕೆ  

ಬೆಟ್ಟದಿಂದ ಒಂದು ಗುಂಡುಬಂಡೆ, ಯಾವ ಕೈಯೂ ಮುಟ್ಟದೆಯೇ, ಸಿಡಿದುಬಂದು ಕಬ್ಬಿಣ-ಕಂಚು-ಮಣ್ಣು-ಬೆಳ್ಳಿ-ಬಂಗಾರ ಇವುಗಳನ್ನು ಚೂರುಚೂರು ಮಾಡಿದ್ದನ್ನು ನೀವು ನೋಡಿದಿರಿ. ಇದರಿಂದ ಪರಲೋಕ ದೇವರು ಮುಂದೆ ನಡೆಯಲಿರುವ ವಿಷಯಗಳನ್ನು ರಾಜರಾದ ತಮಗೆ ತಿಳಿಯಪಡಿಸಿದ್ದಾರೆ. ಆ ಕನಸು ನಿಜವಾದುದು. ಅದರ ಅರ್ಥವೂ ನಂಬತಕ್ಕದ್ದು,” ಎಂದು ವಿವರಿಸಿದನು.


ಇದಾದ ಬಳಿಕ ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದ ಬಾಗಿಲು ತೆರೆದಿತ್ತು. ಮೊದಲು ನನ್ನೊಡನೆ ಮಾತನಾಡಿದ ತುತೂರಿಯಂಥ ನಾದವು ನನಗೆ ಕೇಳಿಸಿತು. ಅದು, “ಮೇಲೆ ಬಾ, ಮುಂದೆ ಸಂಭವಿಸಲಿರುವ ಘಟನೆಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.


ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.


ನೀವು ಆದರೋ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವನ್ನೂ ಮುಂಚಿತವಾಗಿ ತಿಳಿಸಿದ್ದೇನೆ.


ಆಗ ಹೊಲದಲ್ಲಿದ್ದ ಇಬ್ಬರಲ್ಲಿ ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು. ಇನ್ನೊಬ್ಬನನ್ನು ಬಿಡಲಾಗುವುದು.


ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.


ದಾನಿಯೇಲನ ವಿವರಕ್ಕೆ ಉತ್ತರವಾಗಿ, “ನೀನು ಈ ಗುಟ್ಟನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವರು, ರಾಜಾಧಿರಾಜರು, ಗುಟ್ಟನ್ನು ಬಟ್ಟಬಯಲಾಗಿಸುವವರು! ಇದು ಸತ್ಯ,” ಎಂದು ಹೇಳಿದನು.


ಬರಲಿ, ಎಲ್ಲಾ ಜನಾಂಗಗಳು ಒಟ್ಟಿಗೆ ನೆರೆಯಲಿ, ಸಕಲ ದೇಶಿಯರು ಇಲ್ಲಿಯೇ. ಅವರ ದೇವರುಗಳಲ್ಲಿ ಭವಿಷ್ಯವನ್ನು ನುಡಿಯಬಲ್ಲವರು ಯಾರು? ಗತಿಸಿದ ಘಟನೆಗಳನ್ನು ಮುಂತಿಳಿಸಿದವರಾರು? ಕರೆತರಲಿ, ಆ ದೇವರುಗಳು ಸಾಕ್ಷಿಗಳನು ಸ್ಥಾಪಿಸಿಕೊಳ್ಳಲಿ, ತಾವು ಸತ್ಯವಂತರೆಂಬುದನು; ರುಜುಪಡಿಸಲಿ ಕೇಳುವವರಿಗೆ ತಮ್ಮ ಮಾತು ನಿಜವೆಂಬುದನು.


ಪ್ರಕಟಿಸಿಹನಾ ಪ್ರಭು ತನ್ನ ಮುಕ್ತಿವಿಧಾನವನು I ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ಧಾರಕಾ ಶಕ್ತಿಯನು II


ಆಗ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೀನು ಅವರಿಗೆ ಹೆದರಬೇಡ; ನಾಳೆ ಇದೇ ವೇಳೆಗೆ ಅವರನ್ನು ಇಸ್ರಯೇಲರಿಗೆ ಒಪ್ಪಿಸುವೆನು. ಇಸ್ರಯೇಲರು ಅವರನ್ನು ಹತಿಸಿಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕಡಿದು ರಥಗಳನ್ನು ಸುಟ್ಟುಬಿಡಬೇಕು,” ಎಂದರು.


ಜೋಸೆಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು, ಫರೋಹ ಆದ ನಿಮಗೆ ತೃಪ್ತಿಕರವಾದ ಉತ್ತರಕೊಡಬಲ್ಲರು,” ಎಂದು ಹೇಳಿದ.


ಇಲ್ಲವಾದರೆ ಈ ಸಾರಿ ವಿಧಿಸುವ ಈ ಬಾಧೆಗಳು ನಿನ್ನ ಪ್ರಜಾಪರಿವಾರದವರಿಗೆ ಮಾತ್ರವಲ್ಲ ನಿನಗೂ ತಗಲುವುದು. ಇದರಿಂದ ಇಡೀ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


ಆ ಏಳು ಒಳ್ಳೆಯ ಹಸುಗಳೇ ಏಳು ವರ್ಷಗಳು; ಆ ಏಳು ಒಳ್ಳೆಯತೆನೆಗಳೂ ಏಳು ವರ್ಷಗಳು; ಎರಡು ಕನಸುಗಳ ಅರ್ಥ ಒಂದೇ.


ನಾನು ತಮಗೆ ಅರಿಕೆಮಾಡಿದಂತೆ ದೇವರು ಮಾಡಬೇಕೆಂದು ಇರುವುದನ್ನು ತಮಗೆ ತಿಳಿಸಿದ್ದಾರೆ.


ದೇವರು ಈ ಕಾರ್ಯವನ್ನು ನಿರ್ಧರಿಸಿದ್ದಾರೆ; ಇದು ಬೇಗ ಬರಲಿದೆಯೆಂದು ತಿಳಿದುಕೊಳ್ಳಬೇಕು. ಏಕೆಂದರೆ ನಿಮಗೆ ಇಮ್ಮಡಿ ಕನಸುಬಿದ್ದಿದೆ.


ಅವರು, “ನಮಗೆ ಸ್ವಪ್ನಬಿತ್ತು; ಅದರ ಅರ್ಥ ಹೇಳುವವರು ಯಾರೂ ಇಲ್ಲ,” ಎಂದರು. ಜೋಸೆಫನು ಅವರಿಗೆ, “ಸ್ವಪ್ನಗಳ ಅರ್ಥ ದೇವರಿಂದ ದೊರಕಬಹುದಲ್ಲವೆ? ದಯವಿಟ್ಟು ನಿಮ್ಮ ಸ್ವಪ್ನಗಳನ್ನು ನನಗೆ ತಿಳಿಸಿ,” ಎಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು