ಆದಿಕಾಂಡ 41:27 - ಕನ್ನಡ ಸತ್ಯವೇದವು C.L. Bible (BSI)27 ಒಳ್ಳೆಯ ಹಸುಗಳ ಹಿಂದೆ ಬಂದ ಒಣಕಲಾಗಿದ್ದ ಆ ಏಳು ಬಡಹಸುಗಳು ಮತ್ತು ಮೂಡಣ ಗಾಳಿಯಿಂದ ಕೆಟ್ಟುಹೋಗಿದ್ದ ಆ ಏಳು ಕಾಳಿಲ್ಲದ ತೆನೆಗಳು ಬರವುಂಟಾಗುವ ಏಳು ವರ್ಷಗಳನ್ನು ಸೂಚಿಸುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಒಳ್ಳೆ ಆಕಳುಗಳ ಹಿಂದೆ ಬಂದ ಅವಲಕ್ಷಣವಾದ ಬಡ ಆಕಳುಗಳೂ ಮೂಡಣ ಗಾಳಿಯಿಂದ ಬತ್ತಿ ಹೋಗಿದ್ದ ಆ ಏಳು ತೆನೆಗಳೂ ಬರವುಂಟಾಗುವ ಏಳು ವರ್ಷಗಳನ್ನು ಸೂಚಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಒಳ್ಳೇ ಆಕಳುಗಳ ಹಿಂದೆ ಬಂದ ಅವಲಕ್ಷಣವಾದ ಆ ಬಡ ಆಕಳುಗಳೂ ಮೂಡಣ ಗಾಳಿಯಿಂದ ಕೆಟ್ಟುಹೋಗಿದ್ದ ಆ ಏಳು ಕಾಳಿಲ್ಲದ ತೆನೆಗಳೂ ಬರವುಂಟಾಗುವ ಏಳು ವರುಷಗಳನ್ನು ಸೂಚಿಸುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಬಡಕಲಾದ ಮತ್ತು ಕುರೂಪವಾದ ಏಳು ಹಸುಗಳು ಮತ್ತು ಕೆಟ್ಟುಹೋದ ಕಾಳಿನ ಏಳು ತೆನೆಗಳು, ದೇಶಕ್ಕೆ ಬರುವ ಏಳು ವರ್ಷಗಳ ಬರಗಾಲವನ್ನು ಸೂಚಿಸುತ್ತವೆ. ಈ ಏಳು ವರ್ಷಗಳು ಒಳ್ಳೆಯ ವರ್ಷಗಳ ನಂತರ ಬರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅವುಗಳ ತರುವಾಯ ಏರಿ ಬಂದ ಬಡಕಲಾದ ಕೆಟ್ಟ ಏಳು ಹಸುಗಳು ಮತ್ತು ಪೂರ್ವದಿಕ್ಕಿನ ಗಾಳಿಯಿಂದ ಒಣಗಿ ಬತ್ತಿ ಹೋಗಿದ್ದ ಏಳು ತೆನೆಗಳು, ಬರಲಿರುವ ಏಳು ವರ್ಷಗಳು. ಅಧ್ಯಾಯವನ್ನು ನೋಡಿ |