Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:45 - ಕನ್ನಡ ಸತ್ಯವೇದವು C.L. Bible (BSI)

45 ಬಳಿಕ ಫರೋಹನು ಜೋಸೆಫನಿಗೆ ‘ಸಾಪ್ನತ್ಪನ್ನೇಹ’ ಎಂಬ ಹೊಸ ಹೆಸರಿಟ್ಟನು; ಓನ್ ಎಂಬ ಗುರುಪೀಠದ ಆಚಾರ್ಯನಾಗಿದ್ದ ಪೋಟೀಫೆರನ ಮಗಳು ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ತರುವಾಯ ಜೋಸೆಫನು ಈಜಿಪ್ಟ್ ದೇಶಸಂಚಾರ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಇದಲ್ಲದೆ ಫರೋಹನು ಯೋಸೇಫನಿಗೆ “ಸಾಫ್ನತ್ಪನ್ನೇಹ” ಎಂದು ಹೆಸರಿಟ್ಟನು. ತರುವಾಯ ಓನನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ದೇಶದಲ್ಲೆಲ್ಲಾ ಸಂಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಮತ್ತು ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟು ಓನ್ ಎಂಬ ಗುರುಪೀಠದ ಆಚಾರ್ಯನಾಗಿದ್ದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆ ಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಫರೋಹನು ಯೋಸೇಫನಿಗೆ, ಸಾಫ್ನತ್ಪನ್ನೇಹ ಎಂಬ ಹೆಸರನ್ನು ಕೊಟ್ಟನು. ಇದಲ್ಲದೆ ಫರೋಹನು ಯೋಸೇಫನಿಗೆ ಆಸನತ್ ಎಂಬಾಕೆಯನ್ನು ಮದುವೆ ಮಾಡಿಸಿದನು. ಆಕೆ ಓನ್ ನಗರದ ಆಚಾರ್ಯನಾಗಿದ್ದ ಫೋಟೀಫರನ ಮಗಳು. ಹೀಗೆ ಯೋಸೇಫನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ತರುವಾಯ ಯೋಸೇಫನು ಈಜಿಪ್ಟ್ ದೇಶದಲ್ಲೆಲ್ಲಾ ಸಂಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:45
11 ತಿಳಿವುಗಳ ಹೋಲಿಕೆ  

ಈಜಿಪ್ಟಿನಲ್ಲಿ ಜೋಸೆಫನಿಗೆ ಓನ್ ಪಟ್ಟಣದ ಆಚಾರ್ಯ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದ ಮನಸ್ಸೆ ಮತ್ತು ಎಫ್ರಯಿಮ್.


ಓನಿನ ಮತ್ತು ಪೀಬೆತಿನ ಯುವಕರು ಖಡ್ಗದಿಂದ ಹತರಾಗುವರು; ಅಲ್ಲಿನ ನಿವಾಸಿಗಳು ಸೆರೆಯಾಗಿ ಹೋಗುವರು.


ಒಂದು ದಿನ ಮೋಶೆ ಆ ನಾಡಿನ ಬಾವಿಯೊಂದರ ಬಳಿ ಕುಳಿತಿದ್ದನು. ಮಿದ್ಯಾನರ ಪೂಜಾರಿಯ ಏಳು ಮಂದಿ ಹೆಣ್ಣು ಮಕ್ಕಳು ಅಲ್ಲಿಗೆ ಬಂದರು. ತಮ್ಮ ತಂದೆಯ ಕುರಿಗಳಿಗೆ ನೀರು ಕುಡಿಸುವುದಕ್ಕಾಗಿ ನೀರು ಸೇದಿ ತೊಟ್ಟಿಗಳಲ್ಲಿ ತುಂಬುತ್ತಿದ್ದರು.


ಅವರಲ್ಲಿ ಅಗಬ ಎಂಬವನು ಒಬ್ಬನು. ಇವನು ಪವಿತ್ರಾತ್ಮ ಪ್ರೇರಿತನಾಗಿ ಜಗತ್ತಿನಲ್ಲೆಲ್ಲಾ ಭೀಕರ ಕ್ಷಾಮ ಬರಲಿದೆಯೆಂದು ಮುಂತಿಳಿಸಿದನು. (ಇದು ಬಂದೊದಗಿದುದು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ)


ಆ ಕಾಲದಲ್ಲಿ ಚಕ್ರವರ್ತಿ ಔಗುಸ್ತನು ತನ್ನ ಸಾಮ್ರಾಜ್ಯದಲ್ಲೆಲ್ಲಾ ಜನಗಣತಿಯಾಗಬೇಕೆಂದು ಆಜ್ಞೆ ಹೊರಡಿಸಿದನು.


ಯಾಯೀರಿನವನಾದ ಈರನೂ ದಾವೀದನ ಯಾಜಕನು.


ಯೆಹೋಯಾದಾವನ ಮಗ ಬೆನಾಯನು ‘ಕೆರೇತ್ಯ’, ‘ಪೆಲೇತ್ಯ,’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.


ಸಾಲೇಮಿನ ಅರಸನೂ ಪರಾತ್ಪರ ದೇವರ ಯಾಜಕನೂ ಆಗಿದ್ದ ಮೆಲ್ಕಿಸದೇಕನು ಸಹ ಅಲ್ಲಿಗೆ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಅರ್ಪಿಸಿ ಅಬ್ರಾಮನಿಗೆ ಇಂತೆಂದು ಆಶೀರ್ವಾದ ಮಾಡಿದನು:


ಬರಗಾಲ ಬರುವುದಕ್ಕೆ ಮುಂಚೆ ಜೋಸೆಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಅವರ ತಾಯಿ ಓನ್ ಪಟ್ಟಣದ ಆಚಾರ್ಯನಾಗಿದ್ದ ಪೋಟೀಫೆರನ ಮಗಳಾದ ಆಸನತ್.


ಬಳಿಕ ಹಾಯಾಗಿ ಅಲ್ಲಿಂದ ಹೊರಟುಹೋಗುವನು. ಅವನು ಈಜಿಪ್ಟ್ ದೇಶದಲ್ಲಿರುವ ಸೂರ್ಯ ದೇವಾಲಯದ ಸ್ತಂಭಗಳನ್ನು ಒಡೆದುಹಾಕುವನು, ಅಲ್ಲಿನ ದೇವತೆಗಳ ಆಲಯಗಳನ್ನು ಸುಟ್ಟುಹಾಕುವನು.”


ಕಂಚುಕಿಯರ ನಾಯಕನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ‘ಬೇಲ್ತೆಶಚ್ಚರ್’, ಹನನ್ಯನಿಗೆ ‘ಶದ್ರಕ್’, ಮಿಶಾಯೇಲನಿಗೆ ‘ಮೇಶಕ್’, ಹಾಗೂ ಅಜರ್ಯನಿಗೆ ‘ಅಬೇದ್‍ನೆಗೋ’, ಎಂಬ ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು