Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:46 - ಕನ್ನಡ ಸತ್ಯವೇದವು C.L. Bible (BSI)

46 ಈಜಿಪ್ಟ್ ದೇಶದ ಅರಸನಾದ ಫರೋಹನ ಆಸ್ಥಾನವನ್ನು ಸೇರಿದಾಗ ಜೋಸೆಫನಿಗೆ ಮೂವತ್ತು ವರ್ಷ ವಯಸ್ಸು. ಜೋಸೆಫನು ಫರೋಹನ ಸನ್ನಿಧಿಯಿಂದ ಹೊರಟು ಈಜಿಪ್ಟ್ ದೇಶದಲ್ಲೆಲ್ಲ ಸಂಚಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಯೋಸೇಫನು ಐಗುಪ್ತ ದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರ್ಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶದಲ್ಲೆಲ್ಲಾ ಸಂಚಾರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಯೋಸೇಫನು ಐಗುಪ್ತದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರುಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಯೋಸೇಫನು ಈಜಿಪ್ಟ್ ರಾಜನ ಸೇವೆಯನ್ನು ಪ್ರಾರಂಭಿಸಿದಾಗ ಮೂವತ್ತು ವರ್ಷದವನಾಗಿದ್ದನು. ಯೋಸೇಫನು ಈಜಿಪ್ಟ್ ದೇಶದಲ್ಲೆಲ್ಲಾ ಸಂಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಯೋಸೇಫನು ಈಜಿಪ್ಟಿನ ಅರಸನಾದ ಫರೋಹನ ಮುಂದೆ ನಿಂತಾಗ, ಮೂವತ್ತು ವರ್ಷದವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು, ಈಜಿಪ್ಟ್ ದೇಶದಲ್ಲೆಲ್ಲಾ ಸಂಚಾರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:46
15 ತಿಳಿವುಗಳ ಹೋಲಿಕೆ  

ರಾಜನು ಅವರ ಸಂಗಡ ಮಾತಾಡುವಾಗ ಅಲ್ಲಿದ್ದ ಯುವಕರಲ್ಲೆಲ್ಲ ದಾನಿಯೇಲನಿಗೆ, ಹನನ್ಯನಿಗೆ, ಮೀಶಾಯೇಲನಿಗೆ, ಅಜರ್ಯನಿಗೆ, ಸಮಾನರು ಯಾರೂ ಕಂಡುಬರಲಿಲ್ಲ. ಆದಕಾರಣ ಆ ನಾಲ್ವರು ಸನ್ನಿಧಿಸೇವಕರಾದರು.


ಆಗ ಅರಸ ರೆಹಬ್ಬಾಮನು ತನ್ನ ತಂದೆ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ, ತಾನು ಜನರಿಗೆ ಕೊಡಬೇಕಾದ ಉತ್ತರದ ಬಗ್ಗೆ ಅವರ ಆಲೋಚನೆಯನ್ನು ಕೇಳಿದನು.


ದಾವೀದನು ಮೂವತ್ತು ವರ್ಷದವನಾಗಿದ್ದಾಗ ಅರಸನಾಗಿ ನಾಲ್ವತ್ತು ವರ್ಷ ಆಳಿದನು.


ಹೀಗೆ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಅವನನ್ನು ಬಹಳವಾಗಿ ಪ್ರೀತಿಸಿದನು, ತನ್ನ ಆಯುಧಗಳನ್ನು ಹೊರುವುದಕ್ಕೆ ನೇಮಿಸಿಕೊಂಡನು.


ಆಗ ಜೋಸೆಫನಿಗೆ ಹದಿನೇಳು ವರ್ಷ, ಇನ್ನೂ ಯುವಕ, ತನ್ನ ಅಣ್ಣಂದಿರ ಜೊತೆಯಲ್ಲಿ, ಅಂದರೆ ತನ್ನ ಮಲತಾಯಿಯರಾದ ಬಿಲ್ಹಾ, ಜಿಲ್ಪಾ ಎಂಬುವರ ಮಕ್ಕಳ ಜೊತೆಯಲ್ಲಿ, ಆಡುಕುರಿಗಳನ್ನು ಮೇಯಿಸುತ್ತಿದ್ದ, ಅಣ್ಣಂದಿರು ಏನಾದರೂ ತಪ್ಪಿ ನಡೆದರೆ ತಂದೆಗೆ ವರದಿ ಮಾಡುತ್ತಿದ್ದ.


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ಯೇಸುಸ್ವಾಮಿ ಬೋಧಿಸಲು ಪ್ರಾರಂಭಿಸಿದಾಗ ಅವರಿಗೆ ಸುಮಾರು ಮೂವತ್ತು ವರ್ಷ ವಯಸ್ಸು. ಯೇಸು ಜೋಸೆಫನ ಮಗನೆಂದು ಜನರು ಭಾವಿಸಿದ್ದರು. ಜೋಸೆಫನು ಹೇಲಿಯನಿಗೆ ಹುಟ್ಟಿದನು.


ತನ್ನ ಕೆಲಸದಲ್ಲಿ ನಿಪುಣನಾದವನನ್ನು ಗುರುತುಹಚ್ಚು; ಅಂಥವನು ರಾಜರನ್ನಲ್ಲದೆ ನೀಚರನ್ನು ಸೇವಿಸಲಾರನು.


ಆದರೆ ಅವನು ಆ ಹಿರಿಯರ ಆಲೋಚನೆಯನ್ನು ನಿರಾಕರಿಸಿದನು. ತನ್ನ ಸಂಗಡ ಬೆಳೆದು ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರೆಸಿದನು.


ಆ ದೇಶದಲ್ಲಿ ಸುಭಿಕ್ಷದ ಏಳು ವರ್ಷಗಳಲ್ಲಿ ಭೂಮಿ ಹೇರಳವಾದ ಬೆಳೆಕೊಟ್ಟಿತು.


ಅಣ್ಣಂದಿರ ಗುರುತು ಜೋಸೆಫನಿಗೆ ತಿಳಿಯಿತಾದರೂ ಅವನ ಗುರುತು ಅವರಿಗೆ ತಿಳಿಯದೆ ಹೋಯಿತು.


ದೇಶಕ್ಕೆ ಬರಗಾಲ ಬಂದು ಈಗಾಗಲೇ ಎರಡು ವರ್ಷಗಳಾದವು. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ ಕೊಯ್ಯುವುದಕ್ಕಾಗಲಿ ಅವಕಾಶವಿಲ್ಲ.


ಅವರು ಅಂಗದೋಷವಿಲ್ಲದವರಾಗಿರಬೇಕು. ಸುಂದರರು, ಸಮಸ್ತ ಶಾಸ್ತ್ರಜ್ಞರು, ಪಂಡಿತರು, ವಿದ್ಯಾನಿಪುಣರು, ರಾಜಾಲಯದಲ್ಲಿ ಸನ್ನಿಧಿಸೇವೆಮಾಡಲು ಸಮರ್ಥರೂ ಆಗಿರಬೇಕು. ಅವರಿಗೆ ಬಾಬಿಲೋನ್ ಪಂಡಿತರ ಭಾಷೆಯನ್ನೂ ಶಾಸ್ತ್ರಗಳನ್ನೂ ಕಲಿಸಬೇಕು,” ಎಂದು ಅಪ್ಪಣೆಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು