Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:55 - ಕನ್ನಡ ಸತ್ಯವೇದವು C.L. Bible (BSI)

55 ಕ್ರಮೇಣ ಈಜಿಪ್ಟಿಗೂ ಬರ ಬಂದಾಗ ಪ್ರಜೆಗಳು ಆಹಾರಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಆಗ ಅವನು ಅವರಿಗೆ, “ಹೋಗಿ, ಜೋಸೆಫನ ಬಳಿಗೆ, ಅವನು ಹೇಳಿದಂತೆ ಮಾಡಿ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಐಗುಪ್ತ ದೇಶದಲ್ಲಿ ಬರ ಬಂದಾಗ ಪ್ರಜೆಗಳು ಆಹಾರ ಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಅವನು ಅವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಐಗುಪ್ತದೇಶಕ್ಕೆಲ್ಲಾ ಬರಬಂದಾಗ ಪ್ರಜೆಗಳು ಆಹಾರಬೇಕೆಂದು ಫರೋಹನಿಗೆ ಮೊರೆಯಿಟ್ಟುಕೊಂಡರು. ಅವನು ಅವರಿಗೆ - ಯೋಸೇಫನ ಬಳಿಗೆ ಹೋಗಿರಿ, ಅವನ ಮಾತಿನ ಮೇರೆಗೆ ಮಾಡಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಬರಗಾಲವು ಪ್ರಾರಂಭವಾದಾಗ ಜನರು ಆಹಾರಕ್ಕಾಗಿ ಫರೋಹನನ್ನು ಬೇಡಿಕೊಂಡರು. ಫರೋಹನು ಈಜಿಪ್ಟಿನ ಜನರಿಗೆ, “ಯೋಸೇಫನನ್ನು ಕೇಳಿರಿ; ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಈಜಿಪ್ಟ್‌ದವರೆಲ್ಲಾ ಹಸಿದು, ಜನರು ಆಹಾರಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ, ಫರೋಹನು ಎಲ್ಲಾ ಈಜಿಪ್ಟಿನವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ನಿಮಗೆ ಹೇಳುವುದನ್ನು ಮಾಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:55
13 ತಿಳಿವುಗಳ ಹೋಲಿಕೆ  

ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಆ ಸುತನಲ್ಲೇ ಇರಿಸಲು ನಿರ್ಧರಿಸಿದನು ಪಿತದೇವ ತನ್ನ ಸರ್ವಸಂಪೂರ್ಣತೆಯನು.


ನನ್ನ ದೇವರು ತಮ್ಮ ಮಹದೈಶ್ವರ್ಯದಿಂದ ನಿಮ್ಮ ಅಗತ್ಯಗಳನ್ನೆಲ್ಲಾ ಕ್ರಿಸ್ತಯೇಸುವಿನ ಮುಖಾಂತರ ಪೂರೈಸುವರು.


ತಾಯಿ ಸೇವಕರಿಗೆ, “ಆತ ಹೇಳಿದಂತೆ ಮಾಡಿ,” ಎಂದು ತಿಳಿಸಿದರು.


ಬರವು ದೇಶದಲ್ಲೆಲ್ಲ ಹರಡಿಕೊಂಡಾಗ ಜೋಸೆಫನು ಕಣಜಗಳನ್ನೆಲ್ಲ ತೆಗೆಸಿ, ಈಜಿಪ್ಟರಿಗೆ ಧಾನ್ಯವನ್ನು ಮಾರಿಸಿದನು. ಈಜಿಪ್ಟ್ ದೇಶದಲ್ಲಿ ಬರವು ಬಹು ಘೋರವಾಗಿತ್ತು.


ಆಗ ಈಜಿಪ್ಟ್ ದೇಶದಲ್ಲಿ ಅಧಿಕಾರ ನಡೆಸುತ್ತಿದ್ದವನು ಹಾಗೂ ಜನರಿಗೆ ದವಸಧಾನ್ಯ ಮಾರಾಟ ಮಾಡಿಸುತ್ತಿದ್ದವನು ಜೋಸೆಫನೇ. ಇಂತಿರಲು ಅವನ ಅಣ್ಣಂದಿರು ಬಂದು ಅವನ ಮುಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು