Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:57 - ಕನ್ನಡ ಸತ್ಯವೇದವು C.L. Bible (BSI)

57 ಅಂತೆಯೇ ಲೋಕದಲ್ಲೆಲ್ಲಾ ಬರವು ಭಯಂಕರವಾಗಿತ್ತು. ಎಲ್ಲ ದೇಶದವರು ಜೋಸೆಫನಿಂದ ಧಾನ್ಯ ಕೊಂಡುಕೊಳ್ಳಲು ಈಜಿಪ್ಟಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

57 ಇದಲ್ಲದೆ ಭೂಲೋಕದಲ್ಲೆಲ್ಲಾ ಬರವು ಭಯಂಕರವಾಗಿದ್ದದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

57 ಭೂಲೋಕದಲ್ಲೆಲ್ಲಾ ಕ್ಷಾಮವು ಭಯಂಕರವಾಗಿದ್ದುದರಿಂದ ಎಲ್ಲಾ ದೇಶಗಳವರು ಯೋಸೇಫನಿಂದ ಆಹಾರವನ್ನು ಪಡೆದುಕೊಳ್ಳುವುದಕ್ಕಾಗಿ ಈಜಿಪ್ಟಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 ಇದಲ್ಲದೆ ಭೂಮಿಯ ಮೇಲೆಲ್ಲಾ ಬರಗಾಲವು ಕಠಿಣವಾಗಿದ್ದದರಿಂದ, ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೆ ಈಜಿಪ್ಟಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:57
11 ತಿಳಿವುಗಳ ಹೋಲಿಕೆ  

ಕಾನಾನ್ ನಾಡಿನಲ್ಲೂ ಬರವಿತ್ತು. ಧಾನ್ಯ ಕೊಂಡುಕೊಳ್ಳಲು ಅಲ್ಲಿಂದ ಈಜಿಪ್ಟಿಗೆ ಬಂದವರಲ್ಲಿ ಯಕೋಬನ (ಇಸ್ರಯೇಲನ) ಮಕ್ಕಳೂ ಇದ್ದರು.


ಬರವು ದೇಶದಲ್ಲೆಲ್ಲ ಹರಡಿಕೊಂಡಾಗ ಜೋಸೆಫನು ಕಣಜಗಳನ್ನೆಲ್ಲ ತೆಗೆಸಿ, ಈಜಿಪ್ಟರಿಗೆ ಧಾನ್ಯವನ್ನು ಮಾರಿಸಿದನು. ಈಜಿಪ್ಟ್ ದೇಶದಲ್ಲಿ ಬರವು ಬಹು ಘೋರವಾಗಿತ್ತು.


ಜೋಸೆಫನು ಹೇಳಿದ್ದ ಪ್ರಕಾರವೇ ಕ್ಷಾಮದ ಏಳು ವರ್ಷಗಳು ಪ್ರಾರಂಭವಾದವು. ಬರವು ಸುತ್ತಮುತ್ತಲಿನ ಎಲ್ಲ ದೇಶಗಳಿಗೂ ಹಬ್ಬಿತು. ಈಜಿಪ್ಟಿನಲ್ಲಿ ಮಾತ್ರ ಆಹಾರ ದೊರಕುತ್ತಿತ್ತು.


ನೀವು ಯಾವ ದೇಶದಿಂದ ನಮ್ಮನ್ನು ಬರಮಾಡಿದಿರೋ ಆ ದೇಶದವರು, ‘ಸರ್ವೇಶ್ವರ ಇಸ್ರಯೇಲರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಲಾರದೆ ಹಗೆಮಾಡಿ, ಮರುಭೂಮಿಯಲ್ಲಿ ಕೊಲ್ಲುವುದಕ್ಕೇ ಕರೆದುಕೊಂಡು ಹೋದರು’ ಎಂದು ಹೇಳುವುದಕ್ಕೆ ಆಸ್ಪದವಾದೀತು.


ನೀವೇನೋ ನನಗೆ ಹಾನಿಮಾಡಬೇಕೆಂದು ಎಣಿಸಿದರು. ಆದರೆ ದೇವರು ಒಳಿತಾಗಬೇಕೆಂದು ಸಂಕಲ್ಪಿಸಿದರು; ಇದರಿಂದ ಅನೇಕ ಜನರ ಪ್ರಾಣ ಉಳಿಯುವಂತೆ ಮಾಡಿದರು. ಇಂದಿಗೂ ಈ ಕಾರ್ಯ ನಡೆಯುತ್ತಿದೆ.


ಈಜಿಪ್ಟಿನಲ್ಲಿ ದವಸಧಾನ್ಯ ದೊರಕುತ್ತದೆ ಎಂಬ ಸಮಾಚಾರ ಯಕೋಬನಿಗೆ ಮುಟ್ಟಿತು. ಅವನು ತನ್ನ ಮಕ್ಕಳಿಗೆ, “ನೀವು ಮುಖಮುಖ ನೋಡಿಕೊಂಡು ಸುಮ್ಮನಿರುವುದು ಸರಿಯಲ್ಲ.


ಕಾನಾನ್ ನಾಡಿನಲ್ಲಿ ಕ್ಷಾಮ ತಲೆದೋರಿತು. ಅದು ಘೋರವಾಗಿದ್ದುದರಿಂದ ಅಬ್ರಾಮನು ಕೆಲವು ಕಾಲ ಈಜಿಪ್ಟಿನಲ್ಲಿರಲು ಅಲ್ಲಿಗೆ ಇಳಿದುಹೋದನು.


ಬರವು ಕಾನಾನಿನಲ್ಲಿ ಘೋರವಾಗಿತ್ತು.


ಆಗ ಈಜಿಪ್ಟ್ ದೇಶದಲ್ಲಿ ಅಧಿಕಾರ ನಡೆಸುತ್ತಿದ್ದವನು ಹಾಗೂ ಜನರಿಗೆ ದವಸಧಾನ್ಯ ಮಾರಾಟ ಮಾಡಿಸುತ್ತಿದ್ದವನು ಜೋಸೆಫನೇ. ಇಂತಿರಲು ಅವನ ಅಣ್ಣಂದಿರು ಬಂದು ಅವನ ಮುಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು.


ಜೋಸೆಫನು ಈಜಿಪ್ಟ್ ದೇಶದವರಿಗೂ ಕಾನಾನ್ ನಾಡಿಗರಿಗೂ ದವಸಧಾನ್ಯ ಮಾರಿ ಬಂದ ಹಣದಿಂದ ಫರೋಹನ ಬೊಕ್ಕಸವನ್ನು ತುಂಬಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು