Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:8 - ಕನ್ನಡ ಸತ್ಯವೇದವು C.L. Bible (BSI)

8 ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡು ಇತ್ತು. ಈಜಿಪ್ಟ್ ದೇಶದ ಎಲ್ಲ ಜೋಯಿಸರನ್ನೂ ವಿದ್ವಾಂಸರನ್ನೂ ಬರಮಾಡಿದ. ಅವರಿಗೆ ತನ್ನ ಕನಸನ್ನು ವಿವರಿಸಿದ. ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಯಾರೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ, ವಿದ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬೆಳಿಗ್ಗೆ ಅವನು ಮನದಲ್ಲಿ ಕಳವಳಗೊಂಡು ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ ವಿದ್ವಾಂಸರನ್ನೂ ಕರಸಿ ಅವರಿಗೆ ತನ್ನ ಕನಸನ್ನು ತಿಳಿಸಲಾಗಿ ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಅವರಲ್ಲಿ ಒಬ್ಬರೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮರುದಿನ ಮುಂಜಾನೆ ಈ ಕನಸುಗಳ ಬಗ್ಗೆ ತುಂಬ ಚಿಂತೆಗೊಳಗಾಗಿ ಈಜಿಪ್ಟಿನಲ್ಲಿದ್ದ ಎಲ್ಲಾ ಮಂತ್ರಗಾರರನ್ನೂ ಎಲ್ಲಾ ವಿದ್ವಾಂಸರನ್ನೂ ಕರೆಯಿಸಿ ಕನಸುಗಳನ್ನು ತಿಳಿಸಿದನು. ಆದರೆ ಅವರಲ್ಲಿ ಯಾರಿಗೂ ಕನಸುಗಳ ಅರ್ಥವನ್ನು ತಿಳಿಸುವುದಕ್ಕಾಗಲಿ ವಿವರಿಸುವುದಕ್ಕಾಗಲಿ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡಿತು. ಆದ್ದರಿಂದ ಅವನು ಈಜಿಪ್ಟಿನ ಎಲ್ಲಾ ಮಂತ್ರವಾದಿಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೆಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ, ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:8
39 ತಿಳಿವುಗಳ ಹೋಲಿಕೆ  

ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರೆಲ್ಲರು ನನ್ನ ಸಮ್ಮುಖಕ್ಕೆ ಬಂದರು. ನಾನು ಕನಸನ್ನು ತಿಳಿಸಿದೆ. ಆದರೆ ಅದರ ಅರ್ಥವನ್ನು ಅವರಿಂದ ತಿಳಿಸಲಾಗಲಿಲ್ಲ.


ಆದರೆ ಈಜಿಪ್ಟ್ ದೇಶದ ಮಾಟಗಾರರು ಕೂಡ ತಮ್ಮ ಮಂತ್ರತಂತ್ರಗಳಿಂದ ಅದೇ ರೀತಿ ಮಾಡಿದರು. ಆದ್ದರಿಂದ ಫರೋಹನ ಹೃದಯ ಕಠಿಣವಾಯಿತು. ಸರ್ವೇಶ್ವರ ಈ ಮೊದಲೇ ತಿಳಿಸಿದ್ದಂತೆ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆಹೋದನು.


ಯೇಸುಸ್ವಾಮಿ ಜನಿಸಿದ್ದು ಹೆರೋದರಸನ ಕಾಲದಲ್ಲಿ: ಜುದೇಯ ನಾಡಿನ ಬೆತ್ಲೆಹೇಂ ಎಂಬ ಊರಿನಲ್ಲಿ.ಕೆಲವು ಜ್ಯೋತಿಷಿಗಳು ಪೂರ್ವದಿಕ್ಕಿನಿಂದ ಹೊರಟು ಜೆರುಸಲೇಮಿಗೆ ಬಂದರು.


ಹೀಗಿರುವಲ್ಲಿ ಭಯಂಕರವಾದ ಕನಸೊಂದನ್ನು ಕಂಡೆ. ನಿದ್ರೆಯಲ್ಲಿ ನನಗೆ ತೋಚಿದ ಆಲೋಚನೆಗಳು ಹಾಗು ಮನಸ್ಸಿಗೆ ಬಿದ್ದ ಸ್ವಪ್ನಗಳು ನನ್ನನ್ನು ಕಳವಳಕ್ಕೆ ಈಡುಮಾಡಿದವು.


ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಎಲ್ಲ ವಿಷಯಗಳಲ್ಲಿ ಅವರನ್ನು ವಿಚಾರಮಾಡಿದಾಗ ಸಮಸ್ತರಾಜ್ಯದಲ್ಲಿನ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.


ಇಂತಿರಲು ಇವರ ಮಧ್ಯೆ ಎಸಗುವೆನು ಅಧಿಕಾಶ್ಚರ್ಯವಾದ ಅದ್ಭುತಕಾರ್ಯಗಳನು, ಅಳಿವುದು ಇವರ ಜ್ಞಾನಿಗಳ ಜ್ಞಾನವು, ಅಡಗುವುದು ವಿವೇಕಿಗಳ ವಿವೇಕವು".


ಫರೋಹನು ಈಜಿಪ್ಟ್ ದೇಶದ ವಿದ್ವಾಂಸರನ್ನೂ ಮಂತ್ರಗಾರರನ್ನೂ ಕರೆಸಿದನು. ಆ ಮಾಟಗಾರರು ತಮ್ಮ ಮಂತ್ರತಂತ್ರಗಳಿಂದ ಅದೇ ರೀತಿಯಾಗಿ ಮಾಡಿದರು.


ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: "ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ!


‘ಲೊಚಗುಟ್ಟುವ, ಪಿಟಿಪಿಟಿಗುಟ್ಟುವ, ಕಣಿಹೇಳುವವರ ಮತ್ತು ಪ್ರೇತವಿಚಾರಕರ ಸಲಹೆ ಕೇಳಿ’ ಎಂದು ಜನರು ನಿಮಗೆ ಹೇಳಿಯಾರು. ಆಗ, ‘ದೇವರನ್ನೇ ಏಕೆ ವಿಚಾರಿಸಬಾರದು? ಜೀವಿತರಿಗಾಗಿ ಸತ್ತವರನ್ನು ವಿಚಾರಿಸುವುದು ಸರಿಯಲ್ಲ’ ಎಂದು ಅಂಥವರಿಗೆ ನೀವು ಹೇಳಬೇಕು.


“ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಬೇಡ; ಅವರ ಆಲೋಚನೆಯನ್ನು ಕೇಳಿ ಅಶುದ್ಧನಾಗಬೇಡ. ನಾನು ಸರ್ವೇಶ್ವರ.


ಮಾಟಗಾರರು ತಮ್ಮ ಮಂತ್ರತಂತ್ರಗಳಿಂದ ಹಾಗೆಯೇ ಮಾಡಿ ಈಜಿಪ್ಟ್ ದೇಶದ ಮೇಲೆ ಕಪ್ಪೆಗಳನ್ನು ಬರಮಾಡಿದರು.


ಅವರು, “ನಮಗೆ ಸ್ವಪ್ನಬಿತ್ತು; ಅದರ ಅರ್ಥ ಹೇಳುವವರು ಯಾರೂ ಇಲ್ಲ,” ಎಂದರು. ಜೋಸೆಫನು ಅವರಿಗೆ, “ಸ್ವಪ್ನಗಳ ಅರ್ಥ ದೇವರಿಂದ ದೊರಕಬಹುದಲ್ಲವೆ? ದಯವಿಟ್ಟು ನಿಮ್ಮ ಸ್ವಪ್ನಗಳನ್ನು ನನಗೆ ತಿಳಿಸಿ,” ಎಂದ.


ಬೆಳಿಗ್ಗೆ ಜೋಸೆಫನು ಅವರ ಬಳಿಗೆ ಬಂದಾಗ ಚಿಂತಾಕ್ರಾಂತರಾಗಿರುವುದು ಕಾಣಿಸಿತು.


“ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು ಜಾಣರ ಜಾಣತನಕ್ಕೆ ಭಂಗತರುವೆನು” ಎಂದು ಪವಿತ್ರಗ್ರಂಥದಲ್ಲಿ ಇದೆಯಲ್ಲವೇ?


ಕೆಲವು ಎಪಿಕೂರಿಯ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರೂ ಕೂಡ ಅವನೊಡನೆ ವಾದಿಸಿದರು. ಕೆಲವರು “ಈ ಬಾಯಿಬಡುಕ ಹೇಳುವುದಾದರೂ ಏನು?” ಎಂದರು. ಪೌಲನು ಯೇಸುಸ್ವಾಮಿಯ ವಿಷಯವಾಗಿಯೂ ಪುನರುತ್ಥಾನದ ವಿಷಯವಾಗಿಯೂ ಬೋಧಿಸುತ್ತಿದ್ದುದರಿಂದ ಮತ್ತೆ ಕೆಲವರು ‘ಇವನು ವಿದೇಶೀಯ ದೇವರುಗಳ ಬಗ್ಗೆ ಮಾತನಾಡುವಂತೆ ಕಾಣುತ್ತದೆ,’ ಎಂದರು.


ಅವನು ಈಜಿಪ್ಟರ ಸಕಲ ವಿದ್ಯೆಗಳಲ್ಲಿ ಪಾರಂಗತನಾಗಿ, ನಡೆಯಲ್ಲೂ ನುಡಿಯಲ್ಲೂ ಸಮರ್ಥನಾದನು.


ಇದಕೇಳಿ ನಡುನಡುಗಿತು ನನ್ನ ಒಡಲು ಅದುರಿದವು ಆ ಶಬ್ದಕ್ಕೆ ನನ್ನ ತುಟಿಗಳು ಕೊಳೆತಂತಾದವು ನನ್ನೆಲುಬುಗಳು ನಿಂತಲ್ಲೇ ತತ್ತರಿಸಿದವು ನನ್ನ ಕಾಲುಗಳು ಆಪತ್ತು ಬಂದೊದಗುವುದು ನಮ್ಮನ್ನು ಆಕ್ರಮಿಸುವವರಿಗೆ ಕಾದಿರುವೆ ನಾನು ಸಹನಶೀಲನಾಗಿ ಅಂದಿನವರೆಗೆ.


ದಾನಿಯೇಲನಾದ ನಾನು ಮೂರ್ಛೆಗೊಂಡೆ. ಕೆಲವು ದಿವಸ ಕಾಯಿಲೆ ಬಿದ್ದೆ. ಆಮೇಲೆ ಎದ್ದು ರಾಜಕಾರ್ಯವನ್ನು ಆರಂಭಿಸಿದೆ. ಆದರೂ ಆ ಕನಸಿಗೆ ಬೆಚ್ಚಿಬೆರಗಾದೆ. ಅದರ ಅರ್ಥವನ್ನು ಗ್ರಹಿಸಿಕೊಳ್ಳಲಾಗಲಿಲ್ಲ.


ಇಲ್ಲಿಗೆ ಆ ಕನಸಿನ ವಿವರ ಮುಗಿಯಿತು. ದಾನಿಯೇಲನಾದ ನಾನು ನನ್ನ ಆಲೋಚನೆಗಳಿಂದ ಬಹಳ ಕಳವಳಗೊಂಡೆ. ನನ್ನ ಮುಖ ಬಾಡಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲೇ ಇಟ್ಟುಕೊಂಡೆ.


ನಿಮ್ಮ ತಂದೆಯ ಕಾಲದಲ್ಲಿ ಬುದ್ಧಿವಂತಿಕೆ, ತಿಳುವಳಿಕೆ, ದೇವರುಗಳಿಗೆ ಸಮಾನವಾದ ಜ್ಞಾನ ಅವನಲ್ಲಿ ಕಂಡುಬಂದುವು. ನಿಮ್ಮ ತಂದೆ ರಾಜ ನೆಬೂಕದ್ನೆಚ್ಚರನು, ಅವನನ್ನು ಜೋಯಿಸರಿಗೂ ಮಂತ್ರವಾದಿಗಳಿಗೂ ಪಂಡಿತರಿಗೂ ಶಾಕುನಿಕರಿಗೂ ಅಧ್ಯಕ್ಷನನ್ನಾಗಿ ನೇಮಿಸಿದ್ದರು.


ಈಜಿಪ್ಟಿನವರ ಚೈತನ್ಯ ಉಡುಗಿಹೋಗುವುದು. ಅವರ ಯೋಜನೆಗಳು ಭಂಗವಾಗುವುವು. ಜನರು ವಿಗ್ರಹಗಳನ್ನು, ಮಂತ್ರಗಾರರನ್ನು, ಪ್ರೇತವಿಚಾರಕರನ್ನು, ಕಣಿಹೇಳುವವರನ್ನು ಆಶ್ರಯಿಸುವರು.”


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


“ಯಾರಾದರು ಭೂತ-ಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆಯನ್ನು ಕೇಳಿ, ದೇವದ್ರೋಹಿಯಾದರೆ ನಾನು ಅಂಥ ವ್ಯಕ್ತಿಗೆ ವಿಮುಖನಾಗಿ ಅವನನ್ನು ತನ್ನ ಜನತೆಯಿಂದ ತೆಗೆದುಹಾಕುವೆನು.


ಆ ಹುಣ್ಣುಗಳು ಮಂತ್ರವಾದಿಗಳಲ್ಲೂ ಈಜಿಪ್ಟಿನವರೆಲ್ಲರಲ್ಲೂ ಇದ್ದುದರಿಂದ ಆ ಮಂತ್ರವಾದಿಗಳು ಹುಣ್ಣುಗಳ ನಿಮಿತ್ತ ಮೋಶೆಯ ಮುಂದೆ ನಿಲ್ಲಲಾರದೆ ಹೋದರು.


ಬತ್ತಿಹೋಗಿದ್ದ ಈ ತೆನೆಗಳು, ಕಾಳುತುಂಬಿದ್ದ ಆ ಏಳು ಬಲಿತ ತೆನೆಗಳನ್ನು ನುಂಗಿಬಿಟ್ಟವು. ಅಷ್ಟರೊಳಗೆ ಫರೋಹನು ಎಚ್ಚೆತ್ತು, ತಾನು ಕಂಡದ್ದು ಕನಸೆಂದು ತಿಳಿದುಕೊಂಡ.


ಫರೋಹನು ಅವನಿಗೆ, “ನಾನು ಒಂದು ಕನಸುಕಂಡೆ, ಅದರ ಅರ್ಥ ಹೇಳಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳಬಲ್ಲೆ ಎಂಬ ಸಮಾಚಾರ ಕೇಳಿದ್ದೇನೆ,” ಎಂದ.


ಫಿಲಿಷ್ಟಿಯರು ಅವರ ಪೂಜಾರಿಗಳನ್ನೂ ಮಂತ್ರಗಾರರನ್ನೂ ಕರೆದು, “ಸರ್ವೇಶ್ವರನ ಮಂಜೂಷವನ್ನು ಏನು ಮಾಡಬೇಕು? ಅದನ್ನು ಮರಳಿ ಅದರ ಸ್ಥಳಕ್ಕೆ ಹೇಗೆ ಕಳುಹಿಸುವುದು? ನಮಗೆ ತಿಳಿಸಿ,” ಎಂದು ಕೇಳಿಕೊಂಡರು.


ಆದ್ದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಬೇಕೆಂದು ಬಾಬಿಲೋನಿನ ವಿದ್ವಾಂಸರೆಲ್ಲರನ್ನು ಕರೆದುತರಬೇಕೆಂದು ಆಜ್ಞಾಪಿಸಿದೆ.


‘ಇದೇ ನಾನು ಕಂಡ ಕನಸು. ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರಿಂದಲೂ ಇದರ ಅರ್ಥವನ್ನು ಹೇಳಲಾಗಲಿಲ್ಲ. ಅದನ್ನು ನೀನು ತಿಳಿಸು. ಪರಿಶುದ್ಧ ದೇವರ ಆತ್ಮ ನಿನ್ನಲ್ಲಿ ನೆಲೆಸಿರುವುದರಿಂದ ಇದು ನಿನ್ನಿಂದ ಸಾಧ್ಯ’,” ಎಂದನು ರಾಜ ನೆಬೂಕದ್ನೆಚ್ಚರನು.


ಬತ್ತಿಹೋಗಿದ್ದ ತೆನೆಗಳು ಕಾಳು ತುಂಬಿದ್ದ ಆ ಏಳು ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆ; ಅವುಗಳ ಅರ್ಥವನ್ನು ವಿವರಿಸಿ ಹೇಳಲು ಅವರಲ್ಲಿ ಯಾರಿಂದಲೂ ಆಗಲಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು