ಆದಿಕಾಂಡ 42:11 - ಕನ್ನಡ ಸತ್ಯವೇದವು C.L. Bible (BSI)11 ನಾವೆಲ್ಲರು ಒಬ್ಬ ತಂದೆಯ ಮಕ್ಕಳು; ನಾವು ಸತ್ಯವಂತರೇ ಹೊರತು ಗೂಢಚಾರರಲ್ಲ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾವೆಲ್ಲರೂ ಒಬ್ಬನೇ ತಂದೆಯ ಮಕ್ಕಳು. ನಾವು ಸತ್ಯವಂತರಾಗಿದ್ದೇವೆ ಹೊರತು ಗೂಢಚಾರರಲ್ಲ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾವು ಯಥಾರ್ಥವಾಗಿ ಬಂದವರೇ ಹೊರತು ಗೂಢಚಾರರಲ್ಲ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾವೆಲ್ಲರೂ ಸಹೋದರರು. ನಮ್ಮೆಲ್ಲರಿಗೂ ಒಬ್ಬನೇ ತಂದೆ. ನಾವು ಯಥಾರ್ಥವಾಗಿ ಬಂದವರೇ ಹೊರತು ಗೂಢಚಾರರಲ್ಲ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಾವೆಲ್ಲರೂ ಒಬ್ಬ ಮನುಷ್ಯನ ಪುತ್ರರಾಗಿದ್ದು ಸತ್ಯವಂತರಾಗಿದ್ದೇವೆ. ಆದ್ದರಿಂದ ನಿನ್ನ ದಾಸರು ಗೂಢಚಾರರಲ್ಲ,” ಎಂದರು. ಅಧ್ಯಾಯವನ್ನು ನೋಡಿ |
ಆಗ ಅವರು, ”ಆ ಮನುಷ್ಯ ನಿಮ್ಮ ವಿಷಯದಲ್ಲೂ ನಮ್ಮ ಮನೆಯವರ ವಿಷಯದಲ್ಲೂ ಸೂಕ್ಷ್ಮವಾಗಿ ವಿಚಾರಿಸಿದ; ನಿಮ್ಮ ತಂದೆ ಇನ್ನು ಜೀವದಿಂದ ಇದ್ದಾನೋ? ನಿಮಗೆ ತಮ್ಮನಿದ್ದಾನೋ? ಎಂದೆಲ್ಲ ಅವನೇ ಕೇಳಿದ. ಆ ಪ್ರಶ್ನೆಗಳಿಗೆ ನಾವು ತಕ್ಕ ಉತ್ತರ ಕೊಡಬೇಕಾಯಿತು. ಅಲ್ಲದೆ, ಅವನು ‘ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿ', ಎಂದು ಕೇಳುತ್ತಾನೆಂದು ತಿಳಿಯಲು ನಮಗೆ ಹೇಗೆ ಸಾಧ್ಯವಿತ್ತು?” ಎಂದರು.