Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:2 - ಕನ್ನಡ ಸತ್ಯವೇದವು C.L. Bible (BSI)

2 ಈಜಿಪ್ಟಿನಲ್ಲಿ ದವಸಧಾನ್ಯ ಉಂಟೆಂದು ನಾನು ಕೇಳಿದ್ದೇನೆ, ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ, ಬೇಕಾದ ದವಸವನ್ನು ಕೊಂಡುಕೊಂಡು ಬನ್ನಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಖರೀದಿಸಿಕೊಂಡು ಬನ್ನಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಕೇಳಿದ್ದೇನೆ; ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಕೊಂಡುಕೊಂಡು ಬನ್ನಿರಿ ಎಂದು ಹೇಳಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈಜಿಪ್ಟಿನಲ್ಲಿ ದವಸಧಾನ್ಯಗಳಿರುವುದಾಗಿ ನಾನು ಕೇಳಿದ್ದೇನೆ. ಆದ್ದರಿಂದ ನಾವು ಅಲ್ಲಿಗೆ ಹೋಗಿ ನಮ್ಮ ಆಹಾರವನ್ನು ಕೊಂಡುಕೊಳ್ಳೋಣ. ಆಗ ನಾವು ಸಾಯದೆ ಬದುಕಿಕೊಳ್ಳುವೆವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಮುಂದುವರಿಸಿ, “ಈಜಿಪ್ಟಿನಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ, ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡುಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:2
11 ತಿಳಿವುಗಳ ಹೋಲಿಕೆ  

ಆಗ ಯೆಹೂದನು ತನ್ನ ತಂದೆ ಯಕೋಬನಿಗೆ, “ನೀವು, ನಾವು ಮತ್ತು ನಮ್ಮ ಮಕ್ಕಳು, ಎಲ್ಲರೂ ಸಾಯದೆ ಉಳಿಯಬೇಕಾದರೆ ಆ ಹುಡುಗನನ್ನು ನನ್ನ ಜೊತೆ ಕಳಿಸಿಕೊಡಿ, ನಾವು ಇದೀಗಲೆ ಹೊರಡುತ್ತೇವೆ.


ಅದಕ್ಕೆ ಯೇಸುಸ್ವಾಮಿ, “ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ, ‘ಮಾನವನು ಜೀವಿಸುವುದು ಆಹಾರದಿಂದ ಮಾತ್ರವಲ್ಲ; ದೇವರಾಡುವ ಪ್ರತಿಯೊಂದು ನುಡಿಯಿಂದ’,” ಎಂದರು.


ಆ ದಿನಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ. ಆದುದರಿಂದ ನಿನ್ನ ಸಂಸಾರವನ್ನು ವ್ಯವಸ್ಥೆಮಾಡಬೇಕು ಎಂದು ಸರ್ವೇಶ್ವರ ಹೇಳಿದ್ದಾರೆ,” ಎಂದು ತಿಳಿಸಿದನು.


ಸಾಯೆನು, ಜೀವದಿಂದಿರುವೆನು ನಾನು I ಪ್ರಭುವಿನ ಕಾರ್ಯಗಳನು ಸಾರುವೆನು II


“ನೀವು ನನ್ನ ತಂದೆಯ ಬಳಿಗೆ ಬೇಗನೆ ಹೋಗಿ ಅವರಿಗೆ, ‘ನಿಮ್ಮ ಮಗ ಜೋಸೆಫ್ ಹೀಗೆನ್ನುತ್ತಾನೆ; ‘ದೇವರು ನನ್ನನ್ನು ಈಜಿಪ್ಟ್ ದೇಶಕ್ಕೆ ಮುಖ್ಯಮಂತ್ರಿಯನ್ನಾಗಿ ನೇಮಿಸಿದ್ದಾರೆ. ನೀವು ತಡಮಾಡದೆ ನನ್ನ ಬಳಿಗೆ ಬರಬೇಕು.


ನೀವು ನಮ್ಮ ತಮ್ಮನನ್ನು ಜೊತೆಯಲ್ಲಿ ಕಳಿಸಿದರೆ, ಹೋಗಿ ಧಾನ್ಯವನ್ನು ಕೊಂಡುಕೊಂಡು ಬರುತ್ತೇವೆ.


ಈಜಿಪ್ಟಿನಿಂದ ತಂದ ದವಸಧಾನ್ಯ ಮುಗಿದು ಹೋಗಿತ್ತು. ಯಕೋಬನು ತನ್ನ ಪುತ್ರರಿಗೆ, ” ನೀವು ಪುನಃ ಹೋಗಿ ಸ್ವಲ್ಪ ಧಾನ್ಯವನ್ನು ಕೊಂಡುಕೊಂಡು ಬನ್ನಿ,” ಎಂದನು.


ಈಜಿಪ್ಟ್ ದೇಶದಲ್ಲಿ ಧಾನ್ಯ ಇರುವುದೆಂದು ಅರಿತು ಯಕೋಬನು, ಮೊದಲ ಬಾರಿಗೆ ತನ್ನ ಪುತ್ರರನ್ನು ಅಲ್ಲಿಗೆ ಕಳುಹಿಸಿದನು.


ಜೋಸೆಫನ ಹತ್ತುಮಂದಿ ಅಣ್ಣಂದಿರು ಧಾನ್ಯವನ್ನು ತರುವುದಕ್ಕಾಗಿ ಈಜಿಪ್ಟ್ ದೇಶಕ್ಕೆ ಹೊರಟರು.


ಪ್ರಭುವಾದರೋ ಕಟಾಕ್ಷಿಸುವನು ತನಗಂಜಿ ನಡೆದವರನು I ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು II


ತಪ್ಪಿಸುವನವನು ಪ್ರಾಣವನು ಮರಣದಿಂದ I ಉಳಿಸುವನು ಜೀವವನು ಕ್ಷಾಮಡಾಮರದಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು