Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:20 - ಕನ್ನಡ ಸತ್ಯವೇದವು C.L. Bible (BSI)

20 ಆದರೆ ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು, ಕರೆದುಕೊಂಡು ಬಂದರೆ, ನಿಮ್ಮ ಮಾತು ಸತ್ಯವೆಂದು ತಿಳಿದುಕೊಳ್ಳುತ್ತೇನೆ, ಆಗ ನೀವು ಸಾಯದೆ ಉಳಿಯುವಿರಿ,” ಎಂದನು. ಅವರು ಹಾಗೆಯೇ ಮಾಡಲು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ ನಿಮ್ಮ ಮಾತನ್ನು ಸತ್ಯವೆಂದು ನಾನು ತಿಳಿದುಕೊಳ್ಳುವುದರಿಂದ ನೀವು ಸಾಯುವುದಿಲ್ಲ” ಎಂದನು. ಅವರು ಹಾಗೆಯೇ ಮಾಡಲು ಒಪ್ಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನನ್ನ ಬಳಿಗೆ ಕರೆದುಕೊಂಡು ಬರಬೇಕು; ಕರೆದುಕೊಂಡು ಬಂದರೆ, ನಿಮ್ಮ ಮಾತನ್ನು ಸತ್ಯವೆಂದು ನಾನು ತಿಳಿದುಕೊಳ್ಳುವದರಿಂದ ನೀವು ಸಾಯುವದಿಲ್ಲ ಅಂದನು. ಅವರು ಆ ಮಾತಿಗೆ ಒಪ್ಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಮೇಲೆ ನಿಮ್ಮ ಕಿರಿಯ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬಂದರೆ ನೀವು ಹೇಳುತ್ತಿರುವುದು ಸತ್ಯವೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು. ಸಹೋದರರು ಇದಕ್ಕೆ ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ಕರೆತನ್ನಿರಿ. ಆಗ ನಿಮ್ಮ ಮಾತುಗಳು ಸತ್ಯವೆಂದು ದೃಢವಾಗುವವು. ನೀವು ಸಾಯದೆ ಉಳಿಯುವಿರಿ,” ಎಂದನು. ಅವರು ಹಾಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:20
12 ತಿಳಿವುಗಳ ಹೋಲಿಕೆ  

ಅದಕ್ಕೆ ತಾವು, 'ನಿಮ್ಮ ತಮ್ಮನು ಬಾರದಿದ್ದರೆ ನೀವು ಮತ್ತೊಮ್ಮೆ ನನ್ನ ಮುಖವನ್ನು ನೋಡಕೂಡದು,’ ಎಂದು ಆಜ್ಞೆಕೊಟ್ಟಿರಿ.


ಕಳಿಸಿಕೊಡದಿದ್ದರೆ, ನಾವು ಹೋಗುವುದಿಲ್ಲ. ಆ ಮನುಷ್ಯ, ‘ನಿಮ್ಮ ತಮ್ಮ ನಿಮ್ಮ ಸಂಗಡ ಇಲ್ಲದಿದ್ದರೆ ಸಮ್ಮುಖಕ್ಕೆ ಬರಲೇ ಕೂಡದು’ ಎಂದಿದ್ದಾನೆ".


ಆದರೆ ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ, ನೀವು ಗೂಢಚಾರರಲ್ಲ. ಸತ್ಯವಂತರೇ ಎಂದು ತಿಳಿದುಕೊಳ್ಳುತ್ತೇನೆ; ನಿಮ್ಮ ಅಣ್ಣನನ್ನು ಬಿಡುಗಡೆ ಮಾಡುತ್ತೇನೆ ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ನಡೆಸಬಹುದು,” ಎಂದು ಹೇಳಿದ.


ಇದು ನಿಜವೋ ಸುಳ್ಳೋ ಎಂದು ಗೊತ್ತಾಗಬೇಕಾದರೆ ನೀವು ನಿಮ್ಮ ತಮ್ಮನನ್ನು ಬರಮಾಡಬೇಕು. ಅವನು ಬಂದ ಹೊರತು, ಫರೋಹನ ಜೀವದಾಣೆ, ನೀವು ಇಲ್ಲಿಂದ ಹೊರಟುಹೋಗಕೂಡದು.


ತಾಯಿ ಸೇವಕರಿಗೆ, “ಆತ ಹೇಳಿದಂತೆ ಮಾಡಿ,” ಎಂದು ತಿಳಿಸಿದರು.


ಮನೆಯ ಬಾಗಿಲ ಬಳಿ ಗೃಹನಿರ್ವಾಹಕನಿಗೆ,


ಅಣ್ಣಂದಿರು ತಾವು ಕೊಂಡುಕೊಂಡ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಹೊರಟರು.


ನೋಹನು ಹಾಗೆಯೇ ಮಾಡಿದನು. ದೇವರ ಆಜ್ಞಾನುಸಾರ ನಡೆದುಕೊಂಡನು.


ನೀವು ಸತ್ಯವಂತರಾದರೆ ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿಡುತ್ತೇನೆ. ಮಿಕ್ಕವರು ಕ್ಷಾಮದಿಂದ ಬಳಲುತ್ತಿರುವ ನಿಮ್ಮ ನಿಮ್ಮ ಕುಟುಂಬಗಳಿಗೆ ಅಗತ್ಯವಾದ ಧಾನ್ಯವನ್ನು ತೆಗೆದುಕೊಂಡು ಹೋಗಿ.


ಅದಕ್ಕೆ ಆ ದೇಶಾಧಿಪತಿ, “ನೀವು ಸತ್ಯವಂತರೋ ಇಲ್ಲವೋ ಎಂಬುದು ಗೊತ್ತಾಗುವುದಕ್ಕಾಗಿ ನಿಮ್ಮಲ್ಲಿ ಒಬ್ಬನನ್ನು ನನ್ನ ಬಳಿಯಲ್ಲೆ ಬಿಟ್ಟುಹೋಗಿ; ನಿಮ್ಮ ಕುಟುಂಬದವರ ಕ್ಷಾಮನಿವಾರಣೆಗೆ ಬೇಕಾದುದನ್ನು ತೆಗೆದುಕೊಂಡು ಹೋಗಬಹುದು.


ಅದಕ್ಕೆ ತಾವು ಸೇವಕರಾದ ನಮಗೆ, “ನಾನು ಆ ಹುಡುಗನನ್ನು ನೋಡಬೇಕು, ಅವನನ್ನು ನನ್ನ ಬಳಿಗೆ ಕರೆದು ತನ್ನಿ,’ ಎಂದು ಅಪ್ಪಣೆಕೊಟ್ಟಿರಿ.


ಅದಕ್ಕೆ ಯೆಹೂದನು ಹೀಗೆಂದನು: “ಆ ಮನುಷ್ಯ ನಮಗೆ, ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ದರ್ಶನಕ್ಕೆ ಬರಕೂಡದು’ ಎಂದು ಕಡುಖಂಡಿತವಾಗಿ ಹೇಳಿಬಿಟ್ಟಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು