Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:21 - ಕನ್ನಡ ಸತ್ಯವೇದವು C.L. Bible (BSI)

21 ಆಗ ಅವರು ತಮ್ಮತಮ್ಮೊಳಗೆ, “ನಾವು ನಮ್ಮ ತಮ್ಮನಿಗೆ ಮಾಡಿದ ದ್ರೋಹಕ್ಕೆ ತಕ್ಕ ದಂಡನೆಯನ್ನು ಅನುಭವಿಸುತ್ತಿದ್ದೇವೆ. ಅವನು ನಮ್ಮನ್ನು ಕಳಕಳಿ ಬೇಡಿಕೊಂಡ. ಅವನ ಪ್ರಾಣಸಂಕಟವನ್ನು ತಿಳಿದೂ ನಾವು ಅವನ ಮೊರೆಗೆ ಕಿವಿಗೊಡಲಿಲ್ಲ. ಆದ್ದರಿಂದಲೆ ಈ ಸಂಕಟದಲ್ಲಿ ಸಿಕ್ಕಿಹಾಕಿಕೊಂಡು ಇದ್ದೇವೆ,” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಅವರು ತಮ್ಮ ತಮ್ಮೊಳಗೆ ಮಾತನಾಡಿಕೊಂಡು, “ನಾವು ನಮ್ಮ ತಮ್ಮನಿಗೆ ಮಾಡಿದ್ದು ಅಪರಾಧವೇ ಸರಿ. ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ. ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದರೆ ಅವರು ತಮ್ಮತಮ್ಮೊಳಗೆ - ನಾವು ನಮ್ಮ ತಮ್ಮನಿಗೆ ಮಾಡಿದ್ದು ದ್ರೋಹವೇ ಸರಿ; ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ; ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವರು ಒಬ್ಬರಿಗೊಬ್ಬರು, “ನಾವು ನಮ್ಮ ತಮ್ಮನಾದ ಯೋಸೇಫನಿಗೆ ಮಾಡಿದ ಕೆಟ್ಟಕಾರ್ಯಕ್ಕಾಗಿ ಈ ಶಿಕ್ಷೆಯನ್ನು ಅನುಭವಿಸುತ್ತಿದ್ದೇವೆ. ಪ್ರಾಣಸಂಕಟದಲ್ಲಿದ್ದ ಅವನು ತನ್ನನ್ನು ಕಾಪಾಡುವಂತೆ ನಮ್ಮನ್ನು ಬೇಡಿಕೊಂಡರೂ ನಾವು ಅವನ ಮೊರೆಯನ್ನು ತಿರಸ್ಕರಿಸಿದೆವು. ಆದ್ದರಿಂದ ಈಗ ಪ್ರಾಣಸಂಕಟಕ್ಕೀಡಾಗಿದ್ದೇವೆ” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಅವರು, “ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ, ಅವನ ಪ್ರಾಣಸಂಕಟವನ್ನು ಕಂಡರೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು,” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:21
29 ತಿಳಿವುಗಳ ಹೋಲಿಕೆ  

“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”


ಪ್ರತಿಯಾಗಿ, ನಮ್ಮ ಪಾಪಗಳನ್ನು ಒಪ್ಪಿಕೊಂಡರೆ, ಆಗ ನಂಬಿಕಸ್ಥರೂ ನೀತಿವಂತರೂ ಆದ ದೇವರು ನಮ್ಮ ಪಾಪಗಳನ್ನು ಕ್ಷಮಿಸಿ ಎಲ್ಲಾ ಅನೀತಿ - ಅಧರ್ಮಗಳಿಂದ ನಮ್ಮನ್ನು ಶುದ್ಧೀಕರಿಸುತ್ತಾರೆ.


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ಭಕ್ತವಿಶ್ವಾಸಿಗಳಾದ ಅನೇಕರು ಮುಂದೆ ಬಂದು ತಮ್ಮ ದುಷ್ಕೃತ್ಯಗಳನ್ನು ಬಹಿರಂಗವಾಗಿ ಒಪ್ಪಿಕೊಂಡು ನಿವೇದಿಸಿದರು.


ನನಗೆ ಐವರು ಸೋದರರಿದ್ದಾರೆ; ಅವರೂ ಈ ಯಾತನಾಸ್ಥಳಕ್ಕೆ ಬಾರದಂತೆ ಇವನು ಹೋಗಿ ಎಚ್ಚರಿಕೆ ಕೊಡಲಿ,’ ಎಂದು ಬೇಡಿಕೊಂಡ.


ನರಕದಲ್ಲಿ ಅವರನ್ನು ಕಡಿಯುವ ಹುಳ ಸಾಯದು, ಸುಡುವ ಬೆಂಕಿ ಆರದು.


ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.


ಆದಕಾರಣ ಸರ್ವೇಶ್ವರನಾದ ನಾನು ಹೇಳುವುದು ಇದು - ನೀವು ನನ್ನ ಮಾತನ್ನು ಕೇಳಲಿಲ್ಲ, ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ. ಇಗೋ ಸರ್ವೇಶ್ವರನಾದ ನನ್ನ ನುಡಿ: ಖಡ್ಗ-ವ್ಯಾಧಿ-ಕ್ಷಾಮ ಇವುಗಳಿಗೆ ನೀವು ಗುರಿ ಆಗುವಂತೆ ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ. ಲೋಕದ ಸಮಸ್ತ ರಾಜ್ಯಗಳ ಕಣ್ಣಿಗೆ ನೀವು ಭಯಾಸ್ಪದವಾಗುವಂತೆ ಮಾಡುವೆನು.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವುವು. ನಿನಗೆ ನನ್ನ ಭಯವಿಲ್ಲದೆ ನಿನ್ನ ದೇವರಾದ ಸರ್ವೇಶ್ವರನಾದ ನನ್ನನ್ನು ತೊರೆದುಬಿಟ್ಟದ್ದು ನಿನಗೆ ಕೆಟ್ಟದ್ದಾಗಿಯೂ ಕಹಿಯಾಗಿಯೂ ಪರಿಣಮಿಸುವುದು. ಇದನ್ನು ಚೆನ್ನಾಗಿ ಗ್ರಹಿಸಿಕೊ, ಕಣ್ಣಾರೆ ನೋಡು. ಇದು ಸರ್ವಶಕ್ತನೂ, ಸ್ವಾಮಿ ಸರ್ವೇಶ್ವರನೂ ಆದ ನನ್ನ ನುಡಿ.”


ನಿನಗೆ ಮಾರ್ಗದರ್ಶಿಯಾಗಿದ್ದ, ನಿನಗೆ ದೇವರಾಗಿದ್ದ ಸರ್ವೇಶ್ವರನಾದ ನನ್ನನ್ನೇ ತೊರೆದುಬಿಟ್ಟು ಇದನ್ನೆಲ್ಲ ನೀನೇ ನಿನ್ನ ಮೇಲೆ ಬರಮಾಡಿಕೊಂಡಿರುವೆ.


ನರಹತ್ಯಮಾಡಿದ ಪಾಪಾತ್ಮನು ಪಾತಾಳದತ್ತ ಓಡೋಡುತ್ತಿರುವನು; ಅವನನ್ನು ಯಾರೂ ತಡೆಯಬಾರದು.


ಬಡವನ ಮೊರೆಗೆ ಕಿವಿ ಮುಚ್ಚಿಕೊಳ್ಳುವವನೇ, ನೀನೇ ಮೊರೆಯಿಡುವಾಗ ಉತ್ತರಕೊಡುವವರಾರು ನಿನಗೆ?


ಆಗ ಆಕೆ ಎಲೀಯನಿಗೆ, “ದೈವಪುರುಷನೇ, ನನ್ನ ವಿರುದ್ಧ ನಿನಗೇನಿದೆ? ನೀನು ನನ್ನ ಪಾಪವನ್ನು ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿಯೋ?” ಎಂದಳು.


ಆಗ ದಾವೀದನು ನಾತಾನನಿಗೆ, “ನಾನು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದೇನೆ,” ಎಂದು ಹೇಳಿದನು. ನಾತಾನನು ಅವನಿಗೆ, “ಸರ್ವೇಶ್ವರ ನಿನ್ನ ಪಾಪವನ್ನು ಕ್ಷಮಿಸಿದ್ದಾರೆ; ನೀನು ಸಾಯುವುದಿಲ್ಲ.


ಆಗ ಅದೋನೀಬೆಜೆಕನು, “ಎಪ್ಪತ್ತು ಮಂದಿ ಅರಸರ ಕೈಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿದೆ; ನನ್ನ ಊಟದ ಮೇಜಿನ ಕೆಳಗೆ ಬೀಳುತ್ತಿದ್ದ ಚೂರುಪಾರುಗಳನ್ನು ಅವರು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾರೆ,” ಎಂದನು. ಅವನನ್ನು ಜೆರುಸಲೇಮಿಗೆ ಕರೆತರಲು ಅವನು ಅಲ್ಲೇ ನಿಧನನಾದನು.


ನೀವು ಹಾಗೇನಾದರೂ ಮಾಡದೆ ಹೋದರೆ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರಾಗುವಿರಿ. ನಿಮ್ಮನ್ನು ದಂಡಿಸುವ ತನಕ ನಿಮ್ಮ ಪಾಪ ನಿಮ್ಮ ಬೆನ್ನತ್ತಿಬರುವುದೆಂದು ತಿಳಿದಿರಿ.


ಆಗ ಪಾನಸೇವಕರಲ್ಲಿ ಮುಖ್ಯಸ್ಥನು ಫರೋಹನಿಗೆ, “ಒಡೆಯಾ, ಈ ದಿನತಾನೆ ನನ್ನ ನೆನಪಿಗೆ ಬರುತ್ತಿದೆ.


ಜುದೇಯ ನಾಡೇ, ನಿನ್ನ ನಡತೆ ಹಾಗೂ ಕೃತ್ಯಗಳೇ ನಿನಗೆ ಈ ವಿಪತ್ತನ್ನು ಒದಗಿಸಿವೆ. ಇದು ನಿನ್ನ ಪಾಪದ ಪ್ರತಿಫಲ. ನೋಡು ಎಷ್ಟು ಕಹಿಯಾಗಿದೆ; ಹೃದಯ ಇರಿಯುವಂತಿದೆ !


ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನಾನೇ ಜೋಸೆಫ್! ನನ್ನ ತಂದೆ ಇನ್ನೂ ಇದ್ದಾರೋ?” ಎಂದು ಕೇಳಿದ. ಅವರು ತತ್ತರಗೊಂಡು ಉತ್ತರಿಸಲಾರದೆ ಹೋದರು.


ತಂದೆ ಸತ್ತ ಬಳಿಕ ಜೋಸೆಫನ ಅಣ್ಣತಮ್ಮಂದಿರು, “ಜೋಸೆಫನು ಬಹುಶಃ ನಮ್ಮನ್ನು ದ್ವೇಷಿಸಿಯಾನು! ನಾವು ಅವನಿಗೆ ಮಾಡಿದ ಎಲ್ಲ ಹಾನಿಗೆ ಪ್ರತಿಯಾಗಿ ಶಿಕ್ಷಿಸಿಯಾನು,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಅದಕ್ಕೆ ಯೆಹೂದನು, “ನಮ್ಮೊಡೆಯರಿಗೆ ನಾವು ಏನು ಹೇಳೋಣ? ಯಾವ ಉತ್ತರ ಕೊಡೋಣ? ನಾವು ನಿರ್ದೋಷಿಗಳೆಂದು ತೋರಿಸಲು, ಏನುತಾನೆ ಮಾಡುವುದು? ನಿಮ್ಮ ಸೇವಕರಾದ ನಮ್ಮ ಪಾಪಕೃತ್ಯವನ್ನು ದೇವರೇ ಹೊರಪಡಿಸಿದ್ದಾರೆ. ಆ ಪಾತ್ರೆ ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲ, ನಾವೆಲ್ಲರೂ ನಮ್ಮೊಡೆಯರಿಗೆ ಗುಲಾಮರಾದೆವಲ್ಲವೆ?" ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು