Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:24 - ಕನ್ನಡ ಸತ್ಯವೇದವು C.L. Bible (BSI)

24 ಜೋಸೆಫನಾದರೋ ಅವರ ಬಳಿಯಿಂದ ಮರೆಯಾಗಿ ಹೋಗಿ ಕಣ್ಣೀರು ಸುರಿಸಿದ. ತರುವಾಯ ಅವರ ಬಳಿಗೆ ಬಂದು, ಸಂಭಾಷಣೆ ಮುಂದುವರೆಸಿ, ಸಿಮೆಯೋನನನ್ನು ಆರಿಸಿ, ಅವರ ಕಣ್ಣೆದುರಿನಲ್ಲೇ ಅವನಿಗೆ ಬೇಡಿಹಾಕಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೋಸೇಫನಾದರೋ ಅವರ ಬಳಿಯಿಂದ ಹೊರಟು ಹೋಗಿ ಅತ್ತನು. ತರುವಾಯ ಅವರ ಬಳಿಗೆ ಹಿಂತಿರುಗಿ ಬಂದು ಅವರ ಸಂಗಡ ಮಾತನಾಡಿ ಅವರೊಳಗೆ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿಗೆ ಅವನಿಗೆ ಬೇಡಿಗಳನ್ನು ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯೋಸೇಫನಾದರೋ ಅವರ ಬಳಿಯಿಂದ ಒಂದು ಕಡೆಗೆ ಹೋಗಿ ಕಣ್ಣೀರು ಸುರಿಸಿದನು. ತರುವಾಯ ಅವರ ಬಳಿಗೆ ತಿರಿಗಿ ಬಂದು ಅವರ ಸಂಗಡ ಮಾತಾಡಿ ಅವರೊಳಗೆ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಾಗಿ ಅವನಿಗೆ ಬೇಡಿಗಳನ್ನು ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅವರ ಮಾತುಗಳಿಂದ ಅವನಿಗೆ ತುಂಬ ದುಃಖವಾಯಿತು. ಆದ್ದರಿಂದ ಯೋಸೇಫನು ಅವರ ಬಳಿಯಿಂದ ಸ್ವಲ್ಪದೂರ ಹೋಗಿ ಕಣ್ಣೀರು ಸುರಿಸಿ ಹಿಂತಿರುಗಿ ಬಂದನು. ಬಳಿಕ ಸಹೋದರರಲ್ಲಿ ಒಬ್ಬನಾದ ಸಿಮೆಯೋನನನ್ನು ಅವರ ಕಣ್ಣೆದುರಿನಲ್ಲೇ ಬಂಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅನಂತರ ಯೋಸೇಫನು ಅವರ ಬಳಿಯಿಂದ ಹೊರಟುಹೋಗಿ ಅತ್ತನು. ಮತ್ತೆ ಅವರ ಬಳಿಗೆ ಬಂದು, ಅವರ ಸಂಗಡ ಮಾತನಾಡಿ ಅವರೊಂದಿಗೆ ಸಿಮೆಯೋನನನ್ನು ತಂದು, ಅವರ ಕಣ್ಣೆದುರಿನಲ್ಲಿ ಬಂಧಿಸಿ ಸೆರೆಯಲ್ಲಿ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:24
15 ತಿಳಿವುಗಳ ಹೋಲಿಕೆ  

ಜೋಸೆಫನಿಗೆ ತಮ್ಮನನ್ನು ನೋಡಿದ ಮೇಲೆ ಕರುಳು ಕರಗಿತು. ಕಣ್ಣೀರನ್ನು ತಡೆಯಲಾಗದೆ ಒಳ ಅರಮನೆಗೆ ತ್ವರೆಯಾಗಿ ಹೋಗಿ ಅಲ್ಲಿ ಅತ್ತನು.


ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ಒಂದು ಅಂಗಕ್ಕೆ ನೋವಾದರೆ, ಎಲ್ಲಾ ಅಂಗಗಳೂ ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ನಲಿವಾದರೆ, ಮಿಕ್ಕೆಲ್ಲಾ ಅಂಗಗಳು ಅದರೊಡನೆ ಸೇರಿ ನಲಿದಾಡುತ್ತವೆ.


ಸಂತೋಷಪಡುವವರೊಂದಿಗೆ ಸಂತೋಷಪಡಿರಿ; ದುಃಖಿಸುವವರೊಡನೆ ದುಃಖಿಸಿರಿ.


ಯೇಸುಸ್ವಾಮಿ ಜೆರುಸಲೇಮ್ ಪಟ್ಟಣಕ್ಕೆ ಇನ್ನೂ ಹತ್ತಿರವಾಗಿ ಬಂದು ಅದನ್ನು ನೋಡಿ,


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ಅದಕ್ಕೆ ಆ ಗೃಹನಿರ್ವಾಹಕ, “ಸಮಾಧಾನದಿಂದಿರಿ, ಹೆದರಬೇಡಿ. ನಿಮ್ಮ ತಂದೆಗೂ ನಿಮಗೂ ದೇವರಾದವರು ನಿಮ್ಮ ಚೀಲಗಳಲ್ಲಿಯೇ ನಿಧಿ ನಿಕ್ಷೇಪ ದೊರಕುವಂತೆ ಅನುಗ್ರಹಿಸಿದ್ದಾರೆ; ನೀವು ಕೊಟ್ಟ ಹಣ ನನಗೆ ಮುಟ್ಟಿದೆ,” ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು.


ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಬಿಡುವಂತೆ ಸರ್ವವಲ್ಲಭರಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಬೇಕಾದರೆ ಹಾಗೆಯೇ ಆಗಲಿ!” ಎಂದನು.


ಮೂರನೆಯ ದಿನ ಆ ಗಂಡಸರೆಲ್ಲರು ಗಾಯದಿಂದ ಇನ್ನು ಬಹಳ ಬಾಧೆಪಡುತ್ತಿದ್ದರು. ಆಗ, ಯಕೋಬನ ಮಕ್ಕಳಲ್ಲಿ ದೀನಳ ಸಹೋದರರಾದ ಸಿಮೆಯೋನ್ ಮತ್ತು ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಹಿಡಿದು ನಿಶ್ಚಿಂತೆ ಇಂದಿದ್ದ ಆ ಊರಿನವರ ಮೇಲೆ ಬಿದ್ದರು. ದಯೆದಾಕ್ಷಿಣ್ಯವಿಲ್ಲದೆ ಗಂಡಸರೆಲ್ಲರನ್ನು ಕೊಂದರು.


ಜೋಸೆಫನು ಒಬ್ಬ ಅನುವಾದಕನ ಮುಖಾಂತರ ಅವರ ಸಂಗಡ ಮಾತಾಡುತ್ತಿದ್ದುದರಿಂದ ಅವನಿಗೆ ತಮ್ಮ ಮಾತು ಗೊತ್ತಾಗುತ್ತಿದೆ ಎಂದು ಅವರು ನೆನೆಸಲಿಲ್ಲ.


ಇದನ್ನು ಕೇಳಿದ ಮೇಲೆ ತನ್ನ ಪರಿವಾರದವರ ಮುಂದೆ, ತನ್ನನ್ನೇ ಇನ್ನು ತಡೆಹಿಡಿದುಕೊಳ್ಳಲು ಜೋಸೆಫನಿಂದ ಆಗಲಿಲ್ಲ. “ಇಲ್ಲಿಂದ ಎಲ್ಲರನ್ನು ಆಚೆ ಕಳಿಸಿರಿ,” ಎಂದು ಬಾಯ್ತೆರೆದು ಹೇಳಿದ. ಜೋಸೆಫನ ಅಣ್ಣತಮ್ಮಂದಿರಿಗೆ ತನ್ನ ಪರಿಚಯ ಸಿಗುವಂತೆ ಮಾಡುವಾಗ ಇತರರು ಯಾರೂ ಹತ್ತಿರ ಇರಲಿಲ್ಲ.


ಅವನು ಗಟ್ಟಿಯಾಗಿ ಅತ್ತದ್ದು ಈಜಿಪ್ಟಿನವರಿಗೆ ಕೇಳಿಸಿತು; ಫರೋಹನ ಮನೆಯವರಿಗೂ ಆ ಸುದ್ದಿ ಮುಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು