Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:28 - ಕನ್ನಡ ಸತ್ಯವೇದವು C.L. Bible (BSI)

28 “ನಾನು ಕೊಟ್ಟ ಹಣ ನನಗೆ ವಾಪಸ್ಸಾಗಿದೆ; ಇಗೋ, ನನ್ನ ಚೀಲದಲ್ಲಿದೆ,” ಎಂದು ತನ್ನ ಅಣ್ಣತಮ್ಮಂದಿರಿಗೆ ಹೇಳಿದ. ಅವರು ಕಕ್ಕಾಬಿಕ್ಕಿಯಾಗಿ, ಒಬ್ಬರನ್ನೊಬ್ಬರು ಬೆರಗಿನಿಂದ ನೋಡುತ್ತಾ, “ನಮಗೇಕೆ ದೇವರು ಹೀಗೆ ಮಾಡಿದ್ದಾರೆ?” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ತನ್ನ ಅಣ್ಣತಮ್ಮಂದಿರಿಗೆ, “ನಾನು ಕೊಟ್ಟ ಹಣವು ಹಿಂದಕ್ಕೆ ಬಂದಿದೆ. ಇಗೋ, ಅದು ನನ್ನ ಚೀಲದಲ್ಲಿದೆ” ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ, “ದೇವರು ನಮಗೆ ಹೀಗೆ ಮಾಡಿದ್ದೇನು?” ಎಂದು ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವನು ಅಣ್ಣತಮ್ಮಂದಿರಿಗೆ - ನಾನು ಕೊಟ್ಟ ಹಣವು ಹಿಂದಕ್ಕೆ ಬಂದದೆ; ಇಗೋ, ನನ್ನ ಚೀಲದಲ್ಲಿದೆ ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ - ದೇವರು ನಮಗೆ ಮಾಡಿದ್ದು ಇದೇನು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅವನು ತನ್ನ ಉಳಿದ ಸಹೋದರರಿಗೆ, “ನೋಡಿ, ನಾನು ದವಸಧಾನ್ಯಗಳಿಗೆ ಕೊಟ್ಟ ಹಣ ಇಲ್ಲೇ ಇದೆ. ಯಾರೋ ಒಬ್ಬನು ಹಣವನ್ನು ಮತ್ತೆ ನನ್ನ ಚೀಲದಲ್ಲಿ ಇಟ್ಟಿರುವನು” ಎಂದು ಹೇಳಿದನು. ಸಹೋದರರಿಗೆ ತುಂಬ ಭಯವಾಯಿತು. ಅವರು ಒಬ್ಬರಿಗೊಬ್ಬರು, “ದೇವರು ನಮಗೆ ಮಾಡುತ್ತಿರುವುದೇನು?” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವನು ತನ್ನ ಸಹೋದರರಿಗೆ, “ನನ್ನ ಹಣವನ್ನು ಹಿಂದಕ್ಕೆ ಕೊಟ್ಟಿದ್ದಾರೆ, ಅದು ನನ್ನ ಚೀಲದಲ್ಲಿದೆ,” ಎಂದು ಹೇಳಿದ. ಅವರಿಗೆ ಹೃದಯ ಕಂಪನವಾದಂತಾಗಿ ಹೆದರಿ ಒಬ್ಬರಿಗೊಬ್ಬರು, “ದೇವರು ನಮಗೆ ಮಾಡಿದ್ದೇನು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:28
14 ತಿಳಿವುಗಳ ಹೋಲಿಕೆ  

ಗ್ರಹಶಕ್ತಿಗಳು ಕದಲುವುದರಿಂದ ಧರೆಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯಭೀತಿಯಿಂದ ಮಾನವರು ದಿಗ್ಭ್ರಮೆಗೊಳ್ಳುವರು.


ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?


ಸ್ವಾಮಿಯ ಅಪ್ಪಣೆಯಿಲ್ಲದೆ ಯಾರ ಮಾತೂ ಸಾರ್ಥಕವಾಗದು.


ಸರ್ವೇಶ್ವರ ಸಿದ್ಧಿಗೆ ತಂದಿದ್ದಾನೆ ತನ್ನ ಸಂಕಲ್ಪವನ್ನು ಈಡೇರಿಸಿದ್ದಾನೆ ಪುರಾತನ ಕಾಲದಲ್ಲಿ ತಾನು ನುಡಿದುದನ್ನು. ನಿನ್ನನ್ನು ಧ್ವಂಸಮಾಡಿದ್ದಾನೆ ದಯೆದಾಕ್ಷಿಣ್ಯವಿಲ್ಲದೆ. ಆನಂದ ತಂದಿದ್ದಾನೆ ವೈರಿಗಳಿಗೆ ಕೋಡುಮೂಡಿಸಿದ್ದಾನೆ ವಿರೋಧಿಗಳಿಗೆ !


ಬೆಳಕಿಗೂ ಕತ್ತಲಿಗೂ ನಾನೆ ಸೃಷ್ಟಿಕರ್ತನೆಂದು ಸುಖದುಃಖಗಳಿಗೆ ಕಾರಣಕರ್ತನೆಂದು ಸಕಲವನು ನಡೆಸುವ ಸರ್ವೇಶ್ವರ ನಾನೇ ಎಂದು.


ಬಾಗಿಲ ತೆರೆದು ನೋಡಿದೆ ನನ್ನಿನಿಯನಿಗಾಗಿ ಅಷ್ಟರೊಳಗೆ ಹೋಗಿಬಿಟ್ಟಿದ್ದನವನು ಹಿಂದಿರುಗಿ. ನಿಂತಂತಾಯಿತು ಅವನ ದನಿಗೆ ನನ್ನೆದೆಯ ತುಡಿತ ಎಷ್ಟೋ ಹುಡುಕಿದೆ, ಆದರೆ ಸಿಗಲಿಲ್ಲ ಎಷ್ಟೋ ಕೂಗಿದೆ, ಆದರೆ ಉತ್ತರವೇ ಇಲ್ಲ.


ಎದೆಗುಂದಿ ಮೊರೆಯಿಡುತ್ತಿರುವೆ ಜಗದೆಲ್ಲೆಯಿಂದ I ಹತ್ತಲಾಗದ ಆಶ್ರಯಗಿರಿಗೆ ಹತ್ತಿಸೆನ್ನ II


ಅವನು ಕಟ್ಟಿಸಿದ ಅರಮನೆ, ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನು ಮತ್ತು ಸರ್ವೇಶ್ವರನ ಆಲಯದಲ್ಲಿ ಅವನು ಸಮರ್ಪಿಸುತ್ತಿದ್ದ ದಹನಬಲಿಗಳನ್ನು ನೋಡಿದಳು. ಇವುಗಳಿಂದ ಆಶ್ಚರ್ಯಚಕಿತಳಾಗಿ,


ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ. ಸ್ವಂತದ್ದು ಎಂದು ಹೇಳಿಕೊಳ್ಳಲು ಅಂಬೆಗಾಲಿಡುವಷ್ಟು ಸ್ಥಳಸಿಕ್ಕುವುದಿಲ್ಲ. ನೀವು ಗಡಗಡನೆ ನಡುಗುವ ಹೃದಯವುಳ್ಳವರಾಗಿ, ದಿಕ್ಕುತೋರದೆ ಕಂಗೆಟ್ಟವರಾಗಿ ಹಾಗು ಮನಗುಂದಿದವರಾಗಿ ಇರುವಂತೆ ಸರ್ವೇಶ್ವರ ಮಾಡುವರು.


“ನಿಮ್ಮಲ್ಲಿ ಯಾರ್ಯಾರು ಶತ್ರುದೇಶಗಳಲ್ಲಿ ಅಳಿದುಳಿದಿರುವಿರೋ ಅವರ ಅಂತರಾಳದಲ್ಲಿ ಭಯಭೀತಿಯನ್ನು ಹುಟ್ಟಿಸುವೆನು. ಗಾಳಿಗೆ ತೂರಾಡುವ ತರಗೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು.ಆ ಸಪ್ಪಳ ಕೇಳಿ, ಖಡ್ಗಕ್ಕೆ ಹೆದರಿ ಓಡಿಹೋಗುವವರಂತೆ ಫೇರಿಕೀಳುವರು. ಯಾರೂ ಬೆನ್ನಟ್ಟಿಬಾರದಿದ್ದರೂ ಅವರು ಎದ್ದುಬಿದ್ದು ಓಡುವರು.


ಅದಕ್ಕೆ ಆ ಗೃಹನಿರ್ವಾಹಕ, “ಸಮಾಧಾನದಿಂದಿರಿ, ಹೆದರಬೇಡಿ. ನಿಮ್ಮ ತಂದೆಗೂ ನಿಮಗೂ ದೇವರಾದವರು ನಿಮ್ಮ ಚೀಲಗಳಲ್ಲಿಯೇ ನಿಧಿ ನಿಕ್ಷೇಪ ದೊರಕುವಂತೆ ಅನುಗ್ರಹಿಸಿದ್ದಾರೆ; ನೀವು ಕೊಟ್ಟ ಹಣ ನನಗೆ ಮುಟ್ಟಿದೆ,” ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು.


ಆಗ ಅವರ ತಂದೆ ಯಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ; ಜೋಸೆಫನು ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟದುಃಖವೆಲ್ಲ ನನ್ನ ತಲೆಯ ಮೇಲೆ ಬಂದೆರಗಿದೆ!” ಎಂದನು.


ಆಗ ಇಸಾಕನು ಗಡಗಡನೆ ನಡುಗುತ್ತಾ, “ಹಾಗಾದರೆ ಬೇಟೆಯಾಡಿ ನನಗೆ ಊಟ ತಂದುಕೊಟ್ಟವನಾರು? ನೀನು ಬರುವುದಕ್ಕೆ ಮುಂಚೆ ಅವನು ತಂದುದನ್ನು ಊಟಮಾಡಿ ಅವನನ್ನೇ ಅಂತಿಮವಾಗಿ ಆಶೀರ್ವದಿಸಿಬಿಟ್ಟೆನು; ಅವನಿಗೆ ಮಾಡಿದ ಆಶೀರ್ವಾದ ಇನ್ನು ತಪ್ಪಲಾರದು,” ಎಂದನು.


ಕಾನಾನ್ ನಾಡನ್ನು ಅವರು ತಲುಪಿದರು. ತಮ್ಮ ತಂದೆಯ ಬಳಿಗೆ ಬಂದು ನಡೆದುದೆಲ್ಲವನ್ನು ವರದಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು