Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:33 - ಕನ್ನಡ ಸತ್ಯವೇದವು C.L. Bible (BSI)

33 ಅದಕ್ಕೆ ಆ ದೇಶಾಧಿಪತಿ, “ನೀವು ಸತ್ಯವಂತರೋ ಇಲ್ಲವೋ ಎಂಬುದು ಗೊತ್ತಾಗುವುದಕ್ಕಾಗಿ ನಿಮ್ಮಲ್ಲಿ ಒಬ್ಬನನ್ನು ನನ್ನ ಬಳಿಯಲ್ಲೆ ಬಿಟ್ಟುಹೋಗಿ; ನಿಮ್ಮ ಕುಟುಂಬದವರ ಕ್ಷಾಮನಿವಾರಣೆಗೆ ಬೇಕಾದುದನ್ನು ತೆಗೆದುಕೊಂಡು ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅದಕ್ಕೆ “ದೇಶಾಧಿಪತಿ, ನೀವು ಸತ್ಯವಂತರೋ ಅಲ್ಲವೋ ಎಂಬುದು ಗೊತ್ತಾಗುವುದಕ್ಕಾಗಿ ನಿಮ್ಮೊಳಗೆ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಮನೆಯವರ ಕ್ಷಾಮ ನಿವಾರಣೆಗೆ ಬೇಕಾದದ್ದನ್ನು ತೆಗೆದುಕೊಂಡು ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅದಕ್ಕೆ ದೇಶಾಧಿಪತಿ - ನೀವು ಸತ್ಯವಂತರೋ ಅಲ್ಲವೋ ಎಂಬದು ಗೊತ್ತಾಗುವದಕ್ಕಾಗಿ ನಿಮ್ಮೊಳಗೆ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಮನೆಯವರ ಕ್ಷಾಮ ನಿವಾರಣೆಗೆ ಬೇಕಾದದ್ದನ್ನು ತೆಗೆದುಕೊಂಡು ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “ಆಗ ಆ ದೇಶದ ರಾಜ್ಯಪಾಲನು, ‘ನೀವು ಯಥಾರ್ಥವಂತರೆಂದು ತೋರಿಸಬೇಕಾದರೆ ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಕುಟುಂಬಗಳಿಗೆ ದವಸಧಾನ್ಯಗಳನ್ನು ತೆಗೆದುಕೊಂಡು ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 “ಆಗ ದೇಶದ ಪ್ರಭುವಾಗಿರುವ ಆ ಮನುಷ್ಯನು, ‘ನೀವು ಯಥಾರ್ಥರೆಂದು ನಾನು ಇದರಲ್ಲಿ ತಿಳಿದುಕೊಳ್ಳುವೆನು. ನೀವು ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿಟ್ಟು, ನಿಮ್ಮ ಮನೆಯ ಕ್ಷಾಮಕ್ಕೆ ಅವಶ್ಯವಾದದ್ದನ್ನು ತೆಗೆದುಕೊಂಡು ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:33
3 ತಿಳಿವುಗಳ ಹೋಲಿಕೆ  

ಇದು ನಿಜವೋ ಸುಳ್ಳೋ ಎಂದು ಗೊತ್ತಾಗಬೇಕಾದರೆ ನೀವು ನಿಮ್ಮ ತಮ್ಮನನ್ನು ಬರಮಾಡಬೇಕು. ಅವನು ಬಂದ ಹೊರತು, ಫರೋಹನ ಜೀವದಾಣೆ, ನೀವು ಇಲ್ಲಿಂದ ಹೊರಟುಹೋಗಕೂಡದು.


ನಾವು ಒಬ್ಬ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಅಣ್ಣತಮ್ಮಂದಿರು; ನಮ್ಮಲ್ಲಿ ಒಬ್ಬನು ಇಲ್ಲವಾದ. ಚಿಕ್ಕವನೋ ಈಗ ಕಾನಾನ್ ನಾಡಿನಲ್ಲಿ ನಮ್ಮ ತಂದೆಯ ಬಳಿಯಲ್ಲಿದ್ದಾನೆ’ ಎಂದು ಹೇಳಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು