ಆದಿಕಾಂಡ 42:34 - ಕನ್ನಡ ಸತ್ಯವೇದವು C.L. Bible (BSI)34 ಆದರೆ ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ, ನೀವು ಗೂಢಚಾರರಲ್ಲ. ಸತ್ಯವಂತರೇ ಎಂದು ತಿಳಿದುಕೊಳ್ಳುತ್ತೇನೆ; ನಿಮ್ಮ ಅಣ್ಣನನ್ನು ಬಿಡುಗಡೆ ಮಾಡುತ್ತೇನೆ ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ನಡೆಸಬಹುದು,” ಎಂದು ಹೇಳಿದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು, ಕರೆದುಕೊಂಡು ಬಂದರೆ ನೀವು ಗೂಢಚಾರರಲ್ಲ ಸತ್ಯವಂತರೇ ಎಂದು ತಿಳಿದುಕೊಂಡು ನಿಮ್ಮ ಅಣ್ಣನನ್ನು ಸೆರೆಯಿಂದ ಬಿಡಿಸುತ್ತೇನೆ ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ಮಾಡಬಹುದು” ಎಂದು ಹೇಳಿದನು ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರಕೊಂಡು ಬರಬೇಕು; ಕರಕೊಂಡು ಬಂದರೆ ನೀವು ಗೂಢಚಾರರಲ್ಲ, ಸತ್ಯವಂತರೇ ಎಂದು ತಿಳಿದುಕೊಂಡು ನಿಮ್ಮ ಅಣ್ಣನನ್ನು ಬಿಡಿಸಿಬಿಡುತ್ತೇನೆ, ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ನಡಿಸಬಹುದೆಂದು ಹೇಳಿದನು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಆಮೇಲೆ ನಿಮ್ಮ ಕಿರಿಯ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ. ಆಗ ನೀವು ಯಥಾರ್ಥರಾದವರೋ ಗೂಢಚಾರರೋ ಎಂದು ಗೊತ್ತಾಗುವುದು. ನೀವು ಸತ್ಯವನ್ನು ಹೇಳಿದ್ದರೆ ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು; ನಮ್ಮ ದೇಶದಲ್ಲಿ ಆಹಾರವನ್ನು ಕೊಳ್ಳಲು ನಿಮಗೆ ಯಾವ ತಡೆಯೂ ಇರುವುದಿಲ್ಲ’ ಎಂದು ಹೇಳಿದನು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ. ಆಗ ನೀವು ಗೂಢಚಾರರಲ್ಲವೆಂದೂ, ಯಥಾರ್ಥರೆಂದೂ ತಿಳಿದುಕೊಂಡು, ನಿಮ್ಮ ಸಹೋದರರನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು,’ ಎಂದು ಹೇಳಿದನು,” ಎಂದರು. ಅಧ್ಯಾಯವನ್ನು ನೋಡಿ |