Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:36 - ಕನ್ನಡ ಸತ್ಯವೇದವು C.L. Bible (BSI)

36 ಆಗ ಅವರ ತಂದೆ ಯಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ; ಜೋಸೆಫನು ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟದುಃಖವೆಲ್ಲ ನನ್ನ ತಲೆಯ ಮೇಲೆ ಬಂದೆರಗಿದೆ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆಗ ಅವರ ತಂದೆಯಾದ ಯಾಕೋಬನು, “ಅವರಿಗೆ ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ. ಯೋಸೇಫನು ಇಲ್ಲ, ಸಿಮೆಯೋನನು ಇಲ್ಲ. ಬೆನ್ಯಾಮೀನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂದಿತಲ್ಲಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆಗ ಅವರ ತಂದೆಯಾದ ಯಾಕೋಬನು ಅವರಿಗೆ - ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ; ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ; ಬೆನ್ಯಾಮೀನನನ್ನೂ ಕರಕೊಂಡು ಹೋಗಬೇಕೆಂದಿದ್ದೀರಿ, ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂತು ಎಂದು ಹೇಳಲು ರೂಬೇನನು ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಯಾಕೋಬನು ಅವರಿಗೆ, “ನಾನು ನನ್ನ ಮಕ್ಕಳನ್ನೆಲ್ಲ ಕಳೆದುಕೊಳ್ಳಬೇಕೆಂಬುದು ನಿಮಗೆ ಇಷ್ಟವೇ? ಯೋಸೇಫನು ಇಲ್ಲವಾದನು. ಸಿಮೆಯೋನನೂ ಇಲ್ಲವಾದನು. ಈಗ ಬೆನ್ಯಾಮೀನನನ್ನು ತೆಗೆದುಕೊಂಡು ಹೋಗಬೇಕೆಂದಿರುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆಗ ಅವರ ತಂದೆ ಯಾಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗುವುದರಲ್ಲಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:36
21 ತಿಳಿವುಗಳ ಹೋಲಿಕೆ  

ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಬಿಡುವಂತೆ ಸರ್ವವಲ್ಲಭರಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಬೇಕಾದರೆ ಹಾಗೆಯೇ ಆಗಲಿ!” ಎಂದನು.


ಮಾನವರಿಂದ ಜಯಿಸಲಾಗದ ಶೋಧನೆಗಳೇನೂ ನಿಮಗೆ ಬಂದಿಲ್ಲ. ದೇವರು ಕೊಟ್ಟಮಾತಿಗೆ ತಪ್ಪಲಾರರು. ಗೆಲ್ಲಲಾಗದ ಶೋಧನೆಗಳಿಗೆ ನಿಮ್ಮನ್ನೆಂದೂ ಗುರಿಪಡಿಸಲಾರರು. ಶೋಧನೆಗಳು ಬಂದಾಗ ಅವುಗಳನ್ನು ಸಹಿಸಿಕೊಳ್ಳುವ ಶಕ್ತಿಯನ್ನೂ ತಪ್ಪಿಸಿಕೊಳ್ಳುವ ಮಾರ್ಗವನ್ನೂ ಅವರೇ ಒದಗಿಸುತ್ತಾರೆ.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.


ಆ ಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದುಕೊಂಡು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದರು.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ನನ್ನ ರೋಗದಲ್ಲಿ ನಾನು ಇಂತೆಂದುಕೊಂಡೆ : ಮಧ್ಯಪ್ರಾಯದಲ್ಲೇ ಮೃತ್ಯುಲೋಕವನ್ನು ಸಮೀಪಿಸಿರುವೆ ನನ್ನ ಆಯುಷ್ಯವನ್ನು ನಾ ಕಳೆದುಕೊಂಡಿರುವೆ.


ಇಂತಿರಲು ಯಕೋಬ್ಯರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗಬೇಕಾದರೆ, ಅವರ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲ ದೊರಕಬೇಕಾದರೆ, ಅವರ ವಿಗ್ರಹಾರಾಧಕ ಬಲಿಪೀಠದ ಕಲ್ಲುಗಳೆಲ್ಲ ಸುಣ್ಣದಂತೆ ಪುಡಿಪುಡಿ ಆಗಬೇಕು; ಆಶೇರಾ ಎಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಪ್ರತಿಷ್ಠಾಪಿಸುವುದು ಇನ್ನು ನಿಲ್ಲಬೇಕು.


ಆದಿಗಿಂತ ಅಂತ್ಯ ಲೇಸು; ಗರ್ವಕ್ಕಿಂತ ತಾಳ್ಮೆ ಲೇಸು.


ನೆನೆಸಿಕೊಳ್ಳೋ ದೇವಾ, ನನ್ನ ಜೀವ ಕೇವಲ ಉಸಿರು ನನ್ನ ಕಣ್ಣುಗಳು ಇನ್ನು ಕಾಣವು ನಲಿವು.


ದಾವೀದನು ತನ್ನ ಮನಸ್ಸಿನಲ್ಲೇ, “ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇ ಬೇಕು. ಆದುದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆಮೇಲೆ ಸೌಲನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುವನು. ನಾನು ಅವನ ಕೈಯಿಂದ ತಪ್ಪಿಸಿಕೊಂಡು ಸುರಕ್ಷಿತನಾಗಿರುವೆನು,” ಎಂದುಕೊಂಡನು.


ಸಜ್ಜನನಿಗೊದಗುವ ಸಂಕಟಗಳು ವಿಪರೀತ I ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ II


ತಂದೆಗೂ ಸಹೋದರರಿಗೂ ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರಕೊಟ್ಟು ಅವರನ್ನು ಸಂರಕ್ಷಿಸಿದನು.


ಕೊನೆಗೆ ಯಕೋಬನು, “ನನ್ನ ಮಗ ಜೋಸೆಫ್ ಜೀವದಿಂದಿದ್ದಾನೆ, ನನಗೆ ಅಷ್ಟೇ ಸಾಕು! ನಾನು ಸಾಯುವುದಕ್ಕೆ ಮುಂಚೆ ಹೋಗಿ ಅವನನ್ನು ನೋಡುತ್ತೇನೆ,” ಎಂದನು.


ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಅಲ್ಪವಾದುವು, ಕ್ಷಣಿಕವಾದುವು. ಅವುಗಳಿಂದ ಲಭಿಸುವ ಮಹಿಮೆಯಾದರೋ ಅಪಾರವಾದುದು, ಅನಂತವಾದುದು.


ಅದಕ್ಕೆ ರೂಬೇನನು, “ನಾನು ಈ ಹುಡುಗನನ್ನು ನಿಮಗೆ ಪುನಃ ತಂದೊಪ್ಪಿಸುತ್ತೇನೆ; ಇಲ್ಲದೆಹೋದರೆ ನನ್ನಿಬ್ಬರು ಗಂಡುಮಕ್ಕಳನ್ನು ಕೊಂದುಹಾಕಬಹುದು. ಇವನನ್ನು ನನ್ನ ವಶಕ್ಕೆ ಕೊಡಿ, ನಾನು ತಪ್ಪದೆ ಇವನನ್ನು ನಿಮ್ಮ ಬಳಿಗೆ ಕರೆದುಕೊಂಡು ಬರುತ್ತೇನೆ,” ಎಂದು ಹೇಳಿದ.


ಸರ್ವೇಶ್ವರ ಹೀಗೆನ್ನುತ್ತಾರೆ: “ಕೇಳಿಬರುತ್ತಿದೆ ರಾಮಾ ಊರಿನೊಳು ರೋದನ ಗೋಳಾಟ, ಅಘೋರ ಆಕ್ರಂದನ. ಕಳೆದುಕೊಂಡ ಮಕ್ಕಳಿಗಾಗಿ ಗೋಳಾಡುತ್ತಿಹಳು ರಾಖೇಲಳು ಇನ್ನಿಲ್ಲದ ಅವುಗಳಿಗಾಗಿ ಉಪಶಮನ ಒಲ್ಲೆನೆನುತಿಹಳು.”


ಅವನು ಹಿರಿಯವನಿಂದ ಮೊದಲ್ಗೊಂಡು ಕಿರಿಯವನ ತನಕ ಪರೀಕ್ಷಿಸಿ ನೋಡಿದನು. ಆ ಪಾತ್ರೆ ಬೆನ್ಯಾಮೀನನ ಚೀಲದಲ್ಲಿ ಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು