ಆದಿಕಾಂಡ 42:7 - ಕನ್ನಡ ಸತ್ಯವೇದವು C.L. Bible (BSI)7 ಜೋಸೆಫನು ಅವರನ್ನು ನೋಡಿದಕೂಡಲೆ ಗುರುತುಹಿಡಿದನು. ಆದರೂ ಅವರ ಪರಿಚಯ ಇಲ್ಲದವನಂತೆ ಬಿರುಬುಡಿಯಿಂದ, “ನೀವು ಎಲ್ಲಿಯವರು?” ಎಂದು ಕೇಳಿದನು. ಅವರು, “ನಾವು ಧಾನ್ಯ ಕೊಂಡುಕೊಳ್ಳುವುದಕ್ಕಾಗಿ ಕಾನಾನ್ ನಾಡಿನಿಂದ ಬಂದವರು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೋಸೇಫನು ಅವರನ್ನು ಕಂಡಾಗ ಅವರ ಗುರುತು ಹಿಡಿದು ತನ್ನ ಅಣ್ಣಂದಿರೆಂದು ತಿಳಿದರೂ ಅವರಿಗೆ ಅನ್ಯನಂತೆ ತೋರ್ಪಡಿಸಿಕೊಂಡು ಕಠಿಣ ನುಡಿಯಿಂದ, “ನೀವು ಎಲ್ಲಿಂದ ಬಂದವರು” ಎಂದು ಕೇಳಿದನು. ಅವರು, “ಧಾನ್ಯವನ್ನು ಕೊಂಡುಕೊಳ್ಳುವುದಕ್ಕೊಸ್ಕರ ಕಾನಾನ್ ದೇಶದಿಂದ ಬಂದಿದ್ದೇವೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೋಸೇಫನು ಅವರನ್ನು ಕಂಡಾಗ ಅವರ ಗುರುತು ಹಿಡಿದು ತನ್ನ ಅಣ್ಣಂದಿರೆಂದು ತಿಳಿದಾಗ್ಯೂ ಅವರಿಗೆ ಅನ್ಯನಂತೆ ತೋರ್ಪಡಿಸಿಕೊಂಡು ಬಿರುನುಡಿಯಿಂದ - ನೀವು ಎಲ್ಲಿಂದ ಬಂದವರು ಎಂದು ಕೇಳಿದನು. ಅವರು - ಧಾನ್ಯವನ್ನು ಕೊಂಡುಕೊಳ್ಳುವದಕ್ಕೋಸ್ಕರ ಕಾನಾನ್ ದೇಶದಿಂದ ಬಂದಿದ್ದೇವೆ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೋಸೇಫನು ಅವರನ್ನು ಕಂಡು, ತನ್ನ ಅಣ್ಣಂದಿರೆಂದು ತಿಳಿದುಕೊಂಡನು. ಆದರೂ ಅವನು ತನಗೆ ಅವರು ಗೊತ್ತೇ ಇಲ್ಲದಂತೆ ಅವರೊಂದಿಗೆ ಕಟುವಾಗಿ ಮಾತಾಡಿ, ಅವರಿಗೆ, “ನೀವು ಎಲ್ಲಿಂದ ಬಂದಿರುವಿರಿ?” ಎಂದು ಕೇಳಿದನು. ಸಹೋದರರು, “ಆಹಾರವನ್ನು ಕೊಂಡುಕೊಳ್ಳಲು ಕಾನಾನ್ ದೇಶದಿಂದ ಬಂದಿದ್ದೇವೆ” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೋಸೇಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದರೂ, ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ, ಅವರಿಗೆ, “ಎಲ್ಲಿಂದ ಬಂದಿರಿ?” ಎಂದನು. ಅದಕ್ಕೆ ಅವರು, “ಆಹಾರ ಕೊಂಡುಕೊಳ್ಳುವುದಕ್ಕೆ ಕಾನಾನ್ ದೇಶದಿಂದ ಬಂದೆವು,” ಎಂದರು. ಅಧ್ಯಾಯವನ್ನು ನೋಡಿ |