Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:1 - ಕನ್ನಡ ಸತ್ಯವೇದವು C.L. Bible (BSI)

1 ಬರವು ಕಾನಾನಿನಲ್ಲಿ ಘೋರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕಾನಾನ್ ದೇಶದಲ್ಲಿ ಬರವು ಬಹು ಘೋರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ದೇಶದಲ್ಲಿ ಬರವು ಬಹುಘೋರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬರಗಾಲವು ದೇಶದಲ್ಲಿ ತುಂಬ ಭೀಕರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇಶದಲ್ಲಿ ಬರವು ಘೋರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:1
11 ತಿಳಿವುಗಳ ಹೋಲಿಕೆ  

ಕಾನಾನ್ ನಾಡಿನಲ್ಲಿ ಕ್ಷಾಮ ತಲೆದೋರಿತು. ಅದು ಘೋರವಾಗಿದ್ದುದರಿಂದ ಅಬ್ರಾಮನು ಕೆಲವು ಕಾಲ ಈಜಿಪ್ಟಿನಲ್ಲಿರಲು ಅಲ್ಲಿಗೆ ಇಳಿದುಹೋದನು.


ಒಲೆಯಂತೆ ಸುಡುತ್ತಿದೆ ನಮ್ಮ ಚರ್ಮ ಕ್ಷಾಮಕಾಲದ ಭೀಕರ ಜ್ವರದ ನಿಮಿತ್ತ.


ಕಾನಾನ್ ನಾಡಿನಲ್ಲೂ ಬರವಿತ್ತು. ಧಾನ್ಯ ಕೊಂಡುಕೊಳ್ಳಲು ಅಲ್ಲಿಂದ ಈಜಿಪ್ಟಿಗೆ ಬಂದವರಲ್ಲಿ ಯಕೋಬನ (ಇಸ್ರಯೇಲನ) ಮಕ್ಕಳೂ ಇದ್ದರು.


ಅಬ್ರಹಾಮನಿಗೆ, ಸರ್ವೇಶ್ವರ “ 'ಸಾರಳು ತಾನು ಮುದುಕಿಯಾದ ಕಾರಣ ಹೆರಲು ಸಾಧ್ಯವೆ' ಎಂದು ನಕ್ಕಿದ್ದು ಏಕೆ?


ಹಿಂದೆ ಅಬ್ರಹಾಮನ ಕಾಲದಲ್ಲಿ ಬಂದಿದ್ದ ಬರಗಾಲವು ಮತ್ತೊಮ್ಮೆ ಕಾನಾನ್ ನಾಡಿಗೆ ಬಂದಿತು. ಇಸಾಕನು ಫಿಲಿಷ್ಟಿಯರ ಅರಸ ಅಬೀಮೆಲೆಕನನ್ನು ಕಾಣಲು ಗೆರಾರಿಗೆ ಹೋದನು.


ಈಜಿಪ್ಟಿನಿಂದ ತಂದ ದವಸಧಾನ್ಯ ಮುಗಿದು ಹೋಗಿತ್ತು. ಯಕೋಬನು ತನ್ನ ಪುತ್ರರಿಗೆ, ” ನೀವು ಪುನಃ ಹೋಗಿ ಸ್ವಲ್ಪ ಧಾನ್ಯವನ್ನು ಕೊಂಡುಕೊಂಡು ಬನ್ನಿ,” ಎಂದನು.


ಕಾನಾನ್ ನಾಡಿನಲ್ಲಿ ಬರವು ಘೋರವಾದ್ದರಿಂದ ನಿಮ್ಮ ಸೇವಕರ ದನಕುರಿಗಳಿಗೆ ಮೇವು ಸಿಕ್ಕಲಿಲ್ಲ. ಆದ್ದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ಸೇವಕರು ಗೋಷೆನ್ ಪ್ರಾಂತ್ಯದಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದರು.


ಆಗ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಸ್ವಲ್ಪ ಮಂದಿಯೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಮಹಾಬಲಿಷ್ಠ ಜನಾಂಗವಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು