ಆದಿಕಾಂಡ 43:11 - ಕನ್ನಡ ಸತ್ಯವೇದವು C.L. Bible (BSI)11 ಇಷ್ಟಾದ ಮೇಲೆ ಅವರ ತಂದೆ ಯಕೋಬನು, “ನೀವು ಹೋಗಲೇಬೇಕಾದರೆ, ಒಂದು ಕೆಲಸಮಾಡಿ; ಈ ನಾಡಿನಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಹಾಕಿಕೊಂಡು ಹೋಗಿ, ಆ ಮನುಷ್ಯನಿಗೆ ಕಾಣಿಕೆಯಾಗಿ ಕೊಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ, ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ. ಸ್ವಲ್ಪ ತೈಲ, ಜೇನು, ಸುಗಂಧದ್ರವ್ಯ, ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಗೋಡಂಬಿ, ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ - ನೀವು ಹೋಗಲೇಬೇಕಾಗಿದ್ದರೆ ಒಂದು ಕೆಲಸ ಮಾಡಿರಿ; ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಸಾಮಾನಿನಲ್ಲಿಟ್ಟು, ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ; ಸ್ವಲ್ಪ ತೈಲ, ಸ್ವಲ್ಪ ದ್ರಾಕ್ಷಾರಸದ ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಆಕ್ರೋಡು, ಬಾದಾವಿು ಇವುಗಳನ್ನು ತೆಗೆದುಕೊಂಡುಹೋಗಿ ಕೊಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅದಕ್ಕೆ ಅವರ ತಂದೆಯಾದ ಇಸ್ರೇಲನು, “ಇದು ನಿಜವಾಗಿಯೂ ಸತ್ಯವಾಗಿದ್ದರೆ, ನಿನ್ನೊಂದಿಗೆ ಬೆನ್ಯಾಮೀನನನ್ನು ಕರೆದುಕೊಂಡು ಹೋಗು. ಆದರೆ ರಾಜ್ಯಪಾಲನಿಗೆ ಶ್ರೇಷ್ಠವಾದ ಕೆಲವು ಉಡುಗೊರೆಗಳನ್ನು ತೆಗೆದುಕೊಂಡು ಹೋಗಿ. ನಮ್ಮ ನಾಡಿನಲ್ಲಿ ದೊರಕುವ ಜೇನು, ಆಕ್ರೋಡು, ಬಾದಾಮಿ, ಹಾಲುಮಡ್ಡಿ ಮತ್ತು ಗೋಲರಸ ಇವುಗಳನ್ನು ತೆಗೆದುಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಅವರ ತಂದೆ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮೊಂದಿಗೆ ಇಟ್ಟುಕೊಂಡು, ಆ ಮನುಷ್ಯನಿಗೆ ಕಾಣಿಕೆ ತೆಗೆದುಕೊಂಡು ಹೋಗಿರಿ. ಅಂದರೆ, ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಆಕ್ರೋಡು ಮತ್ತು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ. ಅಧ್ಯಾಯವನ್ನು ನೋಡಿ |