Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:15 - ಕನ್ನಡ ಸತ್ಯವೇದವು C.L. Bible (BSI)

15 ಅವರು ಆ ಕಾಣಿಕೆ ವಸ್ತುಗಳನ್ನು ಸಿದ್ಧಮಾಡಿಕೊಂಡು, ಎರಡರಷ್ಟು ಹಣವನ್ನು ತೆಗೆದುಕೊಂಡು ಹಾಗೂ ಬೆನ್ಯಾಮೀನನನ್ನು ಜೊತೆಯಲ್ಲಿ ಕರೆದುಕೊಂಡು ಹೊರಟರು. ಈಜಿಪ್ಟನ್ನು ಸೇರಿ, ಜೋಸೆಫನ ಸಮ್ಮುಖದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಆ ಮನುಷ್ಯರು ಕಾಣಿಕೆಯನ್ನು ಸಿದ್ಧಮಾಡಿಕೊಂಡು, ಎರಡರಷ್ಟು ಹಣವನ್ನೂ ತೆಗೆದುಕೊಂಡು, ಬೆನ್ಯಾಮೀನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತ ದೇಶಕ್ಕೆ ಹೋಗಿ ಯೋಸೇಫನ ಎದುರಿನಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಮನುಷ್ಯರು ಆ ಕಾಣಿಕೆಯ ವಸ್ತುಗಳನ್ನು ಸಿದ್ಧಪಡಿಸಿ ಎರಡರಷ್ಟು ಹಣವನ್ನು ತೆಗೆದುಕೊಂಡು ಬೆನ್ಯಾಮೀನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಹೊರಟು ಐಗುಪ್ತದೇಶಕ್ಕೆ ಸೇರಿ ಯೋಸೇಫನೆದುರಿನಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದ್ದರಿಂದ ಸಹೋದರರು ರಾಜ್ಯಪಾಲನಿಗೆ ಕೊಡಲು ಉಡುಗೊರೆಗಳನ್ನು ತೆಗೆದುಕೊಂಡರು; ಮೊದಲನೆ ಸಲ ತೆಗೆದುಕೊಂಡು ಹೋಗಿದ್ದ ಹಣಕ್ಕಿಂತ ಎರಡರಷ್ಟು ಹೆಚ್ಚಾಗಿ ತೆಗೆದುಕೊಂಡರು. ಬೆನ್ಯಾಮೀನನು ಸಹೋದರರೊಂದಿಗೆ ಈಜಿಪ್ಟಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಅವರು ಆ ಕಾಣಿಕೆಯನ್ನು ತೆಗೆದುಕೊಂಡು, ತಮ್ಮ ಕೈಯಲ್ಲಿ ಎರಡರಷ್ಟು ಹಣವನ್ನೂ, ಬೆನ್ಯಾಮೀನನನ್ನೂ ಕರೆದುಕೊಂಡು ಈಜಿಪ್ಟಿಗೆ ಹೋಗಿ, ಯೋಸೇಫನ ಮುಂದೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:15
6 ತಿಳಿವುಗಳ ಹೋಲಿಕೆ  

ಅವರು ತಮ್ಮ ತಮ್ಮ ಚೀಲವನ್ನು ಬಿಚ್ಚಿನೋಡಿದಾಗ ಪ್ರತಿಯೊಬ್ಬನ ಚೀಲದಲ್ಲೂ ಅವನವನ ಹಣದ ಗಂಟು ಸಿಕ್ಕಿತು. ಆ ಗಂಟುಗಳನ್ನು ಕಂಡಾಗ ಅವರೂ ಅವರ ತಂದೆಯೂ ಚಕಿತರಾದರು.


ಇಷ್ಟಾದ ಮೇಲೆ ಅವರ ತಂದೆ ಯಕೋಬನು, “ನೀವು ಹೋಗಲೇಬೇಕಾದರೆ, ಒಂದು ಕೆಲಸಮಾಡಿ; ಈ ನಾಡಿನಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಹಾಕಿಕೊಂಡು ಹೋಗಿ, ಆ ಮನುಷ್ಯನಿಗೆ ಕಾಣಿಕೆಯಾಗಿ ಕೊಡಿ.


ನಾವು ಹೊರಟುಹೋದ ನಂತರ ಚಾವಡಿಯೊಂದರಲ್ಲಿ ಇಳಿದುಕೊಂಡೆವು. ಅಲ್ಲಿ ನಮ್ಮ ಚೀಲಗಳನ್ನು ಬಿಚ್ಚಿನೋಡಿದಾಗ ಪ್ರತಿ ಒಬ್ಬನ ಹಣ, ತೂಕ ಕಿಂಚಿತ್ತೂ ಕಡಿಮೆಯಿಲ್ಲದೆ, ಅವನವನ ಚೀಲದಲ್ಲೇ ಇತ್ತು. ಅದನ್ನು ವಾಪಸ್ಸು ತಂದಿದ್ದೇವೆ.


ತಾವು ಅಲ್ಲೇ ಊಟಮಾಡಬೇಕೆಂಬ ಸಂಗತಿ ಅವರಿಗೆ ತಿಳಿಯಿತು. ಆದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಸಿದ್ಧವಾಗಿ ಇಟ್ಟುಕೊಂಡರು. ಜೋಸೆಫನು ಬರುವ ತನಕ, ಮಧ್ಯಾಹ್ನದವರೆಗೆ ಕಾದುಕೊಂಡಿದ್ದರು.


ರಾಜಪುತ್ರನಾದ ಮಾಸೇಯ, ರಾಜಗೃಹಾಧಿಪತಿಯಾದ ಅಜ್ರೀಕಾಮ್, ರಾಜಪ್ರತಿನಿಧಿಯಾದ ಎಲ್ಕಾನ ಎಂಬವರನ್ನು ಎಫ್ರಯಿಮ್ ನಾಡಿನ ಜಿಕ್ರಿಯೆಂಬ ಶೂರನು ಕೊಂದನು.


ಉದಾರಿಯ ಕೃಪೆಕೋರುವವರು ಅನೇಕರು; ದಾನಶೂರನಿಗೆ ಎಲ್ಲರು ಸ್ನೇಹಿತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು