ಆದಿಕಾಂಡ 43:24 - ಕನ್ನಡ ಸತ್ಯವೇದವು C.L. Bible (BSI)24 ಆಮೇಲೆ ಗೃಹನಿರ್ವಾಹಕನು ಅವರೆಲ್ಲರನ್ನು ಜೋಸೆಫನ ಮನೆಯೊಳಗೆ ಕರೆತಂದು ಕಾಲು ತೊಳೆದುಕೊಳ್ಳುವುದಕ್ಕೆ ನೀರನ್ನು ಕೊಡಿಸಿದನು. ಅವರ ಕತ್ತೆಗಳಿಗೆ ಮೇವು ಹಾಕಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವರೆಲ್ಲರನ್ನೂ ಯೋಸೇಫನ ಮನೆಯೊಳಗೆ ಕರೆದುಕೊಂಡು ಬಂದನು. ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಡಿಸಿ, ಅವರ ಕತ್ತೆಗಳಿಗೂ ಮೇವು ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವರೆಲ್ಲರನ್ನೂ ಯೋಸೇಫನ ಮನೆಯೊಳಗೆ ಸೇರಿಸಿ ಕಾಲುಗಳನ್ನು ತೊಳೆಯುವದಕ್ಕೆ ನೀರನ್ನು ಕೊಡಿಸಿ ಅವರ ಕತ್ತೆಗಳಿಗೆ ಮೇವು ಹಾಕಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಸೇವಕನು ಅವರನ್ನು ಯೋಸೇಫನ ಮನೆಯೊಳಗೆ ಕರೆದುಕೊಂಡು ಹೋಗಿ ಅವರಿಗೆ ನೀರನ್ನು ಕೊಟ್ಟನು. ಅವರು ತಮ್ಮ ಕಾಲುಗಳನ್ನು ತೊಳೆದುಕೊಂಡರು. ಬಳಿಕ ಅವನು ಅವರ ಕತ್ತೆಗಳಿಗೆ ಆಹಾರವನ್ನು ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆ ಮನುಷ್ಯನು ಅವರನ್ನು ಯೋಸೇಫನ ಮನೆಯೊಳಗೆ ಕರೆದುಕೊಂಡು ಬಂದು ಅವರಿಗೆ ನೀರನ್ನು ಕೊಟ್ಟಾಗ, ಅವರು ತಮ್ಮ ಕಾಲುಗಳನ್ನು ತೊಳೆದುಕೊಂಡರು. ಇದಲ್ಲದೆ ಅವರ ಕತ್ತೆಗಳಿಗೆ ಮೇವನ್ನು ಹಾಕಿದನು. ಅಧ್ಯಾಯವನ್ನು ನೋಡಿ |