Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:26 - ಕನ್ನಡ ಸತ್ಯವೇದವು C.L. Bible (BSI)

26 ಜೋಸೆಫನು ಮನೆಗೆ ಬಂದಾಗ ಅವರು ಅವನಿಗೆ ಕಾಣಿಕೆಯನ್ನು ತಂದುಕೊಟ್ಟು, ಅವನ ಮುಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೋಸೇಫನು ಮನೆಗೆ ಬಂದಾಗ, ಅವರು ತಮ್ಮ ಕೈಯಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಂದು, ಅವನಿಗೆ ಕೊಟ್ಟು, ಅವನ ಮುಂದೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೋಸೇಫನು ಮನೆಗೆ ಬಂದಾಗ ಅವರು ಕಾಣಿಕೆಯನ್ನು ಮನೆಯೊಳಕ್ಕೆ ತಂದುಕೊಟ್ಟು ಅವನ ಮುಂದೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೋಸೇಫನು ಮನೆಗೆ ಬಂದಾಗ, ಸಹೋದರರು ತಾವು ತಂದಿದ್ದ ಉಡುಗೊರೆಗಳನ್ನು ಅವನಿಗೆ ಕೊಟ್ಟರು. ಬಳಿಕ ಅವರು ನೆಲದವರೆಗೆ ಬಾಗಿ ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯೋಸೇಫನು ಮನೆಗೆ ಬಂದ ಮೇಲೆ, ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತೆಗೆದುಕೊಂಡು ಬಂದು, ಅವನಿಗೆ ನೆಲದವರೆಗೂ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:26
11 ತಿಳಿವುಗಳ ಹೋಲಿಕೆ  

ಆಗ ಈಜಿಪ್ಟ್ ದೇಶದಲ್ಲಿ ಅಧಿಕಾರ ನಡೆಸುತ್ತಿದ್ದವನು ಹಾಗೂ ಜನರಿಗೆ ದವಸಧಾನ್ಯ ಮಾರಾಟ ಮಾಡಿಸುತ್ತಿದ್ದವನು ಜೋಸೆಫನೇ. ಇಂತಿರಲು ಅವನ ಅಣ್ಣಂದಿರು ಬಂದು ಅವನ ಮುಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು.


ಪವಿತ್ರಗ್ರಂಥದಲ್ಲಿ : ಎಲ್ಲರೂ ನನಗೆ ಸಾಷ್ಟಾಂಗವೆರಗುವರು ಎಲ್ಲರೂ ನನ್ನನ್ನು ದೇವರೆಂದು ನಿವೇದಿಸುವರು ಇದಕ್ಕೆ ಜೀವಸ್ವರೂಪನಾದ ನಾನೇ ಸಾಕ್ಷಿ,” ಎಂದು ಸರ್ವೇಶ್ವರಸ್ವಾಮಿ ಹೇಳಿದ್ದಾರೆ.


ಸೇವೆಗೈಯಲಿ ನಿನಗೆ ಹೊರನಾಡುಗಳು ಅಡ್ಡಬೀಳಲಿ ನಿನಗೆ ಹೊರಜನಾಂಗಗಳು ಒಡೆಯನಾಗು ಸೋದರರಿಗೆ ಅಡ್ಡಬೀಳಲಿ ತಾಯಕುಡಿ ನಿನಗೆ ಶಾಪವಿರಲಿ ನಿನ್ನನ್ನು ಶಪಿಸುವವರಿಗೆ ಆಶೀರ್ವಾದವು ನಿನ್ನನ್ನು ಹರಸುವವರಿಗೆ!”


ಅರಣ್ಯವಾಸಿಗಳು ಅರಸನಿಗೆ ಅಡ್ಡಬೀಳಲಿ I ಆತನ ಕಡುವೈರಿಗಳು ನೆಲದ ಮಣ್ಣು ಮುಕ್ಕಲಿ II


ಅವರು ಮತ್ತೆ ನೆಲದವರೆಗೆ ಬಾಗಿ ನಮಸ್ಕಾರ ಮಾಡಿ, “ನಿಮ್ಮ ಸೇವಕರಾದ ನಮ್ಮ ತಂದೆ ಇಂದಿಗೂ ಕ್ಷೇಮದಿಂದ ಇದ್ದಾರೆ,” ಎಂದರು.


ತಾನೇ ಅವರ ಮುಂದಾಗಿ ನಡೆದನು. ತನ್ನ ಅಣ್ಣನನ್ನು ಸಮೀಪಿಸುತ್ತಿರುವಾಗ ಏಳು ಸಾರಿ ನೆಲದ ತನಕ ಬಗ್ಗಿ ನಮಸ್ಕರಿಸಿದನು.


ಇಷ್ಟಾದ ಮೇಲೆ ಅವರ ತಂದೆ ಯಕೋಬನು, “ನೀವು ಹೋಗಲೇಬೇಕಾದರೆ, ಒಂದು ಕೆಲಸಮಾಡಿ; ಈ ನಾಡಿನಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಹಾಕಿಕೊಂಡು ಹೋಗಿ, ಆ ಮನುಷ್ಯನಿಗೆ ಕಾಣಿಕೆಯಾಗಿ ಕೊಡಿ.


ಮೋಶೆ ಹೊರಗೆ ಬಂದು ತನ್ನ ಮಾವನನ್ನು ಎದುರುಗೊಂಡು, ವಂದಿಸಿ, ಮುದ್ದಿಟ್ಟನು. ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಅವರು ಡೇರೆಯೊಳಕ್ಕೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು