Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:3 - ಕನ್ನಡ ಸತ್ಯವೇದವು C.L. Bible (BSI)

3 ಅದಕ್ಕೆ ಯೆಹೂದನು ಹೀಗೆಂದನು: “ಆ ಮನುಷ್ಯ ನಮಗೆ, ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ದರ್ಶನಕ್ಕೆ ಬರಕೂಡದು’ ಎಂದು ಕಡುಖಂಡಿತವಾಗಿ ಹೇಳಿಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದಕ್ಕೆ ಯೆಹೂದನು ತನ್ನ ತಂದೆಗೆ ಹೇಳಿದ್ದೇನಂದರೆ, “ಆ ಮನುಷ್ಯನು ನಮಗೆ ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ಮುಖವನ್ನು ನೋಡಬಾರದು’ ಎಂದು ಖಂಡಿತವಾಗಿ” ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದಕ್ಕೆ ಯೆಹೂದನು - ಆ ಮನುಷ್ಯನು ನಮಗೆ, ನಿಮ್ಮ ತಮ್ಮನನ್ನು ಕರಕೊಂಡುಬಂದ ಹೊರತು ನನ್ನ ಮುಖವನ್ನು ನೋಡಕೂಡದು ಎಂದು ಖಂಡಿತವಾಗಿ ಹೇಳಿದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೂದನು ಯಾಕೋಬನಿಗೆ, “ಆ ದೇಶದ ರಾಜ್ಯಪಾಲನು ನಮಗೆ ಎಚ್ಚರಿಕೆ ಕೊಟ್ಟಿದ್ದಾನೆ. ಅವನು, ‘ನೀವು ನಿಮ್ಮ ಸಹೋದರನನ್ನು ನನ್ನ ಬಳಿಗೆ ಕರೆದುಕೊಂಡು ಬಾರದೆ ನನ್ನನ್ನು ಭೇಟಿಯಾಗಕೂಡದು’ ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೆಹೂದನು ಅವನಿಗೆ, “ಆ ಮನುಷ್ಯನು ನಮಗೆ ನಿಮ್ಮ ಸಹೋದರನು ನಿಮ್ಮ ಸಂಗಡ ಇದ್ದ ಹೊರತು, ನೀವು ನನ್ನ ಮುಖವನ್ನು ನೋಡಬಾರದೆಂದು, ನಮಗೆ ದೃಢವಾಗಿ ನಿರ್ಣಯಿಸಿ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:3
13 ತಿಳಿವುಗಳ ಹೋಲಿಕೆ  

ಅದಕ್ಕೆ ತಾವು, 'ನಿಮ್ಮ ತಮ್ಮನು ಬಾರದಿದ್ದರೆ ನೀವು ಮತ್ತೊಮ್ಮೆ ನನ್ನ ಮುಖವನ್ನು ನೋಡಕೂಡದು,’ ಎಂದು ಆಜ್ಞೆಕೊಟ್ಟಿರಿ.


ಕಳಿಸಿಕೊಡದಿದ್ದರೆ, ನಾವು ಹೋಗುವುದಿಲ್ಲ. ಆ ಮನುಷ್ಯ, ‘ನಿಮ್ಮ ತಮ್ಮ ನಿಮ್ಮ ಸಂಗಡ ಇಲ್ಲದಿದ್ದರೆ ಸಮ್ಮುಖಕ್ಕೆ ಬರಲೇ ಕೂಡದು’ ಎಂದಿದ್ದಾನೆ".


‘ಇನ್ನೆಂದೂ ನೀವು ನನ್ನ ಮುಖವನ್ನು ಕಾಣಲಾರಿರಿ,’ ಎಂಬ ಅವನ ಮಾತು ಅವರನ್ನು ಅತೀವ ದುಃಖಕ್ಕೆ ಈಡುಮಾಡಿತ್ತು. ಅವರು ಹಡಗಿನವರೆಗೂ ಹೋಗಿ ಅವನನ್ನು ಬೀಳ್ಕೊಟ್ಟರು.


ಇಗೋ, ಇಷ್ಟು ದಿನ ದೇವರ ಸಾಮ್ರಾಜ್ಯವನ್ನು ಪ್ರಕಟಿಸುತ್ತಾ ನಿಮ್ಮ ಮಧ್ಯೆ ಸಂಚರಿಸಿದ ನನ್ನ ಮುಖವನ್ನು ಇನ್ನು ಮುಂದೆ ನೀವು ಯಾರೂ ಕಾಣಲಾರಿರಿ ಎಂದು ನಾನು ಬಲ್ಲೆ.


ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆ ನನಗೆ ತಿಳಿದೇ ಇದೆ. ಅವರ ಗೋಳನ್ನು ಕೇಳಿ ಅವರನ್ನು ಬಿಡುಗಡೆಮಾಡಲು ಬಂದಿರುವೆನು. ಬಾ, ನಾನು ನಿನ್ನನ್ನು ಈಜಿಪ್ಟಿಗೆ ಕಳುಹಿಸುವೆನು,’ ಎಂದರು.


ಅಬ್ಷಾಲೋಮನು, “ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದೇಕೆ? ಅಲ್ಲೇ ಇದ್ದಿದ್ದರೆ ಒಳ್ಳೇದಾಗುತ್ತಿತ್ತಲ್ಲವೇ?’ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವುದಕ್ಕಾಗಿ ನಿನ್ನನ್ನು ಕರೇಕಳುಹಿಸಿದೆ; ನಾನು ಹೇಗೂ ಅರಸನ ಮುಖವನ್ನು ನೋಡಬೇಕು; ನಾನು ಅಪರಾಧಿ ಆಗಿದ್ದರೆ ಅವರು ನನ್ನನ್ನು ಕೊಲ್ಲಿಸಲಿ,” ಎಂದನು.


ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ಎರಡು ವರ್ಷ ಜೆರುಸಲೇಮಿನಲ್ಲಿ ವಾಸವಾಗಿದ್ದನು.


ಆದರೆ ಅರಸನು, “ಅಬ್ಷಾಲೋಮನು ತನ್ನ ಮನೆಗೆ ಹೋಗಲಿ; ಅವನು ನನ್ನ ಮುಖವನ್ನು ನೋಡಬಾರದು,” ಎಂದು ಆಜ್ಞಾಪಿಸಿದನು. ಆದ್ದರಿಂದ ಅವನು ತನ್ನ ಮನೆಗೆ ಹೋದನು. ಅರಸನ ಮುಖವನ್ನು ನೋಡಲಿಲ್ಲ.


ಅದಕ್ಕೆ ದಾವೀದನು, “ಒಳ್ಳೆಯದು, ನಿನ್ನ ಸಂಗಡ ಒಪ್ಪಂದಮಾಡಿಕೊಳ್ಳುತ್ತೇನೆ; ಆದರೆ ನೀನು ಒಂದು ಕಾರ್ಯವನ್ನು ಮಾಡಬೇಕು; ನನ್ನನ್ನು ನೋಡುವುದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರೆದುಕೊಂಡು ಬರಬೇಕು. ಹಾಗೆ ಕರೆದುಕೊಂಡು ಬಾರದಿದ್ದರೆ ನೀನು ನನ್ನ ಮುಖವನ್ನು ನೋಡಕೂಡದು,” ಎಂದು ಉತ್ತರಕೊಟ್ಟನು.


ಈಜಿಪ್ಟಿನಿಂದ ತಂದ ದವಸಧಾನ್ಯ ಮುಗಿದು ಹೋಗಿತ್ತು. ಯಕೋಬನು ತನ್ನ ಪುತ್ರರಿಗೆ, ” ನೀವು ಪುನಃ ಹೋಗಿ ಸ್ವಲ್ಪ ಧಾನ್ಯವನ್ನು ಕೊಂಡುಕೊಂಡು ಬನ್ನಿ,” ಎಂದನು.


ನೀವು ನಮ್ಮ ತಮ್ಮನನ್ನು ಜೊತೆಯಲ್ಲಿ ಕಳಿಸಿದರೆ, ಹೋಗಿ ಧಾನ್ಯವನ್ನು ಕೊಂಡುಕೊಂಡು ಬರುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು