Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:30 - ಕನ್ನಡ ಸತ್ಯವೇದವು C.L. Bible (BSI)

30 ಜೋಸೆಫನಿಗೆ ತಮ್ಮನನ್ನು ನೋಡಿದ ಮೇಲೆ ಕರುಳು ಕರಗಿತು. ಕಣ್ಣೀರನ್ನು ತಡೆಯಲಾಗದೆ ಒಳ ಅರಮನೆಗೆ ತ್ವರೆಯಾಗಿ ಹೋಗಿ ಅಲ್ಲಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೋಸೇಫನು ಅವಸರವಾಗಿ ಎದ್ದು ತನ್ನ ಕೋಣೆಯೊಳಗೆ ಹೋದನು. ಏಕೆಂದರೆ ತನ್ನ ಕರಳು ತಮ್ಮನ ಮೇಲೆ ಮರುಗಿದ್ದರಿಂದ ಅವನು ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯೋಸೇಫನಿಗೆ ತಮ್ಮನ ಮೇಲೆ ಕರುಳು ಮರುಗಿದ್ದರಿಂದ ಅವನು ಬೇಗನೆ ಎದ್ದು ಅಳುವದಕ್ಕೆ ಸ್ಥಳವನ್ನು ನೋಡಿಕೊಂಡು ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೋಸೇಫನು ತನ್ನ ತಮ್ಮನಾದ ಬೆನ್ಯಾಮೀನನನ್ನು ಬಹಳವಾಗಿ ಪ್ರೀತಿಸುತ್ತಿದ್ದ ಕಾರಣ ಆನಂದದಿಂದ ಅವನ ಕಣ್ಣಲ್ಲಿ ನೀರು ಉಕ್ಕೇರಿ ಬಂದದ್ದರಿಂದ ಕೋಣೆಯೊಳಗೆ ಹೋಗಿ ಕಣ್ಣೀರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಯೋಸೇಫನ ಕರುಳು ತನ್ನ ತಮ್ಮನ ಬಗ್ಗೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವುದಕ್ಕೆ ಸ್ಥಳವನ್ನು ಹುಡುಕಿ, ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:30
16 ತಿಳಿವುಗಳ ಹೋಲಿಕೆ  

ಜೋಸೆಫನಾದರೋ ಅವರ ಬಳಿಯಿಂದ ಮರೆಯಾಗಿ ಹೋಗಿ ಕಣ್ಣೀರು ಸುರಿಸಿದ. ತರುವಾಯ ಅವರ ಬಳಿಗೆ ಬಂದು, ಸಂಭಾಷಣೆ ಮುಂದುವರೆಸಿ, ಸಿಮೆಯೋನನನ್ನು ಆರಿಸಿ, ಅವರ ಕಣ್ಣೆದುರಿನಲ್ಲೇ ಅವನಿಗೆ ಬೇಡಿಹಾಕಿಸಿದ.


ಸರ್ವೇಶ್ವರ ಹೀಗೆನ್ನುತ್ತಾರೆ: “ಎಫ್ರಯಿಮ್, ನನಗೆ ಪ್ರಿಯ ಪುತ್ರನಲ್ಲವೆ? ನನ್ನ ಮುದ್ದು ಮಗನಲ್ಲವೆ? ಅವನ ವಿರುದ್ಧ ನಾನು ಪದೇ ಪದೇ ಮಾತಾಡಿದ್ದರೂ ನನ್ನ ಜ್ಞಾಪಕಕ್ಕೆ ಬರುತ್ತಲೇ ಇರುತ್ತಾನೆ. ಅವನಿಗಾಗಿ ನನ್ನ ಕರುಳು ಮರುಗುತ್ತದೆ. ಅವನನ್ನು ನಿಶ್ಚಯವಾಗಿ ಕರುಣಿಸುವೆನು.”


ಕ್ರಿಸ್ತಯೇಸುವಿನಲ್ಲಿ ನಿಮಗೆ ಉತ್ಸಾಹ, ಉತ್ತೇಜನ, ಪ್ರೀತಿ, ಪ್ರೇರಣೆ, ಪವಿತ್ರಾತ್ಮ ಅವರ ಅನ್ಯೋನ್ಯತೆ, ದೀನದಯಾಳತೆ ಇರುವುದಾದರೆ ಐಕಮತ್ಯದಿಂದ ಬಾಳಿರಿ.


ಕ್ರಿಸ್ತಯೇಸುವಿನಲ್ಲಿರುವ ಉತ್ಕಟ ಪ್ರೀತಿಯಿಂದಲೇ ನಾನು ನಿಮ್ಮೆಲ್ಲರಿಗಾಗಿ ಹಂಬಲಿಸುತ್ತಿದ್ದೇನೆ; ಇದಕ್ಕೆ ದೇವರೇ ಸಾಕ್ಷಿ.


“ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?


ಆಗ, ಜೀವದಿಂದಿದ್ದ ಕೂಸಿನ ನಿಜವಾದ ತಾಯಿಗೆ ಕೂಸಿನ ವಿಷಯದಲ್ಲಿ ಕರುಳುಕರಗಿತು; “ನನ್ನೊಡೆಯಾ, ಬೇಡಿ; ಬದುಕಿರುವ ಕೂಸನ್ನು ಅವಳಿಗೇ ಕೊಟ್ಟುಬಿಡಿ; ಅದನ್ನು ಕೊಲ್ಲಿಸಬೇಡಿ,” ಎಂದು ಬೇಡಿಕೊಂಡಳು; ಎರಡನೆಯವಳು, “ಅದು ನನಗೂ ಬೇಡ, ನಿನಗೂ ಬೇಡ, ಕಡಿಯಲಿ,” ಎಂದು ಕೂಗಿದಳು.


ಅವನು ಗಟ್ಟಿಯಾಗಿ ಅತ್ತದ್ದು ಈಜಿಪ್ಟಿನವರಿಗೆ ಕೇಳಿಸಿತು; ಫರೋಹನ ಮನೆಯವರಿಗೂ ಆ ಸುದ್ದಿ ಮುಟ್ಟಿತು.


ಲೋಕದ ಸುಖಸಂಪತ್ತುಳ್ಳ ಒಬ್ಬನು, ಕುಂದುಕೊರತೆಯಲ್ಲಿ ಸಿಲುಕಿರುವ ತನ್ನ ಸಹೋದರನನ್ನು ಕಂಡಾಗಲೂ ಮನಕರಗದಿದ್ದರೆ ಅವನಲ್ಲಿ ದೇವರ ಪ್ರೀತಿ ಹೇಗೆ ತಾನೇ ನೆಲೆಸೀತು?


ನೀವು ದೇವರಿಂದ ಆಯ್ಕೆಯಾದವರು. ದೇವರಿಗೆ ಪ್ರಿಯವಾದವರು. ದೇವರ ಸ್ವಂತಜನರು. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳೇ ನಿಮ್ಮ ಆಭರಣಗಳಾಗಿರಲಿ.


ಅನಂತರ ಅವರು ಅವನನ್ನು ತಬ್ಬಿಕೊಂಡು ಮುದ್ದಿಟ್ಟು ಬೀಳ್ಕೊಟ್ಟರು. ಅವರ ಕಣ್ಣಲ್ಲಾದರೋ ನೀರು ಧಾರಾಕಾರವಾಗಿ ಹರಿಯುತ್ತಿತ್ತು.


ಆದುದರಿಂದ ಎಚ್ಚರಿಕೆ! ನಾನು ಮೂರು ವರ್ಷಗಳ ಕಾಲ ಹಗಲಿರುಳು ಕಣ್ಣೀರಿಡುತ್ತಾ ಪ್ರತಿಯೊಬ್ಬನಿಗೂ ಬುದ್ಧಿ ಹೇಳಿದ್ದೇನೆಂಬುದನ್ನು ಮರೆಯಬೇಡಿ.


ಯೆಹೂದ್ಯರ ಕುತಂತ್ರಗಳಿಂದ ನನಗೆ ಬಂದೊದಗಿದ ಸಂಕಷ್ಟಗಳಲ್ಲಿ ನಾನು ಅತಿ ನಮ್ರತೆಯಿಂದಲೂ ಕಣ್ಣೀರಿಡುತ್ತಲೂ ಪ್ರಭುವಿನ ಸೇವೆಮಾಡಿಕೊಂಡು ಬಂದೆನು.


ಜೋಸೆಫನು ರಥವನ್ನೇರಿ ತನ್ನ ತಂದೆ ಯಕೋಬನನ್ನು ಭೇಟಿಯಾಗಲು ಗೋಷೆನಿಗೆ ಬಂದನು. ತಂದೆಯನ್ನು ಕಂಡೊಡನೆ ಅವರ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತು ಅತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು