Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:31 - ಕನ್ನಡ ಸತ್ಯವೇದವು C.L. Bible (BSI)

31 ಆಮೇಲೆ ಮುಖವನ್ನು ತೊಳೆದುಕೊಂಡು, ಹೊರಗೆ ಬಂದು, ಮನಸ್ಸನ್ನು ಬಿಗಿಹಿಡಿದು, “ಊಟಕ್ಕೆ ಬಡಿಸಿರಿ”, ಎಂದು ಅಪ್ಪಣೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆ ಮೇಲೆ ಮುಖವನ್ನು ತೊಳೆದುಕೊಂಡು ಹೊರಗೆ ಬಂದು, ಮನಸ್ಸನ್ನು ಬಿಗಿ ಹಿಡಿದು, “ಊಟಕ್ಕೆ ಬಡಿಸಿರಿ” ಎಂದು ಅಪ್ಪಣೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಮೇಲೆ ಮುಖವನ್ನು ತೊಳಕೊಂಡು ಹೊರಗೆ ಬಂದು ಮನಸ್ಸನ್ನು ಬಿಗಿಹಿಡಿದು ಊಟಕ್ಕೆ ಬಡಿಸಿರಿ ಎಂದು ಅಪ್ಪಣೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಬಳಿಕ ಯೋಸೇಫನು ತನ್ನ ಮುಖವನ್ನು ತೊಳೆದುಕೊಂಡು ಮತ್ತು ಮನಸ್ಸನ್ನು ಬಿಗಿಹಿಡಿದುಕೊಂಡು ಬಂದು, “ಊಟ ಬಡಿಸಿರಿ” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ತರುವಾಯ ಅವನು ಮುಖವನ್ನು ತೊಳೆದುಕೊಂಡು ಹೊರಗೆ ಬಂದನು. ಅವನು ಮನಸ್ಸನ್ನು ಬಿಗಿಹಿಡಿದುಕೊಂಡು, “ಊಟಕ್ಕೆ ಬಡಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:31
5 ತಿಳಿವುಗಳ ಹೋಲಿಕೆ  

ಇದನ್ನು ಕೇಳಿದ ಮೇಲೆ ತನ್ನ ಪರಿವಾರದವರ ಮುಂದೆ, ತನ್ನನ್ನೇ ಇನ್ನು ತಡೆಹಿಡಿದುಕೊಳ್ಳಲು ಜೋಸೆಫನಿಂದ ಆಗಲಿಲ್ಲ. “ಇಲ್ಲಿಂದ ಎಲ್ಲರನ್ನು ಆಚೆ ಕಳಿಸಿರಿ,” ಎಂದು ಬಾಯ್ತೆರೆದು ಹೇಳಿದ. ಜೋಸೆಫನ ಅಣ್ಣತಮ್ಮಂದಿರಿಗೆ ತನ್ನ ಪರಿಚಯ ಸಿಗುವಂತೆ ಮಾಡುವಾಗ ಇತರರು ಯಾರೂ ಹತ್ತಿರ ಇರಲಿಲ್ಲ.


“ಆನಂದಕರ ಜೀವನದ ಬಯಕೆ ಯಾರಿಗಿದೆಯೋ ಸುದಿನಗಳನು ಕಾಣುವ ಆಶೆ ಯಾರಿಗಿದೆಯೋ ಅಂಥವನು ಬಿಗಿಹಿಡಿಯಲಿ ನಾಲಿಗೆಯನು ಕೆಟ್ಟದನು ನುಡಿಯದಂತೆ ತಡೆಹಿಡಿಯಲಿ ತುಟಿಯನು ಕಪಟವನಾಡದಂತೆ.


ಸರ್ವೇಶ್ವರ ಹೀಗೆನ್ನುತ್ತಾರೆ: “ನಿಲ್ಲಿಸು ನಿನ್ನ ಗೋಳಾಟವನ್ನು ಒರಸು ನಿನ್ನ ಕಣ್ಗಳಿಂದ ನೀರನ್ನು. ನಿನ್ನ ಪ್ರಯಾಸ ಸಾರ್ಥಕವಾಗುವುದು ಶತ್ರುವಿನ ದೇಶದಿಂದ ನಿನ್ನ ಮಕ್ಕಳು ಹಿಂದಿರುಗುವರು. ಸರ್ವೇಶ್ವರನಾದ ನನ್ನ ನುಡಿ ಇದು.”


ನನ್ನನ್ನೇ ತಡೆಹಿಡಿದೆನು : ಆದರೀಗ ಸಮಯ ಬಂದಿಹುದು; ಪ್ರಸವವೇದನೆಯನು ಅನುಭವಿಸುವ ಸ್ತ್ರೀಯಂತೆ ಅಬ್ಬರಿಸುವೆನು


ವಾಚಾಳಿಗೆ ಪಾಪ ತಪ್ಪದು; ಮೌನಿಗೆ ಜ್ಞಾನ ಕೆಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು