Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:32 - ಕನ್ನಡ ಸತ್ಯವೇದವು C.L. Bible (BSI)

32 ಪರಿಚಾರಕರು ಅವನಿಗೆ ಬೇರೆ, ಅವನ ಅಣ್ಣತಮ್ಮಂದಿರಿಗೇ ಬೇರೆ, ಅವನ ಸಂಗಡವಿದ್ದ ಈಜಿಪ್ಟಿನವರಿಗೇ ಬೇರೆ, ಹೀಗೆ ಬೇರೆಬೇರೆಯಾಗಿ ಊಟಕ್ಕೆ ಬಡಿಸಿದರು. ಈಜಿಪ್ಟಿನವರು ಹಿಬ್ರಿಯರ ಸಹಪಂಕ್ತಿಯಲ್ಲಿ ಊಟಮಾಡುವುದಿಲ್ಲ; ಅದು ಅವರಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತರಿಗೂ ಬೇರೆ ಬೇರೆಯಾಗಿ ಊಟಕ್ಕೆ ಬಡಿಸಿದರು. ಏಕೆಂದರೆ ಐಗುಪ್ತರು ಇಬ್ರಿಯರ ಜೊತೆ ಸಹಪಂಕ್ತಿಯಲ್ಲಿ ಊಟಮಾಡುತ್ತಿರಲಿಲ್ಲ. ಅದು ಐಗುಪ್ತರಿಗೆ ಅಸಹ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿದರು. ಐಗುಪ್ತ್ಯರು ಇಬ್ರಿಯರ ಸಹಪಂಕ್ತಿಯಲ್ಲಿ ಊಟಮಾಡುವದಿಲ್ಲ; ಅದು ಅವರಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೋಸೇಫನೊಬ್ಬನೇ ಒಂದು ಮೇಜಿನಲ್ಲಿ ಊಟ ಮಾಡಿದನು. ಅವನ ಸಹೋದರರು ಒಟ್ಟಾಗಿ ಮತ್ತೊಂದು ಮೇಜಿನಲ್ಲಿ ಊಟ ಮಾಡಿದರು. ಈಜಿಪ್ಟಿನವರು ಬೇರೊಂದು ಮೇಜಿನಲ್ಲಿ ಊಟ ಮಾಡಿದರು. ಇಬ್ರಿಯ ಜನರೊಂದಿಗೆ ಊಟ ಮಾಡುವುದು ತಪ್ಪೆಂಬುದು ಅವರ ನಂಬಿಕೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆಗ ಅವರು ಯೋಸೇಫನಿಗೆ, ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಈಜಿಪ್ಟಿನವರಿಗೂ ಬೇರೆಬೇರೆಯಾಗಿ ಊಟಕ್ಕೆ ಇಟ್ಟರು. ಏಕೆಂದರೆ ಈಜಿಪ್ಟಿನವರು ಹಿಬ್ರಿಯರ ಕೂಡ ಊಟಮಾಡುತ್ತಿರಲಿಲ್ಲ. ಅದು ಈಜಿಪ್ಟಿನವರಿಗೆ ಅಸಹ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:32
4 ತಿಳಿವುಗಳ ಹೋಲಿಕೆ  

ಆದರೆ ಮೋಶೆ, “ಹಾಗೆ ಮಾಡುವುದು ಸರಿಯಲ್ಲ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಬಲಿಯಾಗಿ ಕೊಡುವ ಆಹುತಿ ಈಜಿಪ್ಟಿನವರಿಗೆ ನಿಷಿದ್ಧವಾದದ್ದು. ನಿಷಿದ್ಧವೆಂದು ಈಜಿಪ್ಟಿನವರು ತಿಳಿದುಕೊಂಡು ಇರುವ ಆಹುತಿಯನ್ನು ನಾವು ಅವರ ಕಣ್ಮುಂದೆಯೇ ಮಾಡಿದರೆ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರಲ್ಲವೆ?


'ಚಿಕ್ಕಂದಿನಿಂದ ಇಂದಿನವರೆಗೂ ನಿಮ್ಮ ಸೇವಕರಾದ ನಾವು, ನಮ್ಮ ಪೂರ್ವಜರ ಪದ್ಧತಿಯಂತೆ ಮಂದೆ ಮೇಯಿಸುವವರು,’ ಎಂದು ಹೇಳಿರಿ. ಆಗ ಗೋಷೆನ್ ಪ್ರಾಂತ್ಯವನ್ನು ನಿಮ್ಮ ನಿವಾಸಕ್ಕೆ ನೇಮಿಸುವನು - ಏಕೆಂದರೆ ಕುರಿ ಕಾಯುವವರೆಂದರೆ ಈಜಿಪ್ಟಿಯರಿಗೆ ಹಿಡಿಸದು,” ಎಂದು ಹೇಳಿದನು.


ಬೆನ್ಯಾಮೀನನು ಅವರ ಸಂಗಡ ಇರುವುದನ್ನು ಜೋಸೆಫನು ನೋಡಿದನು. ಕೂಡಲೆ ಗೃಹನಿರ್ವಾಹಕನನ್ನು ಕರೆದು, “ಈ ಜನರು ನನ್ನ ಸಂಗಡ ಈ ಮಧ್ಯಾಹ್ನ ಊಟಮಾಡಬೇಕಾಗಿ ಇದೆ; ಇವರನ್ನು ಮನೆಯೊಳಗೆ ಕರೆದುಕೊಂಡು ಹೋಗು. ಮಾಂಸದ ಅಡುಗೆ ಮಾಡಿ, ಎಲ್ಲವನ್ನು ಸಿದ್ಧಪಡಿಸು,” ಎಂದು ಅಪ್ಪಣೆಮಾಡಿದನು.


ಅಲ್ಲದೆ, ಯಕೋಬನು ಆ ಬೆಟ್ಟದ ಮೇಲೆ ಬಲಿಯನ್ನರ್ಪಿಸಿ ಬಂಧುಗಳನ್ನು ತನ್ನೊಡನೆ ಸಹಭೋಜನಕ್ಕೆ ಕರೆಸಿದನು. ಅವರು ಸಹಭೋಜನ ಮಾಡಿ ಆ ರಾತ್ರಿಯೆಲ್ಲಾ ಬೆಟ್ಟದ ಮೇಲಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು