Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:33 - ಕನ್ನಡ ಸತ್ಯವೇದವು C.L. Bible (BSI)

33 ಜೋಸೆಫನು ತನ್ನ ಅಣ್ಣತಮ್ಮಂದಿರನ್ನು, ಹಿರಿಯವನು ಮೊದಲ್ಗೊಂಡು ಕಿರಿಯವನವರೆಗೂ, ಅವರವರ ಮಯಸ್ಸಿನ ಪ್ರಕಾರ ಕುಳ್ಳಿರಿಸಿದ್ದನು. ಇದನ್ನು ಗಮನಿಸಿದ ಅವರು ಒಬ್ಬರನ್ನೊಬ್ಬರು ನೋಡುತ್ತಾ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಯೋಸೇಫನು ತನ್ನ ಅಣ್ಣತಮ್ಮಂದಿರನ್ನು ಹಿರಿಯವನು ಮೊದಲುಗೊಂಡು ಕಿರಿಯವನವರೆಗೂ ಅವರವರ ವಯಸ್ಸಿನ ಪ್ರಕಾರವೇ ಕುಳಿತುಕೊಳ್ಳುವಂತೆ ಮಾಡಿದ್ದರಿಂದ, ಅವರು ತಮ್ಮೊಳಗೆ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಯೋಸೇಫನು ತನ್ನ ಅಣ್ಣತಮ್ಮಂದಿರನ್ನು ಹಿರಿಯವನು ಮೊದಲುಗೊಂಡು ಕಿರಿಯವನವರೆಗೂ ಅವರವರ ವಯಸ್ಸಿನ ಪ್ರಕಾರವೇ ಕುಳ್ಳಿರಿಸಿದ್ದರಿಂದ ಅವರು ಒಬ್ಬರನ್ನೊಬ್ಬರು ನೋಡುತ್ತಾ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೋಸೇಫನ ಎದುರಿನ ಸಾಲಿನಲ್ಲಿ ಕುಳಿತುಕೊಳ್ಳಲು ಯೋಸೇಫನ ಸಹೋದರರಿಗೆ ಹಿರಿಯವನಿಂದ ಮೊದಲುಗೊಂಡು ಕಿರಿಯವನವರೆಗೆ ಕ್ರಮವಾಗಿ ಸ್ಥಳವನ್ನು ಗೊತ್ತುಪಡಿಸಲಾಗಿತ್ತು. ಆದ್ದರಿಂದ ಸಹೋದರರೆಲ್ಲಾ ಅತ್ಯಾಶ್ಚರ್ಯದಿಂದ ಒಬ್ಬರನ್ನೊಬ್ಬರು ನೋಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಯೋಸೇಫನು ಅವರನ್ನು ಹಿರಿಯವರಿಂದ ಕಿರಿಯವನವರೆಗೆ ಅವರವರ ವಯಸ್ಸಿನ ಪ್ರಕಾರ ಕುಳಿತುಕೊಳ್ಳುವಂತೆ ಮಾಡಿದ್ದರಿಂದ, ಅವರು ತಮ್ಮತಮ್ಮೊಳಗೆ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:33
5 ತಿಳಿವುಗಳ ಹೋಲಿಕೆ  

ಈ ಮಾತನ್ನು ಕೇಳಿದ್ದೇ ಯೇಸುವಿಗೆ ಅತ್ಯಾಶ್ಚರ್ಯವಾಯಿತು. ತಮ್ಮನ್ನು ಹಿಂಬಾಲಿಸಿ ಬರುತ್ತಿದ್ದ ಜನರನ್ನು ನೋಡಿ ಹೀಗೆಂದರು: “ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲಿ ಕೂಡ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.


ಜೋಸೆಫನು ಅವರನ್ನು ನೋಡಿದಕೂಡಲೆ ಗುರುತುಹಿಡಿದನು. ಆದರೂ ಅವರ ಪರಿಚಯ ಇಲ್ಲದವನಂತೆ ಬಿರುಬುಡಿಯಿಂದ, “ನೀವು ಎಲ್ಲಿಯವರು?” ಎಂದು ಕೇಳಿದನು. ಅವರು, “ನಾವು ಧಾನ್ಯ ಕೊಂಡುಕೊಳ್ಳುವುದಕ್ಕಾಗಿ ಕಾನಾನ್ ನಾಡಿನಿಂದ ಬಂದವರು,” ಎಂದು ಹೇಳಿದರು.


ಅವನು ಹಿರಿಯವನಿಂದ ಮೊದಲ್ಗೊಂಡು ಕಿರಿಯವನ ತನಕ ಪರೀಕ್ಷಿಸಿ ನೋಡಿದನು. ಆ ಪಾತ್ರೆ ಬೆನ್ಯಾಮೀನನ ಚೀಲದಲ್ಲಿ ಸಿಕ್ಕಿತು.


“ಹಾಗಲ್ಲ ಅಪ್ಪಾ, ಇವನೇ ಜೇಷ್ಠ ಪುತ್ರ; ಬಲಗೈಯನ್ನು ಇವನ ತಲೆಯ ಮೇಲೆ ಇಡು”, ಎಂದು ಹೇಳಿದ.


ಒಂದು ರತ್ನದಲ್ಲಿ ಆರು ಹೆಸರುಗಳನ್ನು ಮತ್ತೊಂದು ರತ್ನದಲ್ಲಿ ಮಿಕ್ಕ ಆರು ಹೆಸರುಗಳನ್ನು ಅವರವರ ಜನನದ ಕ್ರಮಾನುಸಾರ ಕೆತ್ತಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು