Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:5 - ಕನ್ನಡ ಸತ್ಯವೇದವು C.L. Bible (BSI)

5 ಕಳಿಸಿಕೊಡದಿದ್ದರೆ, ನಾವು ಹೋಗುವುದಿಲ್ಲ. ಆ ಮನುಷ್ಯ, ‘ನಿಮ್ಮ ತಮ್ಮ ನಿಮ್ಮ ಸಂಗಡ ಇಲ್ಲದಿದ್ದರೆ ಸಮ್ಮುಖಕ್ಕೆ ಬರಲೇ ಕೂಡದು’ ಎಂದಿದ್ದಾನೆ".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನನ್ನು ನೀನು ಕಳುಹಿಸದೆ ಹೋದರೆ ನಾವು ಹೋಗುವುದಿಲ್ಲ. ಏಕೆಂದರೆ ಆ “ಮನುಷ್ಯನು ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಬಾರದು” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನನ್ನು ಕಳುಹಿಸಿಕೊಡದಿದ್ದರೆ ನಾವು ಹೋಗುವದಿಲ್ಲ. ಆ ಮನುಷ್ಯನು ನಮಗೆ - ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಲೇಕೂಡದೆಂದು ಹೇಳಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಬೆನ್ಯಾಮೀನನನ್ನು ಕಳುಹಿಸದಿದ್ದರೆ, ನಾವು ಹೋಗುವುದಿಲ್ಲ; ಆ ಮನುಷ್ಯನು ನಮಗೆ ಬೆನ್ಯಾಮೀನನಿಲ್ಲದೆ ಬರಕೂಡದೆಂದು ಎಚ್ಚರಿಕೆ ಕೊಟ್ಟಿದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನನ್ನು ಕಳುಹಿಸದೆ ಹೋದರೆ, ನಾವು ಹೋಗುವುದಿಲ್ಲ. ಏಕೆಂದರೆ ಆ ಮನುಷ್ಯನು, ‘ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ, ನನ್ನ ಮುಖವನ್ನು ನೋಡಬಾರದು,’ ಎಂದು ನಮಗೆ ಹೇಳಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:5
10 ತಿಳಿವುಗಳ ಹೋಲಿಕೆ  

ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಬಾಳುವೆ.


ನಾವು, ‘ಹೋಗಲಾಗದು, ತಮ್ಮನು ನಮ್ಮ ಜೊತೆಯಲ್ಲಿ ಇಲ್ಲವಾದರೆ ಆ ಮನುಷ್ಯನ ಮುಖವನ್ನು ನೋಡಲಾಗದು. ತಮ್ಮನು ನಮ್ಮ ಸಂಗಡ ಬಂದರೆ ಮತ್ತೆ ಹೋಗುತ್ತೇವೆ’ ಎಂದು ಹೇಳಿದೆವು.


ಯಕೋಬನು ಅವರಿಗೆ, “ನನ್ನ ಮಗ ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದ ಅವನು ಸತ್ತುಹೋದ, ಇವನೊಬ್ಬನೇ ಉಳಿದು ಇದ್ದಾನೆ, ದಾರಿಯಲ್ಲಿ ಇವನಿಗೇನಾದರೂ ಆಪತ್ತು ಸಂಭವಿಸಬಹುದು. ಆಗ, ನರೆಕೂದಲಿನ ಈ ಮುದುಕ ದುಃಖದಿಂದಲೆ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ,” ಎಂದು ಹೇಳಿದ.


ಆದರೆ ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು, ಕರೆದುಕೊಂಡು ಬಂದರೆ, ನಿಮ್ಮ ಮಾತು ಸತ್ಯವೆಂದು ತಿಳಿದುಕೊಳ್ಳುತ್ತೇನೆ, ಆಗ ನೀವು ಸಾಯದೆ ಉಳಿಯುವಿರಿ,” ಎಂದನು. ಅವರು ಹಾಗೆಯೇ ಮಾಡಲು ಒಪ್ಪಿಕೊಂಡರು.


ಅದಕ್ಕೆ ಯೆಹೂದನು ಹೀಗೆಂದನು: “ಆ ಮನುಷ್ಯ ನಮಗೆ, ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ದರ್ಶನಕ್ಕೆ ಬರಕೂಡದು’ ಎಂದು ಕಡುಖಂಡಿತವಾಗಿ ಹೇಳಿಬಿಟ್ಟಿದ್ದಾನೆ.


ನೀವು ನಮ್ಮ ತಮ್ಮನನ್ನು ಜೊತೆಯಲ್ಲಿ ಕಳಿಸಿದರೆ, ಹೋಗಿ ಧಾನ್ಯವನ್ನು ಕೊಂಡುಕೊಂಡು ಬರುತ್ತೇವೆ.


ಅದಕ್ಕೆ ಯಕೋಬನು, “ನಿಮಗೆ ಇನ್ನೊಬ್ಬ ತಮ್ಮನಿದ್ದಾನೆಂದು ಆ ಮನುಷ್ಯನಿಗೆ ಹೇಳಿ ನನ್ನನ್ನೇಕೆ ಈ ಸಂಕಟಕ್ಕೆ ಗುರಿಮಾಡಿದಿರಿ?” ಎಂದನು.


ಅದಕ್ಕೆ ತಾವು, 'ನಿಮ್ಮ ತಮ್ಮನು ಬಾರದಿದ್ದರೆ ನೀವು ಮತ್ತೊಮ್ಮೆ ನನ್ನ ಮುಖವನ್ನು ನೋಡಕೂಡದು,’ ಎಂದು ಆಜ್ಞೆಕೊಟ್ಟಿರಿ.


ಇದು ನಿಜವೋ ಸುಳ್ಳೋ ಎಂದು ಗೊತ್ತಾಗಬೇಕಾದರೆ ನೀವು ನಿಮ್ಮ ತಮ್ಮನನ್ನು ಬರಮಾಡಬೇಕು. ಅವನು ಬಂದ ಹೊರತು, ಫರೋಹನ ಜೀವದಾಣೆ, ನೀವು ಇಲ್ಲಿಂದ ಹೊರಟುಹೋಗಕೂಡದು.


ನಮ್ಮ ತಂದೆ, ‘ನೀವು ಇನ್ನೊಮ್ಮೆ ಹೋಗಿ ಧಾನ್ಯ ಕೊಂಡುಕೊಂಡು ಬನ್ನಿ’ ಎಂದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು