Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:6 - ಕನ್ನಡ ಸತ್ಯವೇದವು C.L. Bible (BSI)

6 ಅದಕ್ಕೆ ಯಕೋಬನು, “ನಿಮಗೆ ಇನ್ನೊಬ್ಬ ತಮ್ಮನಿದ್ದಾನೆಂದು ಆ ಮನುಷ್ಯನಿಗೆ ಹೇಳಿ ನನ್ನನ್ನೇಕೆ ಈ ಸಂಕಟಕ್ಕೆ ಗುರಿಮಾಡಿದಿರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದಕ್ಕೆ ಇಸ್ರಾಯೇಲನು, “ಇನ್ನೊಬ್ಬ ತಮ್ಮನಿದ್ದಾನೆಂದು ಆ ಮನುಷ್ಯನಿಗೆ ಹೇಳಿ, ನೀವು ಯಾಕೆ ನನಗೆ ಕೇಡು ಮಾಡಿದಿರಿ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದಕ್ಕೆ ಇಸ್ರಾಯೇಲನು - ಇನ್ನೊಬ್ಬ ತಮ್ಮನಿದ್ದಾನೆಂದು ಆ ಮನುಷ್ಯನಿಗೆ ಹೇಳಿ ನೀವು ಯಾಕೆ ನನಗೆ ಈ ಅಪಕಾರ ಮಾಡಿದಿರಿ ಎಂದು ಹೇಳಲು ಅವರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇಸ್ರೇಲನು, “ನಿಮಗೆ ಮತ್ತೊಬ್ಬ ಸಹೋದರನಿರುವುದಾಗಿ ನೀವು ಆ ಮನುಷ್ಯನಿಗೆ ಯಾಕೆ ಹೇಳಿದಿರಿ? ನೀವು ಅಂಥ ಕೆಟ್ಟದ್ದನ್ನು ಯಾಕೆ ಮಾಡಿದಿರಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇಸ್ರಾಯೇಲನು, “ನಿಮಗೆ ಇನ್ನೊಬ್ಬ ತಮ್ಮನು ಇದ್ದಾನೆಂದು ನೀವು ಏಕೆ ಆ ಮನುಷ್ಯನಿಗೆ ಹೇಳಿ ನನಗೆ ಕೇಡು ಮಾಡಿದ್ದೀರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:6
3 ತಿಳಿವುಗಳ ಹೋಲಿಕೆ  

ಕಳಿಸಿಕೊಡದಿದ್ದರೆ, ನಾವು ಹೋಗುವುದಿಲ್ಲ. ಆ ಮನುಷ್ಯ, ‘ನಿಮ್ಮ ತಮ್ಮ ನಿಮ್ಮ ಸಂಗಡ ಇಲ್ಲದಿದ್ದರೆ ಸಮ್ಮುಖಕ್ಕೆ ಬರಲೇ ಕೂಡದು’ ಎಂದಿದ್ದಾನೆ".


ಆಗ ಅವರು, ”ಆ ಮನುಷ್ಯ ನಿಮ್ಮ ವಿಷಯದಲ್ಲೂ ನಮ್ಮ ಮನೆಯವರ ವಿಷಯದಲ್ಲೂ ಸೂಕ್ಷ್ಮವಾಗಿ ವಿಚಾರಿಸಿದ; ನಿಮ್ಮ ತಂದೆ ಇನ್ನು ಜೀವದಿಂದ ಇದ್ದಾನೋ? ನಿಮಗೆ ತಮ್ಮನಿದ್ದಾನೋ? ಎಂದೆಲ್ಲ ಅವನೇ ಕೇಳಿದ. ಆ ಪ್ರಶ್ನೆಗಳಿಗೆ ನಾವು ತಕ್ಕ ಉತ್ತರ ಕೊಡಬೇಕಾಯಿತು. ಅಲ್ಲದೆ, ಅವನು ‘ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿ', ಎಂದು ಕೇಳುತ್ತಾನೆಂದು ತಿಳಿಯಲು ನಮಗೆ ಹೇಗೆ ಸಾಧ್ಯವಿತ್ತು?” ಎಂದರು.


ಮೋಶೆಗೆ ಅವರು, “ಈಜಿಪ್ಟಿನಲ್ಲಿ ಸಮಾಧಿಗಳಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿಯೆಂದು ನಮ್ಮನ್ನು ಇಲ್ಲಿಗೆ ಕರೆದುತಂದಿರೋ? ಈಜಿಪ್ಟಿನಿಂದ ಕರೆದುಕೊಂಡು ಬಂದು ನಮಗೆ ಹೀಗೆ ಮಾಡಿಬಿಟ್ಟಿದ್ದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು