Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:8 - ಕನ್ನಡ ಸತ್ಯವೇದವು C.L. Bible (BSI)

8 ಆಗ ಯೆಹೂದನು ತನ್ನ ತಂದೆ ಯಕೋಬನಿಗೆ, “ನೀವು, ನಾವು ಮತ್ತು ನಮ್ಮ ಮಕ್ಕಳು, ಎಲ್ಲರೂ ಸಾಯದೆ ಉಳಿಯಬೇಕಾದರೆ ಆ ಹುಡುಗನನ್ನು ನನ್ನ ಜೊತೆ ಕಳಿಸಿಕೊಡಿ, ನಾವು ಇದೀಗಲೆ ಹೊರಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ, “ಆ ಹುಡುಗನನ್ನು ನನ್ನ ಜೊತೆಯಲ್ಲಿ ಕಳುಹಿಸಿಕೊಡು, ನಾವು ಹೋಗುವೆವು. ಆಗ ನೀನೂ, ನಾವು ಮತ್ತು ನಮ್ಮ ಮಕ್ಕಳೂ ಸಾಯದೆ ಬದುಕುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ - ನೀನೂ ನಾವೂ ನಮ್ಮ ಮಕ್ಕಳೂ ಎಲ್ಲರೂ ಸಾಯದೆ ಬದುಕಿಕೊಳ್ಳುವಂತೆ ಆ ಹುಡುಗನನ್ನು ನನ್ನ ಜೊತೆಯಲ್ಲಿ ಕಳುಹಿಸಿಕೊಡಪ್ಪಾ; ನಾವು ಹೊರಟು ಹೋಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಮೇಲೆ ಯೆಹೂದನು ತನ್ನ ತಂದೆಯಾದ ಇಸ್ರೇಲನಿಗೆ, “ನನ್ನೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡು. ನಾನು ಅವನನ್ನು ನೋಡಿಕೊಳ್ಳುವೆನು. ನಾವು ಈಜಿಪ್ಟಿಗೆ ಹೋಗಿ ಆಹಾರವನ್ನು ತರಬೇಕು. ಇಲ್ಲವಾದರೆ ನಾವೂ ಸಾಯುವೆವು, ನಮ್ಮ ಮಕ್ಕಳೂ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೂದನು ತನ್ನ ತಂದೆ ಇಸ್ರಾಯೇಲನಿಗೆ, “ಆ ಹುಡುಗನನ್ನು ನನ್ನ ಸಂಗಡ ಕಳುಹಿಸು, ಆಗ ನಾವು ಹೋಗುವೆವು. ನಾವು, ನೀನೂ ಮತ್ತು ನಮ್ಮ ಮಕ್ಕಳು ಸಾಯದೆ ಬದುಕುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:8
14 ತಿಳಿವುಗಳ ಹೋಲಿಕೆ  

ಈಜಿಪ್ಟಿನಲ್ಲಿ ದವಸಧಾನ್ಯ ಉಂಟೆಂದು ನಾನು ಕೇಳಿದ್ದೇನೆ, ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ, ಬೇಕಾದ ದವಸವನ್ನು ಕೊಂಡುಕೊಂಡು ಬನ್ನಿ,” ಎಂದು ಹೇಳಿದನು.


ರೂಬೇನ್ ಕುಲ ಕುರಿತು ಮೋಶೆ ನುಡಿದದ್ದು: “ರೂಬೇನ್ ಅಳಿಯದೆ ಉಳಿಯಲಿ ಅವನ ಮಕ್ಕಳು ಅಸಂಖ್ಯಾತರಾಗದಿರಲಿ.”


ಸಾಯೆನು, ಜೀವದಿಂದಿರುವೆನು ನಾನು I ಪ್ರಭುವಿನ ಕಾರ್ಯಗಳನು ಸಾರುವೆನು II


ಆಮೇಲೆ ಆ ಅಹವಾ ನದಿಯ ಬಳಿಯಲ್ಲಿ, ನಾವು ಉಪವಾಸದಿಂದಿದ್ದು ನಮ್ಮ ದೇವರ ಮುಂದೆ ನಮ್ಮನ್ನೇ ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಕೋರಬೇಕೆಂದು ಪ್ರಕಟಿಸಿದೆ.


ಆಗ ಅವರಲ್ಲೊಬ್ಬನು ಅರಸನಿಗೆ, “ರಾಹುತರು ಪಟ್ಟಣದಲ್ಲುಳಿದಿರುವ ಕುದುರೆಗಳಲ್ಲಿ ನಾಲ್ಕೈದು ಕುದುರೆಗಳನ್ನು ತೆಗೆದುಕೊಂಡು ನೋಡುವುದಕ್ಕೆ ಹೋಗಲಿ; ಅವರಿಗೆ ಪಟ್ಟಣದಲ್ಲಿ ಉಳಿದಿರುವ ಇಸ್ರಯೇಲರ ಗತಿಯಾಗಲಿ ಅಥವಾ ಸತ್ತುಹೋದವರ ಗತಿಯಾಗಲಿ ಸಂಬವಿಸುವದಷ್ಟೆ,” ಎಂದು ಹೇಳಿದನು.


ಪಟ್ಟಣದೊಳಗೆ ಕ್ಷಾಮ ಇರುವುದರಿಂದ ಅಲ್ಲಿಗೆ ಹೋದರೂ ಸಾಯಬೇಕು. ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಸಿರಿಯಾದವರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ,” ಎಂದು ಮಾತಾಡಿಕೊಂಡರು.


ಆದರೆ ನಿಮ್ಮ ಮಕ್ಕಳನ್ನು, ಪರರ ಪಾಲಾಗುವರು ಎಂದು ಹೇಳಿದ ನಿಮ್ಮ ಚಿಕ್ಕಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದ ನಾಡನ್ನು ಅವರು ಅನುಭವಿಸುವರು.


ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಬಾಳುವೆ.


ಆದುದರಿಂದ ನೀವು ಸ್ವಲ್ಪವೂ ಸಂಕೋಚಪಡಬೇಕಾಗಿಲ್ಲ. ನಾನು ನಿಮ್ಮನ್ನೂ ನಿಮಗೆ ಸೇರಿದ ಎಲ್ಲರನ್ನೂ ಪೋಷಿಸುತ್ತೇನೆ,” ಎಂದು ಹೇಳಿ ಅವರನ್ನು ಸಂತೈಸಿ, ಅವರ ಸಂಗಡ ಪ್ರೀತಿಯಿಂದ ಮಾತಾಡಿದನು.


ಜೋಸೆಫನ ಮನೆಯವರೆಲ್ಲರು, ಅಣ್ಣತಮ್ಮಂದಿರು, ತಂದೆಯ ಮನೆಯವರೆಲ್ಲರು ಹೋದರು. ತಮ್ಮ ಮಡದಿಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್ ಪ್ರಾಂತ್ಯದಲ್ಲಿ ಬಿಟ್ಟುಹೋದರು.


ನಿನ್ನ ಸಹೋದರರಿಗೆ ಈ ಆಜ್ಞೆಯನ್ನೂ ತಿಳಿಸು: ‘ನೀವು ನಿಮ್ಮ ಮಡದಿ ಮಕ್ಕಳನ್ನು ಕರೆದುತರಲು ಈಜಿಪ್ಟ್ ದೇಶದ ಬಂಡಿಗಳನ್ನು ತೆಗೆದುಕೊಂಡುಹೋಗಿರಿ: ನಿಮ್ಮ ತಂದೆಯನ್ನು ತಂದು ಸೇರಿಸಿರಿ.


ನಾವು, ‘ಹೋಗಲಾಗದು, ತಮ್ಮನು ನಮ್ಮ ಜೊತೆಯಲ್ಲಿ ಇಲ್ಲವಾದರೆ ಆ ಮನುಷ್ಯನ ಮುಖವನ್ನು ನೋಡಲಾಗದು. ತಮ್ಮನು ನಮ್ಮ ಸಂಗಡ ಬಂದರೆ ಮತ್ತೆ ಹೋಗುತ್ತೇವೆ’ ಎಂದು ಹೇಳಿದೆವು.


ಯಕೋಬನು ಅವರಿಗೆ, “ನನ್ನ ಮಗ ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದ ಅವನು ಸತ್ತುಹೋದ, ಇವನೊಬ್ಬನೇ ಉಳಿದು ಇದ್ದಾನೆ, ದಾರಿಯಲ್ಲಿ ಇವನಿಗೇನಾದರೂ ಆಪತ್ತು ಸಂಭವಿಸಬಹುದು. ಆಗ, ನರೆಕೂದಲಿನ ಈ ಮುದುಕ ದುಃಖದಿಂದಲೆ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ,” ಎಂದು ಹೇಳಿದ.


ನಾವು ‘ತಂದೆ ಇದ್ದಾರೆ, ಅವರು ಮುದುಕ; ಮುಪ್ಪಿನಲ್ಲಿ ಅವರಿಗೆ ಹುಟ್ಟಿದ ಒಬ್ಬ ಚಿಕ್ಕ ಹುಡುಗ ಇದ್ದಾನೆ. ಅವನ ಒಡಹುಟ್ಟಿದವನು ಸತ್ತುಹೋದ. ಅವನ ತಾಯಿಯ ಹೊಟ್ಟೆಯಲ್ಲಿ ಹುಟ್ಟಿದವರಲ್ಲಿ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಅಪಾರ ಪ್ರೀತಿ,’ ಎಂದು ಹೇಳಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು