ಆದಿಕಾಂಡ 43:9 - ಕನ್ನಡ ಸತ್ಯವೇದವು C.L. Bible (BSI)9 ಅವನಿಗೆ ನಾನೇ ಹೊಣೆ; ಅವನ ವಿಷಯ ನನಗೆ ಬಿಡಿ. ನಾನು ಅವನನ್ನು ಮತ್ತೆ ಕರೆದುಕೊಂಡು ಬಂದು ನಿಮ್ಮ ಎದುರಿನಲ್ಲಿ ನಿಲ್ಲಿಸದೆಹೋದರೆ ಆ ದೋಷ ಸದಾಕಾಲ ನನ್ನ ಮೇಲೆ ಇರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ಅವನ ವಿಷಯ ನನ್ನನ್ನೇ ಕೇಳಬಹುದು. ನಾನು ಅವನನ್ನು ತಿರುಗಿ ಕರೆದುಕೊಂಡು ಬಂದು ನಿನ್ನೆದುರಿನಲ್ಲಿ ನಿಲ್ಲಿಸದೆ ಹೋದರೆ ಆ ಅಪರಾಧ ಎಂದೆಂದಿಗೂ ನನ್ನ ಮೇಲೆ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾನೇ ಅವನಿಗೆ ಹೊಣೆ; ಅವನ ವಿಷಯ ನನ್ನನ್ನೇ ಕೇಳಬಹುದು. ನಾನು ಅವನನ್ನು ತಿರಿಗಿ ಕರಕೊಂಡು ಬಂದು ನಿನ್ನೆದುರಿನಲ್ಲಿ ನಿಲ್ಲಿಸದೆ ಹೋದರೆ ಆ ದೋಷ ಎಂದೆಂದಿಗೂ ನನ್ನ ಮೇಲೆ ಇರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವನು ಸುರಕ್ಷಿತವಾಗಿರುವಂತೆ ನಾನು ನೋಡಿಕೊಳ್ಳುವೆನು. ನಾನು ಅವನಿಗೆ ಜವಾಬ್ದಾರನಾಗಿರುತ್ತೇನೆ. ನಾನು ಅವನನ್ನು ನಿನ್ನ ಬಳಿಗೆ ಮತ್ತೆ ಕರೆದುಕೊಂಡು ಬರದಿದ್ದರೆ, ನೀನು ಸದಾಕಾಲ ನನ್ನನ್ನು ದೂಷಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ, ಎಂದೆಂದಿಗೂ ನಾನು ಅಪರಾಧವನ್ನು ಹೊರುವೆನು. ಅಧ್ಯಾಯವನ್ನು ನೋಡಿ |