Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:17 - ಕನ್ನಡ ಸತ್ಯವೇದವು C.L. Bible (BSI)

17 ಜೋಸೆಫನು, “ಹಾಗೆ ಎಂದಿಗೂ ಆಗಬಾರದು; ಆ ಪಾತ್ರೆ ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರ ನನಗೆ ಗುಲಾಮನಾಗಬೇಕು; ನೀವಾದರೋ ಅಡ್ಡಿಯಿಲ್ಲದೆ ನಿಮ್ಮ ತಂದೆಯ ಬಳಿಗೆ ಹೋಗಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಿರಲಿ. ನೀವಾದರೋ ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹಾಗೆ ಎಂದಿಗೂ ಆಗಬಾರದು; ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಬೇಕು; ನೀವಾದರೋ ಅಡ್ಡಿಯಿಲ್ಲದೆ ನಿಮ್ಮ ತಂದೆಯ ಬಳಿಗೆ ಹೋಗಬಹುದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಯೋಸೇಫನು, “ನಾನು ನಿಮ್ಮೆಲ್ಲರನ್ನು ಗುಲಾಮರನ್ನಾಗಿ ಮಾಡುವುದಿಲ್ಲ; ಬಟ್ಟಲನ್ನು ಕದ್ದುಕೊಂಡವನು ಮಾತ್ರ ನನ್ನ ಗುಲಾಮನಾಗಿರಬೇಕು; ಉಳಿದ ನೀವೆಲ್ಲರೂ ನಿಮ್ಮ ತಂದೆಯ ಬಳಿಗೆ ಸಮಾಧಾನದಿಂದ ಹೋಗಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ, ಅವನು ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:17
10 ತಿಳಿವುಗಳ ಹೋಲಿಕೆ  

ದುರ್ಜನರನ್ನು ಸಜ್ಜನರೆಂದೂ, ಸಜ್ಜನರನ್ನು ದುರ್ಜನರೆಂದೂ ನಿರ್ಣಯಿಸುವ ಇಬ್ಬರೂ ಸರ್ವೇಶ್ವರನಿಗೆ ಅಸಹ್ಯರು.


ಈ ಪರಿ ನುಡಿದಿರುವನಾ ದೇವನು : I “ಕ್ಲುಪ್ತಕಾಲದಲಿ ನಾ ನೀಡುವೆನು I ತೀರ್ಪನು, ನ್ಯಾಯವಾದ ತೀರ್ಪನು II


ಇಸ್ರಯೇಲರ ದೇವನು, ಅವರಾಶಕ್ತನು, ಹೀಗೆಂದು ನನಗೆ ನುಡಿದನು


ಮೂರನೆಯ ದಿನ ಜೋಸೆಫನು ಅವರನ್ನು ಕರೆಸಿ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು; ನಿಮಗೆ ಜೀವದ ಮೇಲೆ ಆಶೆ ಇದ್ದರೆ ನಾನು ಹೇಳಿದಂತೆ ಮಾಡಿ;


ನಾವು ನಿನಗೆ ಯಾವ ಕೇಡನ್ನು ಮಾಡದೆ ಒಳ್ಳೆಯದನ್ನೇ ಮಾಡಿ ಸಮಾಧಾನದಿಂದ ಕಳುಹಿಸಿಕೊಟ್ಟಿಲ್ಲವೆ? ಅದರಂತೆಯೆ ಸರ್ವೇಶ್ವರ ಸ್ವಾಮಿಯಿಂದ ಆಶೀರ್ವಾದ ಪಡೆದ ನೀನು ನಮಗೆ ಕೇಡುಮಾಡುವುದಿಲ್ಲವೆಂದು ಪ್ರಮಾಣ ಮಾಡಬೇಕು,” ಎಂದು ಹೇಳಿದರು.


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಅದಕ್ಕೆ ಯೆಹೂದನು, “ನಮ್ಮೊಡೆಯರಿಗೆ ನಾವು ಏನು ಹೇಳೋಣ? ಯಾವ ಉತ್ತರ ಕೊಡೋಣ? ನಾವು ನಿರ್ದೋಷಿಗಳೆಂದು ತೋರಿಸಲು, ಏನುತಾನೆ ಮಾಡುವುದು? ನಿಮ್ಮ ಸೇವಕರಾದ ನಮ್ಮ ಪಾಪಕೃತ್ಯವನ್ನು ದೇವರೇ ಹೊರಪಡಿಸಿದ್ದಾರೆ. ಆ ಪಾತ್ರೆ ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲ, ನಾವೆಲ್ಲರೂ ನಮ್ಮೊಡೆಯರಿಗೆ ಗುಲಾಮರಾದೆವಲ್ಲವೆ?" ಎಂದನು.


ಆಗ ಯೆಹೂದನು ಹತ್ತಿರಕ್ಕೆ ಬಂದು, “ನನ್ನೊಡೆಯಾ, ತಮ್ಮ ಸೇವಕನಾದ ನಾನು ಒಂದು ಮಾತನ್ನು ಅರಿಕೆಮಾಡಿಕೊಳ್ಳುತ್ತೇನೆ; ನನ್ನ ಮೇಲೆ ಸಿಟ್ಟುಮಾಡಬೇಡಿ; ತಾವು ಫರೋಹನಿಗೆ ಸಮಾನರು.


ಅದಕ್ಕೆ ಆ ಗೃಹನಿರ್ವಾಹಕ, “ಸರಿ, ನೀವು ಹೇಳಿದಂತೆಯೇ ಆಗಲಿ; ಆ ಪಾತ್ರೆ ಯಾವನ ಬಳಿ ಸಿಕ್ಕುತ್ತದೋ ಅವನು ನನಗೆ ಊಳಿಗದವನಾಗಬೇಕು; ಉಳಿದವರು ತಪ್ಪಿಲ್ಲದವರು,’ ಎಂದು ಹೇಳಿದ್ದೇ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು