ಆದಿಕಾಂಡ 44:22 - ಕನ್ನಡ ಸತ್ಯವೇದವು C.L. Bible (BSI)22 ನಾವು, ‘ಆ ಹುಡುಗನು ತಂದೆಯನ್ನು ಬಿಟ್ಟು ಅಗಲುವುದಕ್ಕಾಗುವುದಿಲ್ಲ; ಅಗಲಿದರೆ ತಂದೆ ಸತ್ತುಹೋದಾರು,’ ಎಂದು ಒಡೆಯರಾದ ತಮಗೆ ತಿಳಿಸಿದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಾವು ಸ್ವಾಮಿಯವರಿಗೆ, ‘ಆ ಹುಡುಗನು ತನ್ನ ತಂದೆಯನ್ನು ಬಿಟ್ಟು ಬರುವುದಿಲ್ಲ. ಅವನು ತಂದೆಯನ್ನು ಅಗಲಿದರೆ ತಂದೆಯು ಸಾಯುವನು’ ಎಂದು ಹೇಳಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನಾವು ಸ್ವಾವಿುಯವರಿಗೆ - ಆ ಹುಡುಗನು ತನ್ನ ತಂದೆಯನ್ನು ಅಗಲುವದಕ್ಕಾಗುವದಿಲ್ಲ; ಅಗಲಿದರೆ ತಂದೆ ಸತ್ತಾನು ಅಂದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಾವು ನಿಮಗೆ ‘ಆ ಯುವಕನು ಬರಲಾರನು. ಅವನು ತನ್ನ ತಂದೆಯನ್ನು ಬಿಟ್ಟುಬರಲಾಗದು. ಅವನ ತಂದೆ ಅವನನ್ನು ಕಳೆದುಕೊಂಡರೆ ತುಂಬ ದುಃಖದಿಂದ ಸತ್ತುಹೋಗುವನು’ ಎಂದು ಹೇಳಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನಾವು ನಮ್ಮ ಒಡೆಯನಿಗೆ, ‘ಆ ಹುಡುಗನು ನಮ್ಮ ತಂದೆಯನ್ನು ಬಿಡಕೂಡದು. ಅವನು ತಂದೆಯನ್ನು ಬಿಟ್ಟರೆ, ಅವನು ಸಾಯುವನು,’ ಎಂದು ಹೇಳಿದೆವು. ಅಧ್ಯಾಯವನ್ನು ನೋಡಿ |