Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:10 - ಕನ್ನಡ ಸತ್ಯವೇದವು C.L. Bible (BSI)

10 ಗೋಷೆನ್ ಪ್ರಾಂತ್ಯದಲ್ಲಿ ನನ್ನ ಬಳಿಯಲ್ಲೇ ನೀವೂ ನಿಮ್ಮ ಮಕ್ಕಳೂ ಮೊಮ್ಮಕ್ಕಳೂ ದನ, ಕುರಿ ಮೊದಲಾದ ಆಸ್ತಿಪಾಸ್ತಿಗಳ ಸಮೇತ ವಾಸಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು. ನೀನೂ, ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ಕುರಿದನಗಳೂ ಮೊದಲಾದ ಎಲ್ಲವೂ ನನ್ನ ಬಳಿಯಲ್ಲೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು; ನೀನೂ ನಿನ್ನ ಮಕ್ಕಳೂ ಮೊಮ್ಮಕ್ಕಳೂ ಕುರಿ ದನ ಮೊದಲಾದ ಸ್ವಾಸ್ತ್ಯಸಹಿತರಾಗಿ ನನ್ನ ಬಳಿಯಲ್ಲೇ ಇರಬಹುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀನು ಗೋಷೆನ್ ಪ್ರಾಂತ್ಯದಲ್ಲಿ ನನ್ನೊಂದಿಗೆ ವಾಸಿಸುವೆ. ನೀನೂ ನಿನ್ನ ಮಕ್ಕಳೂ ನಿನ್ನ ಮೊಮ್ಮಕ್ಕಳೂ ನಿಮ್ಮ ಎಲ್ಲಾ ಪಶುಗಳೊಡನೆ ಇಲ್ಲಿ ನೆಲೆಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಗೋಷೆನ್ ಪ್ರದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ದನಕುರಿಗಳೂ, ನಿನಗಿದ್ದದ್ದೆಲ್ಲವೂ ನನ್ನ ಸಮೀಪದಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:10
12 ತಿಳಿವುಗಳ ಹೋಲಿಕೆ  

ಇಸ್ರಯೇಲರು ವಾಸವಾಗಿದ್ದ ಗೋಷೆನ್ ಪ್ರಾಂತ್ಯದಲ್ಲಿ ಮಾತ್ರ ಆ ಮಳೆ ಬೀಳಲಿಲ್ಲ.


ಆ ದಿನದಲ್ಲಿ ನನ್ನ ಜನರು ವಾಸವಾಗಿರುವ ಗೋಷೆನ್ ಪ್ರಾಂತ್ಯಕ್ಕೆ ಈ ಪಿಡುಗು ತಗಲದಂತೆ ಮಾಡುವೆನು. ಅಲ್ಲಿ ಈ ಕಾಟ ಇರುವುದಿಲ್ಲ. ಇದರಿಂದ ಭೂಲೋಕವನ್ನಾಳುವ ಸರ್ವೇಶ್ವರನು ನಾನೇ ಎಂದು ನೀನು ಅರಿತುಕೊಳ್ಳಬೇಕು.


'ಚಿಕ್ಕಂದಿನಿಂದ ಇಂದಿನವರೆಗೂ ನಿಮ್ಮ ಸೇವಕರಾದ ನಾವು, ನಮ್ಮ ಪೂರ್ವಜರ ಪದ್ಧತಿಯಂತೆ ಮಂದೆ ಮೇಯಿಸುವವರು,’ ಎಂದು ಹೇಳಿರಿ. ಆಗ ಗೋಷೆನ್ ಪ್ರಾಂತ್ಯವನ್ನು ನಿಮ್ಮ ನಿವಾಸಕ್ಕೆ ನೇಮಿಸುವನು - ಏಕೆಂದರೆ ಕುರಿ ಕಾಯುವವರೆಂದರೆ ಈಜಿಪ್ಟಿಯರಿಗೆ ಹಿಡಿಸದು,” ಎಂದು ಹೇಳಿದನು.


ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.


ಅನಂತರ ತನ್ನ ತಂದೆ ಯಕೋಬನೂ ಅವನ ಬಂಧುಬಳಗದವರೂ ಈಜಿಪ್ಟಿಗೆ ಬರುವಂತೆ ಜೋಸೆಫನು ಹೇಳಿಕಳುಹಿಸಿದನು.


ಜೋಸೆಫನು ಫರೋಹನ ಬಳಿಗೆ ಬಂದು, “ನನ್ನ ತಂದೆಯೂ ಸಹೋದರರೂ ದನಕುರಿಗಳನ್ನು ಹಾಗೂ ಎಲ್ಲ ಆಸ್ತಿಪಾಸ್ತಿಯನ್ನು ತೆಗೆದುಕೊಂಡು ಕಾನಾನ್ ನಾಡಿನಿಂದ ಗೋಷೆನ್ ಪ್ರಾಂತ್ಯಕ್ಕೆ ಬಂದಿದ್ದಾರೆ,” ಎಂದು ತಿಳಿಸಿದನು.


ಈಜಿಪ್ಟ್ ದೇಶವು ನಿನ್ನ ಮುಂದಿದೆ; ಅದರಲ್ಲಿನ ಉತ್ತಮ ಭಾಗವನ್ನು ನಿನ್ನ ತಂದೆಗೂ ಸಹೋದರರಿಗೂ ವಾಸಸ್ಥಾನವಾಗಿ ನೇಮಿಸು; ಗೋಷೆನ್ ಪ್ರಾಂತ್ಯದಲ್ಲಿ ಬೇಕಾದರೆ ವಾಸಮಾಡಲಿ; ಅವರಲ್ಲಿ ನುರಿತವರು ಯಾರಾದರು ಇದ್ದರೆ ಅವರನ್ನು ನನ್ನ ದನಕರುಗಳ ಮೇಲ್ವಿಚಾರಣೆಗೆ ನೇಮಿಸು,” ಎಂದನು.


ಕಾನಾನ್ ನಾಡಿನಲ್ಲಿ ಬರವು ಘೋರವಾದ್ದರಿಂದ ನಿಮ್ಮ ಸೇವಕರ ದನಕುರಿಗಳಿಗೆ ಮೇವು ಸಿಕ್ಕಲಿಲ್ಲ. ಆದ್ದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ಸೇವಕರು ಗೋಷೆನ್ ಪ್ರಾಂತ್ಯದಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದರು.


ತಂದೆಗೂ ಸಹೋದರರಿಗೂ ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರಕೊಟ್ಟು ಅವರನ್ನು ಸಂರಕ್ಷಿಸಿದನು.


ಯೆಹೂದ್ಯನಾದ ಮೊರ್ದೆಕೈಯಾದರೋ ಅರಸ ಅಹಷ್ವೇರೋಷನಿಗೆ ದ್ವಿತೀಯಸ್ಥಾನದವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಬಂಧುಬಳಗದವರಲ್ಲಿ ಪ್ರೀತಿಪಾತ್ರನೂ ಸ್ವಜನರ ಹಿತಚಿಂತಕನೂ ಸ್ವಕುಲದವರೆಲ್ಲರಿಗೆ ಶಾಂತಿದೂತನೂ ಆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು