Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:11 - ಕನ್ನಡ ಸತ್ಯವೇದವು C.L. Bible (BSI)

11 ಬರಗಾಲ ತೀರುವುದಕ್ಕೆ ಇನ್ನೂ ಐದು ವರ್ಷ ಕಳೆಯಬೇಕಾಗಿದೆ. ಆದುದರಿಂದ ನಿಮಗೂ ನಿಮ್ಮ ಕುಟುಂಬಕ್ಕೂ ನಿಮಗಿರುವ ಸಮಸ್ತಕ್ಕೂ ಬಡತನ ತಟ್ಟದಂತೆ ನಾನು ನಿಮ್ಮನ್ನು ಪೋಷಿಸುತ್ತೇನೆ’, ಎಂದು ಹೇಳಿರುವುದಾಗಿ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈ ಬರಗಾಲ ಮುಗಿಯುವುದಕ್ಕೆ ಇನ್ನೂ ಐದು ವರ್ಷ ಹೋಗಬೇಕು. ಆದ್ದರಿಂದ ನಿನಗೂ, ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು’ ಹೇಳುತ್ತಾನೆ ಎಂಬುದಾಗಿ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಈ ಬರಗಾಲ ತೀರುವದಕ್ಕೆ ಇನ್ನೂ ಐದು ವರುಷ ಹೋಗಬೇಕು; ಆದದರಿಂದ ನಿನಗೂ ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು ಹೇಳುತ್ತಾನೆಂಬದಾಗಿ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮುಂದಿನ ಐದು ವರ್ಷಗಳ ಬರಗಾಲದಲ್ಲಿ ನಾನು ನಿಮ್ಮನ್ನು ಪೋಷಿಸುವೆನು. ಆಗ ನಿನಗಾಗಲಿ ನಿನ್ನ ಕುಟುಂಬದವರಿಗಾಗಲಿ ಬಡತನವಿರುವುದಿಲ್ಲ’ ಎಂಬುದಾಗಿ ತಿಳಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅಲ್ಲಿ ನಿನ್ನನ್ನು ಪೋಷಿಸುವೆನು. ಏಕೆಂದರೆ ಇನ್ನೂ ಕ್ಷಾಮದ ಐದು ವರ್ಷಗಳಿವೆ. ನಿನಗೂ, ನಿನ್ನ ಮನೆಗೂ, ನಿನಗಿರುವುದೆಲ್ಲದಕ್ಕೂ ಬಡತನವಾಗಬಾರದು’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:11
8 ತಿಳಿವುಗಳ ಹೋಲಿಕೆ  

ತಂದೆಗೂ ಸಹೋದರರಿಗೂ ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರಕೊಟ್ಟು ಅವರನ್ನು ಸಂರಕ್ಷಿಸಿದನು.


ಈಜಿಪ್ಟ್ ದೇಶವು ನಿನ್ನ ಮುಂದಿದೆ; ಅದರಲ್ಲಿನ ಉತ್ತಮ ಭಾಗವನ್ನು ನಿನ್ನ ತಂದೆಗೂ ಸಹೋದರರಿಗೂ ವಾಸಸ್ಥಾನವಾಗಿ ನೇಮಿಸು; ಗೋಷೆನ್ ಪ್ರಾಂತ್ಯದಲ್ಲಿ ಬೇಕಾದರೆ ವಾಸಮಾಡಲಿ; ಅವರಲ್ಲಿ ನುರಿತವರು ಯಾರಾದರು ಇದ್ದರೆ ಅವರನ್ನು ನನ್ನ ದನಕರುಗಳ ಮೇಲ್ವಿಚಾರಣೆಗೆ ನೇಮಿಸು,” ಎಂದನು.


ವಿಧವೆಯಾದವಳಿಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ, ಆ ಮಕ್ಕಳು ಮೊತ್ತಮೊದಲು ತಮ್ಮ ಸ್ವಂತ ಕುಟುಂಬಕ್ಕೆ ಸಹಾಯಮಾಡಬೇಕಾದುದು ಅವರ ಧಾರ್ಮಿಕ ಕರ್ತವ್ಯವೆಂಬುದು ಅವರಿಗೆ ತಿಳಿದಿರಲಿ. ಹೀಗೆ ಅವರು ತಮ್ಮ ತಂದೆತಾಯಿಯರಿಗೆ ಪ್ರತ್ಯುಪಕಾರಮಾಡಿದಂತಾಗುತ್ತದೆ. ಅಲ್ಲದೆ, ಇದು ದೇವರ ದೃಷ್ಟಿಯಲ್ಲಿ ಮೆಚ್ಚುಗೆ ಪಡೆದುದು.


“ನಾನೇ ಖುದ್ದಾಗಿ ನಿಮ್ಮ ಸಂಗಡ ಮಾತಾಡಿದ್ದೇನೆ; ಅದಕ್ಕೆ ನೀವೂ ಸಾಕ್ಷಿ: ನನ್ನ ಒಡಹುಟ್ಟಿದ ಬೆನ್ಯಾಮೀನನೂ ಸಾಕ್ಷಿ:


ಆದುದರಿಂದ ನೀವು ಸ್ವಲ್ಪವೂ ಸಂಕೋಚಪಡಬೇಕಾಗಿಲ್ಲ. ನಾನು ನಿಮ್ಮನ್ನೂ ನಿಮಗೆ ಸೇರಿದ ಎಲ್ಲರನ್ನೂ ಪೋಷಿಸುತ್ತೇನೆ,” ಎಂದು ಹೇಳಿ ಅವರನ್ನು ಸಂತೈಸಿ, ಅವರ ಸಂಗಡ ಪ್ರೀತಿಯಿಂದ ಮಾತಾಡಿದನು.


ಯೆಹೂದ್ಯನಾದ ಮೊರ್ದೆಕೈಯಾದರೋ ಅರಸ ಅಹಷ್ವೇರೋಷನಿಗೆ ದ್ವಿತೀಯಸ್ಥಾನದವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಬಂಧುಬಳಗದವರಲ್ಲಿ ಪ್ರೀತಿಪಾತ್ರನೂ ಸ್ವಜನರ ಹಿತಚಿಂತಕನೂ ಸ್ವಕುಲದವರೆಲ್ಲರಿಗೆ ಶಾಂತಿದೂತನೂ ಆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು