Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:16 - ಕನ್ನಡ ಸತ್ಯವೇದವು C.L. Bible (BSI)

16 ಜೋಸೆಫನ ಅಣ್ಣತಮ್ಮಂದಿರು ಬಂದಿರುವ ಸಮಾಚಾರ ಫರೋಹನ ಅರಮನೆಗೆ ತಲುಪಿತು. ಫರೋಹನೂ ಅವನ ಪರಿವಾರದವರೂ ಅದನ್ನು ಕೇಳಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೋಸೇಫನ ಅಣ್ಣತಮ್ಮಂದಿರು ಬಂದ ಸಮಾಚಾರವು ಫರೋಹನ ಮನೆಯವರಿಗೆ ತಿಳಿದಾಗ ಫರೋಹನಿಗೂ ಅವನ ಪರಿವಾರದವರಿಗೂ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೋಸೇಫನ ಅಣ್ಣತಮ್ಮಂದಿರು ಬಂದ ಸಮಾಚಾರವು ಫರೋಹನ ಮನೆಯವರಿಗೆ ತಿಳಿದಾಗ ಫರೋಹನಿಗೂ ಅವನ ಪರಿವಾರದವರಿಗೂ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೋಸೇಫನ ಸಹೋದರರು ಅವನ ಬಳಿಗೆ ಬಂದಿರುವುದು ತಿಳಿದಾಗ ಫರೋಹನಿಗೂ ಅವನ ಮನೆಯವರಿಗೂ ತುಂಬ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ, ಅವನ ಸೇವಕರಿಗೂ ಅದು ಮೆಚ್ಚಿಗೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:16
15 ತಿಳಿವುಗಳ ಹೋಲಿಕೆ  

ಎರಡನೆಯ ಬಾರಿ ಅವರು ಬಂದಾಗ ಜೋಸೆಫನು ತನ್ನ ಗುರುತನ್ನು ಸಹೋದರರಿಗೆ ತಿಳಿಸಿದನು. ಆಗ ಫರೋಹನಿಗೆ ಜೋಸೆಫನ ವಂಶದ ಪರಿಚಯವಾಯಿತು.


ಪ್ರೇಷಿತರ ಈ ಸಲಹೆಯನ್ನು ಇಡೀ ಸಭೆ ಅನುಮೋದಿಸಿತು. ಅಂತೆಯೇ ಅಗಾಧ ವಿಶ್ವಾಸ ಉಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೇಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬ ಏಳುಮಂದಿಯನ್ನು ಆರಿಸಿಕೊಂಡರು.


ಅದಕ್ಕೆ ಅವನ ಪತ್ನಿ ಜೆರೆಷಳೂ ಹಾಗೂ ಅವನ ಆಪ್ತರೂ ಅವನಿಗೆ, “ಅರಸನ ಅಪ್ಪಣೆಯನ್ನು ಪಡೆದು ಮೊರ್ದೆಕೈಯನ್ನು ಗಲ್ಲಿಗೇರಿಸುವ ಸಲುವಾಗಿ ಇಪ್ಪತ್ತೆರಡು ಮೀಟರ್ ಉದ್ದದ ಗಲ್ಲುಮರವೊಂದನ್ನು ಸಿದ್ಧಮಾಡಿಸಿರಿ. ಅನಂತರ ನೀವು ನೆಮ್ಮದಿಯಿಂದ ಅರಸನ ಜೊತೆ ಔತಣಕ್ಕೆ ಹೋಗಬಹುದು,” ಎಂದು ಸಲಹೆ ನೀಡಿದರು. ಅದು ಅವನಿಗೆ ಸಮರ್ಪಕವಾಗಿ ಕಂಡುಬರಲು ಹಾಮಾನನು ಅದರಂತೆಯೇ ಗಲ್ಲುಮರವನ್ನು ಸಿದ್ಧಮಾಡಿಸಿದನು.


ಯಾವ ಕನ್ಯೆಯು ಅರಸನಿಗೆ ಸುಪ್ರೀತಳಾಗಿ ಕಾಣುವಳೋ ಅವಳು ವಷ್ಟಿರಾಣಿಯ ಬದಲಾಗಿ ಪಟ್ಟದರಸಿಯಾಗಬೇಕು,” ಎಂದು ಹೇಳಿದರು. ಅವರ ಈ ಸಲಹೆ ಅರಸನಿಗೆ ಸೂಕ್ತವೆಂದು ತೋರಿಬರಲು ಅವನು ಅದೇ ಪ್ರಕಾರ ಮಾಡಿದನು.


ಮೆಮೂಕನು ನೀಡಿದ ಈ ಸಲಹೆ ಅರಸನಿಗೂ ಪದಾಧಿಕಾರಿಗಳಿಗೂ ಸರಿಕಂಡುಬಂತು. ಅರಸನು ಅದರಂತೆ ಮಾಡಿದನು.


ಈ ಅಭಿಪ್ರಾಯ ಅರಸನಿಗೂ ಸಾರ್ವಜನಿಕರಿಗೂ ಸರಿಕಂಡಿತು.


ಜನರು ಇದನ್ನು ಕಂಡು ಮೆಚ್ಚಿದರು; ಅರಸನು ಮಾಡಿದ್ದೆಲ್ಲವೂ ಅವರಿಗೆ ಒಪ್ಪಿಗೆಯಾಯಿತು.


ನೀವು ಹೋಗಬೇಕಾದ ದಾರಿಯನ್ನು ತೋರಿಸುವುದಕ್ಕೂ ಕಂಡು ಇಳಿಯಬೇಕಾದ ಸ್ಥಳಗಳನ್ನು ಗೊತ್ತುಮಾಡುವುದಕ್ಕೂ ಇರುಳಲ್ಲಿ ಬೆಂಕಿಯಲ್ಲೂ ಹಗಲಲ್ಲಿ ಮೇಘದಲ್ಲೂ ನಿಮ್ಮ ಮುಂದುಗಡೆ ಹೋದ ದೇವರನ್ನು ನೀವು ನಂಬಲಿಲ್ಲ.


“ಆದುದರಿಂದ ತಾವು ವಿವೇಕಿಯೂ ಬುದ್ಧಿವಂತನೂ ಆದ ಒಬ್ಬನನ್ನು ಆರಿಸಿಕೊಂಡು ಅವನನ್ನು ಈಜಿಪ್ಟ್ ದೇಶದ ಮೇಲೆ ಆಧಿಕಾರಿಯನ್ನಾಗಿ ನೇಮಿಸಬೇಕು.


ಅವರು ಹೇಳಿದ್ದು ಹಮೋರನಿಗೂ ಅವನ ಮಗ ಶೆಕೆಮನಿಗೂ ಉಚಿತವೆಂದೇ ತೋಚಿತು.


ಅದೂ ಅಲ್ಲದೆ, “ಇಗೋ, ನನ್ನ ನಾಡು ನಿನಗೆ ತೆರೆದಿದೆ; ಇಷ್ಟಬಂದ ಕಡೆ ಹೋಗಿ ವಾಸಮಾಡು,” ಎಂದನು.


ಅದಕ್ಕೆ ಅಬ್ರಾಮನು, “ನಿನ್ನ ದಾಸಿ ನಿನ್ನ ಕೈಯಲ್ಲೇ ಇದ್ದಾಳೆ. ನಿನಗಿಷ್ಟ ಬಂದಂತೆ ಮಾಡು,” ಎಂದುಬಿಟ್ಟನು. ಬಳಿಕ ಸಾರಯಳು ಕೊಡುತ್ತಿದ್ದ ಕಿರುಕುಳವನ್ನು ತಾಳಲಾರದೆ ಹಾಗರಳು ಓಡಿಹೋದಳು.


ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಕಣ್ಣೀರಿಟ್ಟನು. ತರುವಾಯ ಅವರು ಅವನ ಸಂಗಡ ಮಾತನಾಡತೊಡಗಿದರು.


ಫರೋಹನು ಜೋಸೆಫನನ್ನು ಕರೆಸಿ, “ನೀನು ನಿನ್ನ ಸಹೋದರರಿಗೆ ತಿಳಿಸಬೇಕಾದ ನನ್ನ ಆಜ್ಞೆ ಇದು: ‘ನೀವು ನಿಮ್ಮ ವಾಹಕಪಶುಗಳ ಮೇಲೆ ಸಾಮಾನುಗಳನ್ನು ಹೇರಿ ಕಾನಾನ್ ನಾಡಿಗೆ ಹೋಗಿ, ಅಲ್ಲಿಂದ


ಜೋಸೆಫನು ಸೂಚಿಸಿದ ಯೋಜನೆ ಫರೋಹನಿಗೂ ಅವನ ಪರಿವಾರದವರಿಗೂ ಒಳ್ಳೆಯದೆಂದು ತೋರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು