Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:2 - ಕನ್ನಡ ಸತ್ಯವೇದವು C.L. Bible (BSI)

2 ಅವನು ಗಟ್ಟಿಯಾಗಿ ಅತ್ತದ್ದು ಈಜಿಪ್ಟಿನವರಿಗೆ ಕೇಳಿಸಿತು; ಫರೋಹನ ಮನೆಯವರಿಗೂ ಆ ಸುದ್ದಿ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಗಟ್ಟಿಯಾಗಿ ಅತ್ತದ್ದರಿಂದ ಐಗುಪ್ತರಿಗೂ, ಫರೋಹನ ಮನೆಯವರಿಗೂ ಆ ಶಬ್ದವು ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಗಟ್ಟಿಯಾಗಿ ಅತ್ತದ್ದರಿಂದ ಐಗುಪ್ತ್ಯರಿಗೂ ಫರೋಹನ ಮನೆಯವರಿಗೂ ಆ ಶಬ್ದವು ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಮೇಲೆ ಯೋಸೇಫನು ಗಟ್ಟಿಯಾಗಿ ಅತ್ತನು. ಫರೋಹನ ಮನೆಯಲ್ಲಿದ್ದ ಈಜಿಪ್ಟಿನವರೆಲ್ಲ ಅದನ್ನು ಕೇಳಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಅವನು ತನ್ನ ಸ್ವರವೆತ್ತಿ ಅತ್ತಾಗ, ಹೊರಗಿದ್ದ ಈಜಿಪ್ಟಿನವರೂ, ಫರೋಹನ ಮನೆಯವರೂ ಕೇಳಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:2
10 ತಿಳಿವುಗಳ ಹೋಲಿಕೆ  

ಅನಂತರ ಅವರು ಅವನನ್ನು ತಬ್ಬಿಕೊಂಡು ಮುದ್ದಿಟ್ಟು ಬೀಳ್ಕೊಟ್ಟರು. ಅವರ ಕಣ್ಣಲ್ಲಾದರೋ ನೀರು ಧಾರಾಕಾರವಾಗಿ ಹರಿಯುತ್ತಿತ್ತು.


“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.


ಸರ್ವೇಶ್ವರ ನಿಮಗೂ ಹಾಗೆಯೇ ಒಳಿತನ್ನು ಮಾಡಲಿ. ನೀವಿಬ್ಬರೂ ಪುನಃ ಮದುವೆಯಾಗಿ ಸುಖವಾಗಿರುವಂತೆ ಅನುಗ್ರಹಿಸಲಿ!” ಎಂದು ಹರಸಿ ಅವರನ್ನು ಬೀಳ್ಕೊಡುತ್ತಾ ಮುದ್ದಿಟ್ಟಳು.


ಜನರೆಲ್ಲರು, ಈ ವರದಿಯನ್ನು ಕೇಳಿ ಗಟ್ಟಿಯಾಗಿ ಗೋಳಿಟ್ಟರು. ರಾತ್ರಿಯೆಲ್ಲಾ ಅಳುತ್ತಿದ್ದರು.


ಜೋಸೆಫನು ರಥವನ್ನೇರಿ ತನ್ನ ತಂದೆ ಯಕೋಬನನ್ನು ಭೇಟಿಯಾಗಲು ಗೋಷೆನಿಗೆ ಬಂದನು. ತಂದೆಯನ್ನು ಕಂಡೊಡನೆ ಅವರ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತು ಅತ್ತನು.


ಜೋಸೆಫನಿಗೆ ತಮ್ಮನನ್ನು ನೋಡಿದ ಮೇಲೆ ಕರುಳು ಕರಗಿತು. ಕಣ್ಣೀರನ್ನು ತಡೆಯಲಾಗದೆ ಒಳ ಅರಮನೆಗೆ ತ್ವರೆಯಾಗಿ ಹೋಗಿ ಅಲ್ಲಿ ಅತ್ತನು.


ಬಳಿಕ ಜೋಸೆಫನು ತನ್ನ ತಮ್ಮ ಬೆನ್ಯಾಮೀನನ ಕೊರಳನ್ನು ಅಪ್ಪಿಕೊಂಡು ಅತ್ತನು.


ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಕಣ್ಣೀರಿಟ್ಟನು. ತರುವಾಯ ಅವರು ಅವನ ಸಂಗಡ ಮಾತನಾಡತೊಡಗಿದರು.


ಜೋಸೆಫನಾದರೋ ಅವರ ಬಳಿಯಿಂದ ಮರೆಯಾಗಿ ಹೋಗಿ ಕಣ್ಣೀರು ಸುರಿಸಿದ. ತರುವಾಯ ಅವರ ಬಳಿಗೆ ಬಂದು, ಸಂಭಾಷಣೆ ಮುಂದುವರೆಸಿ, ಸಿಮೆಯೋನನನ್ನು ಆರಿಸಿ, ಅವರ ಕಣ್ಣೆದುರಿನಲ್ಲೇ ಅವನಿಗೆ ಬೇಡಿಹಾಕಿಸಿದ.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು