Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:21 - ಕನ್ನಡ ಸತ್ಯವೇದವು C.L. Bible (BSI)

21 ಯಕೋಬನ ಮಕ್ಕಳು ಅದೇ ಮೇರೆಗೆ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಜೋಸೆಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಸ್ರಾಯೇಲನ ಮಕ್ಕಳು ಅದೇ ರೀತಿಯಾಗಿ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ರಥಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇಸ್ರಾಯೇಲನ ಮಕ್ಕಳು ಅದೇ ಮೇರೆಗೆ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ರಥಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅಂತೆಯೇ ಇಸ್ರೇಲನ ಮಕ್ಕಳು ಮಾಡಿದರು. ಫರೋಹನು ಹೇಳಿದಂತೆಯೇ ಯೋಸೇಫನು ತನ್ನ ಸಹೋದರರಿಗೆ ಒಳ್ಳೆಯ ರಥಗಳನ್ನೂ ಪ್ರಯಾಣಕ್ಕೆ ಬೇಕಾಗುವಷ್ಟು ಆಹಾರವನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ, ಮಾರ್ಗಕ್ಕೋಸ್ಕರ ಆಹಾರವನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:21
12 ತಿಳಿವುಗಳ ಹೋಲಿಕೆ  

ನಿನ್ನ ಸಹೋದರರಿಗೆ ಈ ಆಜ್ಞೆಯನ್ನೂ ತಿಳಿಸು: ‘ನೀವು ನಿಮ್ಮ ಮಡದಿ ಮಕ್ಕಳನ್ನು ಕರೆದುತರಲು ಈಜಿಪ್ಟ್ ದೇಶದ ಬಂಡಿಗಳನ್ನು ತೆಗೆದುಕೊಂಡುಹೋಗಿರಿ: ನಿಮ್ಮ ತಂದೆಯನ್ನು ತಂದು ಸೇರಿಸಿರಿ.


ಅವರು ಆಯುಧ, ರಥ, ಸರಕುಗಾಡಿ, ಜನಾಂಗಗಳ ಸಮೂಹ, ಇವುಗಳೊಂದಿಗೆ ನಿನ್ನ ಮೇಲೆ ಬೀಳುವರು; ಗುರಾಣಿ, ಖೇಡ್ಯ, ಶಿರಸ್ತ್ರಾಣ, ಇವುಗಳನ್ನು ಧರಿಸಿ, ನಿನಗೆ ವಿರುದ್ಧ ಸುತ್ತುಮುತ್ತಲು ವ್ಯೂಹ ಕಟ್ಟುವರು. ನ್ಯಾಯತೀರಿಸುವ ಅಧಿಕಾರವನ್ನು ನಾನು ಅವರಿಗೆ ಕೊಡುವೆನು; ಅವರು ತಮ್ಮ ನ್ಯಾಯಾನುಸಾರ ತೀರ್ಪುನೀಡಿ ನಿನ್ನನ್ನು ದಂಡಿಸುವರು.


“ಸರ್ವೇಶ್ವರನು ನ್ಯಾಯಸ್ವರೂಪಿ, ನಾನಾದರೊ ಆತನ ಆಜ್ಞೆ ಮೀರಿದ ದ್ರೋಹಿ. ಜನಾಂಗಗಳೇ, ನೀವೆಲ್ಲರು ಕಿವಿಗೊಡಿ, ನನ್ನ ಸಂಕಟ ನೋಡಿ ! ನನ್ನ ಯುವಕ ಯುವತಿಯರು, ಇಗೋ, ಸೆರೆಹೋಗಿರುವರು ನೋಡಿ.


ದೇವರ ಮೇಲೆ ಇಟ್ಟ ಆಣೆಯ ನಿಮಿತ್ತ ಅರಸನ ಆಜ್ಞೆಯನ್ನು ಕೈಗೊಳ್ಳಬೇಕೆಂಬುದು ನನ್ನ ಬೋಧೆ.


ಈ ಪ್ರಕಾರ ಅರಸ ಯೋಷೀಯನ ಅಪ್ಪಣೆಯಂತೆ ಪಾಸ್ಕವನ್ನು ಆಚರಿಸುವುದಕ್ಕೂ ಸರ್ವೇಶ್ವರನ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವುದಕ್ಕೂ ಸರ್ವೇಶ್ವರನ ಸೇವೆಗೆ ಸಂಬಂಧವಾದುದೆಲ್ಲವೂ ಆ ದಿವಸವೇ ಸಿದ್ಧವಾಯಿತು.


ಮೋಶೆಯ ಆಜ್ಞೆಯಂತೆ, ಸಬ್ಬತ್‍ದಿನ, ಅಮಾವಾಸ್ಯೆ, ಇವುಗಳಲ್ಲೂ ಹುಳಿರಹಿತ ರೊಟ್ಟಿಗಳ ಜಾತ್ರೆ, ಪಂಚಾಶತ್ತಮ ದಿನದ ಜಾತ್ರೆ, ಪರ್ಣಕುಟೀರಗಳ ಜಾತ್ರೆ ಎಂಬೀ ಮೂರು ವಾರ್ಷಿಕ ಜಾತ್ರೆಗಳಲ್ಲೂ ಆಯಾ ದಿವಸಗಳಿಗೆ ನೇಮಕವಾದ ದಹನಬಲಿಗಳನ್ನು ಸಮರ್ಪಿಸುತ್ತಿದ್ದನು.


ಸ್ವಾಮಿಯ ಅಪ್ಪಣೆಯ ಮೇರೆಗೆ ಮೋಶೆ ಅವರನ್ನು ಎಣಿಸಿದನು.


ಇಸ್ರಯೇಲರು ಸರ್ವೇಶ್ವರನ ಅಪ್ಪಣೆಯ ಪ್ರಕಾರ ಸೀನ್ ಎಂಬ ಮರುಭೂಮಿಯಿಂದ ಹೊರಟು ಮುಂದಕ್ಕೆ ಪ್ರಯಾಣ ಮಾಡಿ ರೆಫೀದೀಮಿನಲ್ಲಿ ಇಳಿದುಕೊಂಡರು.


ಬಳಿಕ ಯಕೋಬನು ಬೇರ್ಷೆಬದಿಂದ ಪ್ರಯಾಣ ಮಾಡಿದನು. ಯಕೋಬನ ಮಕ್ಕಳು ತಮ್ಮ ತಂದೆಯಾದ ಯಕೋಬನನ್ನು ಮತ್ತು ತಮ್ಮ ಮಡದಿಮಕ್ಕಳನ್ನು ಫರೋಹನು ಕಳಿಸಿದ್ದ ಬಂಡಿಗಳಲ್ಲಿ ಕೂರಿಸಿಕೊಂಡು ಹೊರಟರು..


ಆದರೆ ಜೋಸೆಫನು ಹೇಳಿಕಳಿಸಿದ ಎಲ್ಲ ಮಾತುಗಳನ್ನು ಕೇಳಿ, ತನ್ನ ಪ್ರಯಾಣಕ್ಕಾಗಿ ಅವನಿಂದ ಬಂದಿದ್ದ ಬಂಡಿಗಳನ್ನು ನೋಡಿ ಅವರ ತಂದೆ ಯಕೋಬನಿಗೆ ಹೊಸ ಜೀವ ಬಂದಿತು.


ಆಸ್ತಿಪಾಸ್ತಿಗಳ ವಿಷಯದಲ್ಲಿ ನೀವು ಚಿಂತಿಸಬೇಕಾಗಿಲ್ಲ. ಈಜಿಪ್ಟ್ ದೇಶದ ಅತ್ಯುತ್ತಮವಾದುವುಗಳು ನಿಮ್ಮದಾಗುವುವು'."


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು