Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:3 - ಕನ್ನಡ ಸತ್ಯವೇದವು C.L. Bible (BSI)

3 ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನಾನೇ ಜೋಸೆಫ್! ನನ್ನ ತಂದೆ ಇನ್ನೂ ಇದ್ದಾರೋ?” ಎಂದು ಕೇಳಿದ. ಅವರು ತತ್ತರಗೊಂಡು ಉತ್ತರಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು, “ತನ್ನ ಅಣ್ಣತಮ್ಮಂದಿರಿಗೆ ನಾನು ಯೋಸೇಫನು, ನನ್ನ ತಂದೆ ಇನ್ನೂ ಇದ್ದಾನೋ?” ಎಂದು ಹೇಳಲು ಅವರು ಅವನ ಮುಂದೆ ತತ್ತರಗೊಂಡು ಉತ್ತರಕೊಡಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ತನ್ನ ಅಣ್ಣಂದಿರಿಗೆ - ನಾನು ಯೋಸೇಫನು; ನನ್ನ ತಂದೆ ಇನ್ನೂ ಇದ್ದಾನೋ ಎಂದು ಹೇಳಲು ಅವರು ಅವನ ಮುಂದೆ ತತ್ತರಗೊಂಡು ಉತ್ತರಕೊಡಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೋಸೇಫನು ತನ್ನ ಸಹೋದರರಿಗೆ, “ನಾನು ನಿಮ್ಮ ತಮ್ಮನಾದ ಯೋಸೇಫ. ನನ್ನ ತಂದೆ ಚೆನ್ನಾಗಿದ್ದಾನೆಯೇ?” ಎಂದು ಕೇಳಿದನು. ಆದರೆ ಸಹೋದರರು ಅವನಿಗೆ ಉತ್ತರಿಸಲಿಲ್ಲ. ಅವರಿಗೆ ಭಯವಾಗಿತ್ತು ಮತ್ತು ಗಲಿಬಿಲಿಗೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೋಸೇಫನು ತನ್ನ ಸಹೋದರರಿಗೆ, “ನಾನು ಯೋಸೇಫನು! ನನ್ನ ತಂದೆಯು ಬದುಕಿದ್ದಾನೋ?” ಎಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ, ಅವನಿಗೆ ಉತ್ತರ ಕೊಡಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:3
14 ತಿಳಿವುಗಳ ಹೋಲಿಕೆ  

ಎರಡನೆಯ ಬಾರಿ ಅವರು ಬಂದಾಗ ಜೋಸೆಫನು ತನ್ನ ಗುರುತನ್ನು ಸಹೋದರರಿಗೆ ತಿಳಿಸಿದನು. ಆಗ ಫರೋಹನಿಗೆ ಜೋಸೆಫನ ವಂಶದ ಪರಿಚಯವಾಯಿತು.


ಆಗ ಅವನು, “ಪ್ರಭೂ, ನೀವಾರು?” ಎಂದನು. “ನೀನು ಹಿಂಸೆಪಡಿಸುತ್ತ ಇರುವ ಯೇಸುವೇ ನಾನು.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ಇದನ್ನು ಕಂಡ ಸಿಮೋನ್ ಪೇತ್ರನು ಯೇಸುವಿನ ಕಾಲಿಗೆ ಬಿದ್ದು, “ಸ್ವಾಮೀ, ನಾನು ಪಾಪಾತ್ಮ; ನನ್ನಿಂದ ದೂರವಿರಿ!” ಎಂದನು.


ತಕ್ಷಣವೇ ಯೇಸು ಅವರೊಡನೆ ಮಾತನಾಡುತ್ತಾ, “ಭಯಪಡಬೇಡಿ, ಬೇರೆ ಯಾರೂ ಅಲ್ಲ, ನಾನೇ; ಧೈರ್ಯದಿಂದಿರಿ,” ಎಂದು ಅವರೊಡನೆ ಮಾತಾಡಿ ದೋಣಿಯನ್ನು ಹತ್ತಿದರು.


ಈ ಕಾರಣ ಆತನ ಸನ್ನಿಧಿಯಲಿ ನಾನು ಅಂಜುಬುರುಕ ಇದನ್ನು ನೆನೆದು ಮನದಲಿ ನಾನು ಭಯಪೀಡಿತ.


ಈಗಲಾದರೂ ಆ ದುರಿತಗಳಿಂದ ನೀನೇ ಧೃತಿಗೆಟ್ಟಿರುವೆ ಅವು ನಿನಗೆ ತಗಲಿ ನೀನೇ ತಲ್ಲಣಗೊಂಡಿರುವೆ!


ನಾವು ಅವನನ್ನು ಕೊಂದು ಈ ಬಾವಿಯೊಂದರಲ್ಲಿ ಹಾಕಿಬಿಡೋಣ. 'ಕಾಡುಮೃಗ ಅವನನ್ನು ತಿಂದುಬಿಟ್ಟಿತು'; ಎಂದು ಹೇಳಿದರೆ ಆಯಿತು, ಬನ್ನಿ, ಆಗ ಅವನ ಕನಸುಗಳು ಏನಾಗುತ್ತವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.


ಆಗ ಅವರು ತಮ್ಮತಮ್ಮೊಳಗೆ, “ನಾವು ನಮ್ಮ ತಮ್ಮನಿಗೆ ಮಾಡಿದ ದ್ರೋಹಕ್ಕೆ ತಕ್ಕ ದಂಡನೆಯನ್ನು ಅನುಭವಿಸುತ್ತಿದ್ದೇವೆ. ಅವನು ನಮ್ಮನ್ನು ಕಳಕಳಿ ಬೇಡಿಕೊಂಡ. ಅವನ ಪ್ರಾಣಸಂಕಟವನ್ನು ತಿಳಿದೂ ನಾವು ಅವನ ಮೊರೆಗೆ ಕಿವಿಗೊಡಲಿಲ್ಲ. ಆದ್ದರಿಂದಲೆ ಈ ಸಂಕಟದಲ್ಲಿ ಸಿಕ್ಕಿಹಾಕಿಕೊಂಡು ಇದ್ದೇವೆ,” ಎಂದು ಮಾತಾಡಿಕೊಂಡರು.


ಅಂತೆಯೇ ರೂಬೇನನು, “ಆ ಹುಡುಗನಿಗೆ ಯಾವ ಕೇಡೂ ಮಾಡಬೇಡಿ’ ಎಂದು ನಾನು ಹೇಳಲಿಲ್ಲವೆ? ನೀವು ಕೇಳದೆಹೋದಿರಿ. ಅವನ ರಕ್ತ ಈಗ ನಮ್ಮಿಂದ ಪ್ರಾಯಶ್ಚಿತ್ತ ಕೇಳುತ್ತಿದೆ,” ಎಂದ.


ಅವನು ಅವರ ಯೋಗಕ್ಷೇಮವನ್ನು ವಿಚಾರಿಸಿದನು. ಬಳಿಕ, “ನೀವು ಹೇಳಿದ ಮುಪ್ಪುವಯಸ್ಸಿನ ನಿಮ್ಮ ತಂದೆ ಕ್ಷೇಮವೋ? ಇನ್ನು ಬದುಕಿದ್ದಾನೋ?" ಎಂದು ಕೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು