Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:4 - ಕನ್ನಡ ಸತ್ಯವೇದವು C.L. Bible (BSI)

4 ಜೋಸೆಫನು, “ಹತ್ತಿರಕ್ಕೆ ಬನ್ನಿ” ಎನ್ನಲು, ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ, “ಈಜಿಪ್ಟ್ ದೇಶಕ್ಕೆ ಹೋಗಲಿ" ಎಂದು ನೀವು ಮಾರಿಬಿಟ್ಟ ನಿಮ್ಮ ತಮ್ಮ ಜೋಸೆಫ್ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೋಸೇಫನು, “ನನ್ನ ಹತ್ತಿರಕ್ಕೆ ದಯಮಾಡಿ ಬನ್ನಿರಿ” ಎಂದು ಅಣ್ಣಂದಿರಿಗೆ ಹೇಳಲು ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ “ಐಗುಪ್ತ ದೇಶಕ್ಕೆ ಮಾರಿಬಿಟ್ಟ ನಿಮ್ಮ ತಮ್ಮನಾದ ಯೋಸೇಫನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೋಸೇಫನು - ನನ್ನ ಹತ್ತರಕ್ಕೆ ಬನ್ನಿರಿ ಎಂದು ತನ್ನಣ್ಣಂದಿರಿಗೆ ಹೇಳಲು ಅವರು ಹತ್ತರಕ್ಕೆ ಬಂದರು. ಅವನು ಅವರಿಗೆ - ಐಗುಪ್ತದೇಶಕ್ಕೆ ಸೇರುವಂತೆ ನೀವು ಮಾರಿಬಿಟ್ಟ ನಿಮ್ಮ ತಮ್ಮನಾದ ಯೋಸೇಫನೇ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೋಸೇಫನು ಮತ್ತೆ ತನ್ನ ಸಹೋದರರಿಗೆ, “ನನ್ನ ಬಳಿಗೆ ಬನ್ನಿ. ನನ್ನ ಹತ್ತಿರ ಬನ್ನಿ ಎಂದು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು. ಆದ್ದರಿಂದ ಸಹೋದರರು ಯೋಸೇಫನ ಹತ್ತಿರ ಹೋದರು. ಯೋಸೇಫನು ಅವರಿಗೆ, “ನಾನು ನಿಮ್ಮ ತಮ್ಮನಾದ ಯೋಸೇಫ. ನೀವು ಈಜಿಪ್ಟಿನವರಿಗೆ ಯಾವನನ್ನು ಗುಲಾಮನನ್ನಾಗಿ ಮಾರಿದಿರೋ ಅವನೇ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೋಸೇಫನು ತನ್ನ ಸಹೋದರರಿಗೆ, “ನನ್ನ ಬಳಿಗೆ ಬನ್ನಿರಿ,” ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು, “ನೀವು ಈಜಿಪ್ಟಿಗೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:4
5 ತಿಳಿವುಗಳ ಹೋಲಿಕೆ  

ಅಷ್ಟರಲ್ಲಿ, ಮಿದ್ಯಾನಿನ ವರ್ತಕರು ಹಾದುಹೋಗುತ್ತಿದ್ದರು. ಅವರು ಜೋಸೆಫನನ್ನು ಬಾವಿಯೊಳಗಿಂದ ಎತ್ತಿ ಈ ಇಷ್ಮಾಯೇಲರಿಗೆ ಇಪ್ಪತ್ತು ಬೆಳ್ಳಿನಾಣ್ಯಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದರು.


ಆಗ ಅವನು, “ಪ್ರಭೂ, ನೀವಾರು?” ಎಂದನು. “ನೀನು ಹಿಂಸೆಪಡಿಸುತ್ತ ಇರುವ ಯೇಸುವೇ ನಾನು.


ತಕ್ಷಣವೇ ಯೇಸು, “ಭಯಪಡಬೇಡಿ, ನಾನೇ ಬೇರೆ ಯಾರೂ ಅಲ್ಲ, ಧೈರ್ಯದಿಂದಿರಿ,” ಎಂದು ಅವರೊಡನೆ ಮಾತನಾಡಿದರು.


ಇದೂ ಅಲ್ಲದೆ, ಅಣ್ಣಂದಿರು ತಾವೇ ಬಂದು ಅವನಿಗೆ ಅಡ್ಡಬಿದ್ದರು. “ಇಗೋ, ನಾವು ನಿನಗೆ ಗುಲಾಮರು,” ಎಂದು ಹೇಳಿದರು.


“ಈ ಪಿತಾಮಹರು ಜೋಸೆಫನ ಮೇಲೆ ಮತ್ಸರ ತಾಳಿ ಅವನನ್ನು ಈಜಿಪ್ಟಿನವರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಅವನೊಂದಿಗೆ ಇದ್ದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು